Bengaluru ಉತ್ತರ ಭಾಗದ ಐವರಕಂಡಪುರ ಬಳಿ ಬೈಕ್ ಮತ್ತು ಅಶೋಕ ಲೇಲ್ಯಾಂಡ್ ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿಯಾಗಿ 24 ವರ್ಷದ ಪವನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Bengaluru : ಹುಟ್ಟುಹಬ್ಬದ ಸಂಭ್ರಮದ ದಿನವೇ ಯುವಕನೊಬ್ಬ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ನಗರದಲ್ಲಿ ನಡೆದಿದೆ. ಸ್ನೇಹಿತರೊಂದಿಗೆ ಹುಟ್ಟುಹಬ್ಬ ಆಚರಿಸಿ ಮನೆಗೆ ಮರಳುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ.
ಬೈಕ್–ಅಶೋಕ ಲೇಲ್ಯಾಂಡ್ ಮುಖಾಮುಖಿ ಡಿಕ್ಕಿ
ಮೃತ ಯುವಕನನ್ನು ಪವನ್ (24) ಎಂದು ಗುರುತಿಸಲಾಗಿದೆ. ಈತ ಬೆಂಗಳೂರು ಉತ್ತರ ಭಾಗದ ತೋಟದ ಗುಡ್ಡದಹಳ್ಳಿ ನಿವಾಸಿ. ಬೈಕ್ ಹಾಗೂ Ashok Leyland ಗೂಡ್ಸ್ ವಾಹನದ ನಡುವೆ ಮುಖಾಮುಖಿ ಡಿಕ್ಕಿಯಾಗಿ ಪವನ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಇದನ್ನು ಓದಿ : ಅಪರಿಚಿತ ವಾಹನ ಡಿಕ್ಕಿ – ಬೈಕ್ ಸವಾರ ಸ್ಥಳದಲ್ಲೇ ಸಾವು
ಘಟನೆ ಐವರಕಂಡಪುರ ಬಳಿ, ಸೋಲದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿನ್ನೆ ಸಂಜೆ ಸುಮಾರು 5:45ರ ವೇಳೆ ನಡೆದಿದೆ. ಹುಟ್ಟುಹಬ್ಬದ ಕಾರ್ಯಕ್ರಮ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

ಓವರ್ ಸ್ಪೀಡ್ ಕಾರಣವೇ?
ಪ್ರಾಥಮಿಕ ಮಾಹಿತಿಯ ಪ್ರಕಾರ, ಅತಿವೇಗದಲ್ಲಿ ಚಲಿಸುತ್ತಿದ್ದ ಗೂಡ್ಸ್ ವಾಹನ ಮತ್ತು ಬೈಕ್ ಸವಾರರ ಅಜಾಗರೂಕತೆ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಡಿಕ್ಕಿಯ ತೀವ್ರತೆಗೆ ಪವನ್ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾನೆ.

ಘಟನೆಯ ನಂತರ ಸೋಲದೇವನಹಳ್ಳಿ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿದಿದೆ.
ಇದನ್ನು ನೋಡಿ : TUMAKURU ಗುಳೂರು ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿನಿ ಬೆರಳು ಕಟ್ ಆಗಿದ್ದ ಕೇಸ್- ವರದಿ ಬೆನ್ನಲ್ಲೇ ದಾಖಲಾಯ್ತು FIR




