Ballari ಯಲ್ಲಿ ಯುವಕ ಹಾಗೂ ಮಂಗಳಮುಖಿ ನಡುವಣ ಲವ್ ಕಹಾನಿ ಈಗ ದುರಂತಮಯವಾಗಿದೆ.

Ballari ನಗರದ KMF ಡೈರಿ ಕ್ರಾಸ್ ಸಮೀಪದ ಬಾಡಿಗೆ ಮನೆಯಲ್ಲಿ ಪರಸ್ಪರ ಪ್ರೀತಿಸುತ್ತಿದ್ದ ಮಂಗಳಮುಖಿ ಮತ್ತು ಯುವಕ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ಮನೆಯ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರ ಶವಗಳು ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕಮೂಡಿಸಿದೆ.
ಮಂಗಳಮುಖಿ ಎಂದು ಗೊತ್ತಿದ್ದರೂ ಪ್ರೀತಿಯಲ್ಲಿ ಬಿದ್ದ ಯುವಕ
ಮೃತರನ್ನು ಸುಹಾಸಿನಿ (29) ಮತ್ತು ಶೇಖರ್ ಅಲಿಯಾಸ್ ಮಣಿ (31) ಎಂದು ಗುರುತಿಸಲಾಗಿದೆ. ಶೇಖರ್ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಮಲ್ಪನಗುಡಿ ಗ್ರಾಮದ ನಿವಾಸಿಯಾಗಿದ್ದು, ಆಟೋ ಚಾಲಕರಾಗಿ ಜೀವನ ನಡೆಸುತ್ತಿದ್ದರು. ಸುಹಾಸಿನಿ ಬಳ್ಳಾರಿ ತಾಲೂಕಿನ ಚಾಗನೂರು ಗ್ರಾಮದವರಾಗಿದ್ದರು. ಕಳೆದ ಆರು ವರ್ಷಗಳಿಂದ ಇಬ್ಬರೂ ಒಟ್ಟಿಗೆ ವಾಸವಾಗಿದ್ದರು. ಸುಹಾಸಿನಿ ಮಂಗಳಮುಖಿ ಎಂದು ತಿಳಿದಿದ್ದರೂ ಶೇಖರ್ ಪ್ರೀತಿಸುತ್ತಿದ್ದರು ಎಂದು ತಿಳಿದುಬಂದಿದೆ.
ಇದನ್ನು ಓದಿ : ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಸಾರಿಗೆ ನೌಕರನ ಹತ್ಯೆ..!

ಪೊಲೀಸರ ಪರಿಶೀಲನೆ
ಘಟನೆ ಕುರಿತು ಮಾಹಿತಿ ಪಡೆದ ಬ್ರೂಸ್ಪೇಟೆ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಶವಗಳನ್ನು ಮರಣೋತ್ತರ ಬಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನು ಈ ಘಟನೆ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಮಂಗಳಮುಖಿ ಸಮುದಾಯದ ಆರೋಪ
ಮಂಗಳಮುಖಿ ಸಮುದಾಯದ ಸದಸ್ಯರು ಶೇಖರ್ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಹಣಕ್ಕಾಗಿ ಸುಹಾಸಿನಿಯ ಜೊತೆ ಇದ್ದ ಶೇಖರ್, ನಂತರ ಕೊಲೆ ಮಾಡಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದಾರೆ. ಆದರೆ ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬುದರ ಬಗ್ಗೆ ಪೊಲೀಸರು ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.
ಇದನ್ನು ನೋಡಿ : ರಸ್ತೆ ದಾಟುವಾಗ ಯುವತಿಗೆ ಬೈಕ್ ಡಿಕ್ಕಿ ಅಪಘಾ*ದಲ್ಲಿ ಗಾಯಗೊಂಡು ಯುವತಿ ಸಾ*




