ವಿಧಾನಸೌಧದಲ್ಲಿ ಮಾಧ್ಯಮ ಪ್ರವೇಶಕ್ಕೆ ನಿರ್ಬಂಧ ಹೇರಿರುವ ಸರ್ಕಾರದ ಕ್ರಮದ ವಿರುದ್ಧ ಜೆಡಿಎಸ್ ಯುವ ಘಟಕದ ಅಧ್ಯಕ್ಷ Nikhil Kumaraswamy ತೀವ್ರ ಆಕ್ರೋಶ

ಬೆಂಗಳೂರು: ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ ಹೇರಿರುವ ಸರ್ಕಾರದ ಕ್ರಮಕ್ಕೆ ಜೆಡಿಎಸ್ ಯುವ ಘಟಕದ ಅಧ್ಯಕ್ಷ Nikhil Kumaraswamy ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಅವರು ಸಾಮಾಜಿಕ ಜಾಲತಾಣ X ನಲ್ಲಿ ಪ್ರತಿಕ್ರಿಯೆ ನೀಡಿ, ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

“ಅಭಿವ್ಯಕ್ತಿ ಸ್ವಾತಂತ್ರ್ಯ” ಕುರಿತು ಪ್ರಶ್ನೆ
ನಿಖಿಲ್ ಕುಮಾರಸ್ವಾಮಿ ತಮ್ಮ ಪೋಸ್ಟ್ನಲ್ಲಿ, ಕೈಯಲ್ಲಿ ಸಂವಿಧಾನದ ಪುಸ್ತಕ ಹಿಡಿದು ದೇಶಾದ್ಯಂತ ‘ಅಭಿವ್ಯಕ್ತಿ ಸ್ವಾತಂತ್ರ್ಯ’ದ ಬಗ್ಗೆ ಭಾಷಣ ಮಾಡುವ ರಾಹುಲ್ ಗಾಂಧಿ ಅವರು, ತಮ್ಮದೇ ಪಕ್ಷದ ಆಡಳಿತವಿರುವ ಕರ್ನಾಟಕದತ್ತ ಗಮನ ಹರಿಸಬೇಕೆಂದು ಹೇಳಿದ್ದಾರೆ.
ಅದರ ಜೊತೆಗೆ, ವಿಧಾನಸೌಧದಲ್ಲಿ ಮಾಧ್ಯಮಗಳ ಮೇಲೆ ನಿರ್ಬಂಧ ಹೇರಿರುವುದು ಯಾವ ಸಂವಿಧಾನಾತ್ಮಕ ನಿಯಮದಡಿ ಎಂಬುದನ್ನು ಪ್ರಶ್ನಿಸಿದ್ದಾರೆ.
ಇದನ್ನು ಓದಿ : ಅಪರಿಚಿತ ವಾಹನ ಡಿಕ್ಕಿ – ಬೈಕ್ ಸವಾರ ಸ್ಥಳದಲ್ಲೇ ಸಾವು

ಮಾಧ್ಯಮಗಳನ್ನು ಪಂಜರದಲ್ಲಿ ಇಡುವ ಪ್ರಯತ್ನವೆಂದು ಟೀಕಿಸಿದ ನಿಖಿಲ್, ಈ ಕ್ರಮವನ್ನು ‘ತುರ್ತು ಪರಿಸ್ಥಿತಿ’ಯ ಮುಂದುವರಿದ ಭಾಗ ಎಂದು ಕಿಡಿಕಾರಿದ್ದಾರೆ. ಜೊತೆಗೆ, ಮೊದಲು ಕರ್ನಾಟಕ ಸರ್ಕಾರಕ್ಕೆ ಸಂವಿಧಾನದ ಪಾಠ ಮಾಡಲಿ ಎಂದು ರಾಹುಲ್ ಗಾಂಧಿಗೆ ಸಲಹೆ ನೀಡಿದ್ದಾರೆ.

ರಾಜಕೀಯ ವಾಗ್ವಾದ ತೀವ್ರ
ಈ ವಿಚಾರದ ಮೇಲೆ ರಾಜ್ಯ ರಾಜಕೀಯ ವಲಯದಲ್ಲಿ ಚರ್ಚೆ ಜೋರಾಗಿದೆ. ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ವಿಧಿಸಿದ ನಿರ್ಬಂಧದ ಬಗ್ಗೆ ಮುಂದಿನ ದಿನಗಳಲ್ಲಿ ಮತ್ತಷ್ಟು ರಾಜಕೀಯ ಪ್ರತಿಕ್ರಿಯೆಗಳು ಎದುರಾಗುವ ಸಾಧ್ಯತೆ ಇದೆ.
ಇದನ್ನು ನೋಡಿ : TUMAKURU ಗುಳೂರು ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿನಿ ಬೆರಳು ಕಟ್ ಆಗಿದ್ದ ಕೇಸ್- ವರದಿ ಬೆನ್ನಲ್ಲೇ ದಾಖಲಾಯ್ತು FIR




