Breaking News : ಇಂದು ಸಾರಿಗೆ ನೌಕರರು ನಡೆಸುತ್ತಿದ್ದ ಮುಷ್ಕರದಿಂದ ಆತಂಕದಲ್ಲಿದ್ದ ರಾಜ್ಯದ ಪ್ರಯಾಣಿಕರಿಗೆ ಸಾರಿಗೆ ನೌಕರರು ಸಿಹಿ ಸುದ್ದಿ ನೀಡಿದ್ದಾರೆ. ನಾಳೆ ಯಾವುದೇ ಸಾರಿಗೆ ಮುಷ್ಕರ (Transport Strike) ನಡೆಸದಿರಲು ನೌಕರರ ಕೂಟ ತೀರ್ಮಾನಿಸಿದೆ.

Breaking News : ಇಂದು ರಾಜ್ಯಾದ್ಯಂತ ಸಾರಿಗೆ ನೌಕರರು ಬೆಂಗಳೂರು ಚಲೋ ಕರೆ ನೀಡಿರುವ ಹಿನ್ನೆಲೆ ಕೆಲವೆಡೆ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗಬಹುದು ಎಂಬ ನಿರೀಕ್ಷೆ ವ್ಯಕ್ತವಾಗಿತ್ತು. ಅಲ್ದೇ ಸಂಜೆಯಿಂದಲೇ ಬಸ್ ಸಂಚಾರ ಬಂದ್ ಮಾಡ್ತೇವೆ ಎಂದಿದ್ದರು.
ನಾಳೆಯಿಂದ ಬಸ್ ಇರುತ್ತೋ, ಇಲ್ವೋ ಎಂಬ ಆತಂಕದಲ್ಲಿದ್ದ ರಾಜ್ಯದ ಪ್ರಯಾಣಿಕರಿಗೆ ಸಾರಿಗೆ ನೌಕರರು ಸಿಹಿ ಸುದ್ದಿ ನೀಡಿದ್ದಾರೆ. ನಾಳೆ ಯಾವುದೇ ಸಾರಿಗೆ ಮುಷ್ಕರ ನಡೆಸದಿರಲು ನೌಕರರ ಕೂಟ ತೀರ್ಮಾನಿಸಿದೆ.
ಹೀಗಾಗಿ KSRTC ಮತ್ತು BMTC ಬಸ್ಗಳ ಸಂಚಾರದಲ್ಲಿ ಯಾವುದೇ ವ್ಯತ್ಯಯವಾಗುವುದಿಲ್ಲ. ಇಂದು ಬೆಂಗಳೂರು ನಗರದ Freedom Parkನಲ್ಲಿ ನಡೆದ ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿಯ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಸರ್ಕಾರದ ಭರವಸೆಗಳು ಹಾಗೂ ಮುಂದಿನ ಹೋರಾಟದ ರೂಪುರೇಷೆಗಳ ಕುರಿತು ಸುದೀರ್ಘ ಚರ್ಚೆ ನಡೆಸಿ, ಸಾರ್ವಜನಿಕರಿಗೆ ತೊಂದರೆ ಕೊಡಬಾರದು ಎಂಬ ಉದ್ದೇಶದಿಂದ ಸದ್ಯಕ್ಕೆ ಬಸ್ ಸಂಚಾರ ಬಂದ್ ಮಾಡದಿರಲು ನಿರ್ಧರಿಸಲಾಗಿದೆ.
ಆದರೆ ಹೋರಾಟವನ್ನು ಸಂಪೂರ್ಣವಾಗಿ ಕೈಬಿಡುವುದಿಲ್ಲ ಎಂದು ನೌಕರರು ಸ್ಪಷ್ಟಪಡಿಸಿದ್ದಾರೆ. ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಮಾರ್ಚ್ 2ರಂದು ರಾಜ್ಯಾದ್ಯಂತ ‘ಉಪವಾಸ ಸತ್ಯಾಗ್ರಹ’ ನಡೆಸಲು ತೀರ್ಮಾನಿಸಲಾಗಿದೆ. ಹಾಸನ, ಚಿಕ್ಕಮಗಳೂರು ಸೇರಿದಂತೆ ವಿವಿಧ ಜಿಲ್ಲಾ ಕೇಂದ್ರಗಳಲ್ಲಿ ಈ ಹೋರಾಟ ನಡೆಯಲಿದೆ.
ಇದನ್ನೂ ಓದಿ : ಸಾರಿಗೆ ನೌಕರರು ಮುಷ್ಕರ ಕೈಬಿಡುವಂತೆ DK Shivakumar ಮನವಿ..!!

ಒಟ್ಟಿನಲ್ಲಿ, ನಾಳೆ ಎಂದಿನಂತೆ ಬಸ್ ಸಂಚಾರ ಇರಲಿದ್ದು, ಪ್ರಯಾಣಿಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಒಕ್ಕೂಟದ ಮುಖಂಡರು ತಿಳಿಸಿದ್ದಾರೆ.
MUST WATCH : ರಾಜ್ಯಾದ್ಯಂತ ಸಾರಿಗೆ ನೌಕರರ ಮುಷ್ಕರ ತುಮಕೂರಿನಲ್ಲಿ ಹೇಗಿತ್ತು ಸಾರಿಗೆ ಸಂಚಾರ




