Bengaluru ಹೆಣ್ಣೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಿಯಕರನ ಸಾಲ ತೀರಿಸಲು ಮನೆಕೆಲಸದಾಕೆ ಚಿನ್ನಾಭರಣ ಕಳ್ಳತನ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ.

Bengaluru : ಪ್ರಿಯಕರನ ಸಾಲ ತೀರಿಸಲು ಮಹಿಳೆಯೊಬ್ಬಳು ಮನೆ ಕೆಲಸ ಮಾಡುವ ಮನೆಯಲ್ಲೇ ಚಿನ್ನಾಭರಣ ಕಳ್ಳತನ ಮಾಡಿದ ಘಟನೆ ಬೆಳಕಿಗೆ ಬಂದಿದೆ.
ಸುಮಾರು 3.4 ಲಕ್ಷ ರೂ. ಮೌಲ್ಯದ 35 ಗ್ರಾಂ ಚಿನ್ನಾಭರಣ ಕಳವು ಪ್ರಕರಣದಲ್ಲಿ ಆರೋಪಿತೆಯನ್ನು ಪೊಲೀಸರು ಬಂಧಿಸಿದ್ದಾರೆ.
ನಗರದ ಬೆಂಗಳೂರು (Bengaluru) ಉತ್ತರ ಭಾಗದ ಬಾಬುಸಾಪಾಳ್ಯ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಪ್ರಕರಣ ಹೆಣ್ಣೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದ್ದು, ತನಿಖೆ ನಡೆಸಿದ ಪೊಲೀಸರು ಆರೋಪಿತೆಯನ್ನು ಬಂಧಿಸಿದ್ದಾರೆ.
ಆರೋಪಿತೆ ಮತ್ತು ಪ್ರಿಯಕರ ಗುರುತು
ಬಂಧಿತ ಮಹಿಳೆಯನ್ನು ಪ್ರಮೀಳಾ ಎಂದು ಗುರುತಿಸಲಾಗಿದೆ. ಆಕೆಯ ಪ್ರಿಯಕರ ಸುಧಾಕರ್ ಎನ್ನಲಾಗಿದ್ದು, ಅವನ ಸಾಲ ತೀರಿಸಲು ಕಳ್ಳತನ ನಡೆಸಿದ್ದಳು ಎಂದು ಪೊಲೀಸ್ ತನಿಖೆಯಲ್ಲಿ ತಿಳಿದುಬಂದಿದೆ.
ಕಳವು ಮಾಡಿದ ಚಿನ್ನಾಭರಣವನ್ನು ಮಾರಾಟ ಮಾಡಿ ಬಂದ ಹಣವನ್ನು ಪ್ರಿಯಕರನಿಗೆ ನೀಡಿದ್ದಾಳೆ ಎನ್ನಲಾಗಿದೆ.
ಇದನ್ನು ಓದಿ : `Toxic’ ನ ರಣರೋಚಕ ಟೀಸರ್ ರಿಲೀಸ್ – ದ್ವಿಪಾತ್ರದಲ್ಲಿ ಕಾಣಿಸಿಕೊಂಡ ಯಶ್
ಕೆಲಸದ ಸ್ಥಳದಲ್ಲೇ ಕಳ್ಳತನದ ಪ್ಲಾನ್
ಪ್ರಮೀಳಾ ಮೊದಲು ಗಾರ್ಮೆಂಟ್ಸ್ನಲ್ಲಿ ಕೆಲಸ ಮಾಡುವಾಗ ಸುಧಾಕರ್ ಜೊತೆ ಪರಿಚಯವಾಗಿ ಪ್ರೀತಿಯಾಗಿತ್ತು. ಬಳಿಕ ಕೆಲಸ ಬಿಟ್ಟು ಖಾಸಗಿ ಅಪಾರ್ಟ್ಮೆಂಟ್ನಲ್ಲಿ ಮನೆಕೆಲಸ ಮಾಡುತ್ತಿದ್ದರು.
ಸಂಕ್ರಾಂತಿ ಹಬ್ಬದ ವೇಳೆ ಸುಧಾಕರ್ ಸಾಲ ತೀರಿಸಲು 20 ಸಾವಿರ ರೂ. ಕೇಳಿದಾಗ, ಕೆಲಸ ಮಾಡುತ್ತಿದ್ದ ಮನೆಯಲ್ಲೇ ಚಿನ್ನಾಭರಣ ಕಳವು ಮಾಡುವ ನಿರ್ಧಾರಕ್ಕೆ ಬಂದಿದ್ದಳು.

ಒಂದು ತಿಂಗಳ ಬಳಿಕ ಬೆಳಕಿಗೆ ಬಂದ ಕಳ್ಳತನ
ಕಳ್ಳತನ ನಡೆದ ಸುಮಾರು ಒಂದು ತಿಂಗಳ ಬಳಿಕ ಮನೆ ಮಾಲೀಕರಿಗೆ ಚಿನ್ನಾಭರಣ ಕಣ್ಮರೆಯಾಗಿರುವುದು ಗೊತ್ತಾಯಿತು. ತಕ್ಷಣವೇ ಪೊಲೀಸ್ ಠಾಣೆಗೆ ದೂರು ನೀಡಿದರು. ಆರಂಭದಲ್ಲಿ ತನಗೆ ಯಾವುದೇ ಮಾಹಿತಿ ಇಲ್ಲವೆಂದು ಪ್ರಮೀಳಾ ನಾಟಕವಾಡಿದ್ದಾಳೆ.
ಪೊಲೀಸರು ಕಟ್ಟುನಿಟ್ಟಿನ ವಿಚಾರಣೆ ನಡೆಸಿದಾಗ ಆರೋಪಿತೆ ಕೊನೆಗೆ ಕಳ್ಳತನ ಮಾಡಿರುವುದನ್ನು ಒಪ್ಪಿಕೊಂಡಿದ್ದಾಳೆ. ಬಳಿಕ ಪೊಲೀಸರು 35 ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.
ಇದನ್ನು ನೋಡಿ : ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳು ಪರದಾಟ- ಸೇವೆ ಸಿಗದೇ ಕಂಗಾಲಾದ್ರು




