Chikkaballapura : ಸುಟ್ಟ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ.

Chikkaballapura ಜಿಲ್ಲೆ ಗೌರಿಬಿದನೂರು ತಾಲೂಕಿನ ತೊಂಡೆಬಾವಿ ಸಮೀಪ ಸುಮಾರು 50 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯ ಶವ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಬೆಂಕಿ ಹಚ್ಚಿ ಕೊಲೆ?
ತಾನೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನಾ..? ಅಥವಾ ಯಾರಾದರೂ ಬೆಂಕಿ ಹಚ್ಚಿ ಕೊಲೆ ಮಾಡಿದ್ದಾರಾ ಎಂಬ ಶಂಕೆ ವ್ಯಕ್ತವಾಗಿದ್ದು, ಪೊಲೀಸರ ತನಿಖೆ ಬಳಿಕ ಸತ್ಯ ಹೊರಬರಬೇಕಿದೆ.
ಇದನ್ನು ಓದಿ : ಮಂತ್ರಾಲಯಕ್ಕೂ ತಟ್ಟಿದ ನೀರಿನ ಸಮಸ್ಯೆ – ಭಕ್ತರ ಪುಣ್ಯಸ್ನಾನಕ್ಕೂ ಪರದಾಟ

ಪ್ರಕರಣ ದಾಖಲು
ಇನ್ನು ಮೂಲಗಳ ಪ್ರಕಾರ ಮೃತಪಟ್ಟ ಅಪರಿಚಿತ ವ್ಯಕ್ತಿ ನಿನ್ನೆ ತಡರಾತ್ರಿ ಕಾಮಲಾಪುರದ ಪೆಟ್ರೋಲ್ ಬಂಕ್ನಲ್ಲಿ ಪೆಟ್ರೋಲ್ ಖರೀದಿಸಿದ್ದಾಗಿ ತಿಳಿದು ಬಂದಿದೆ. ಈ ಸಂಬಂಧ ಮಂಚೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತನ ಗುರುತು ಪತ್ತೆ ಹಚ್ಚಲು ಪೊಲೀಸರು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

ಇದನ್ನು ನೋಡಿ : ತುಮಕೂರು ಜಿಲ್ಲಾ ಜೆಡಿಎಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ




