Bagalkote ಯಲ್ಲಿ ನಡೆದ ಕಲ್ಲು ತೂರಾಟ ಘಟನೆಗೆ ಸಂಬಂಧಿಸಿ ದುಷ್ಕೃತ್ಯ ಎಸಗಿದವರ ವಿರುದ್ಧ ಕಾನೂನು ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

Bagalkote ಜಿಲ್ಲೆಯಲ್ಲಿ ನಡೆದ ಕಲ್ಲು ತೂರಾಟ ಘಟನೆ ರಾಜ್ಯದಲ್ಲಿ ಆತಂಕ ಮೂಡಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಕಾನೂನು ಕ್ರಮ ಕೈಗೊಳ್ಳಲು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಸಮಾಜದ ಶಾಂತಿ ಹಾಗೂ ಸೌಹಾರ್ದತೆಗೆ ಧಕ್ಕೆ ತರುವ ಇಂತಹ ದುಷ್ಕೃತ್ಯಗಳನ್ನು ಸರ್ಕಾರ ಸಹಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಘಟನೆ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ ಮೂಲಕ ಮಾಹಿತಿ ಹಂಚಿಕೊಂಡ ಸಿಎಂ, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ತಿಳಿಸಿದ್ದಾರೆ. ಈಗಾಗಲೇ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಸೂಚನೆ ನೀಡಲಾಗಿದೆ. ತಪ್ಪಿತಸ್ಥರನ್ನು ಕಾನೂನಿನ ಮೂಲಕ ಕಟ್ಟುನಿಟ್ಟಾಗಿ ಶಿಕ್ಷೆಗೆ ಒಳಪಡಿಸುವುದಾಗಿ ಹೇಳಿದ್ದಾರೆ.
ಇದನ್ನು ಓದಿ : `Toxic’ ನ ರಣರೋಚಕ ಟೀಸರ್ ರಿಲೀಸ್ – ದ್ವಿಪಾತ್ರದಲ್ಲಿ ಕಾಣಿಸಿಕೊಂಡ ಯಶ್

ಆರೋಪಿಗಳ ಬಂಧನ, ವಿಚಾರಣೆ ಮುಂದುವರಿಕೆ
ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ಆರೋಪಿಗಳನ್ನು ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ಘಟನೆಯ ಹಿಂದೆ ಇರುವ ಪ್ರತಿಯೊಬ್ಬ ವ್ಯಕ್ತಿಯನ್ನೂ ಗುರುತಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸರ್ಕಾರ ಭರವಸೆ ನೀಡಿದೆ.

ರಾಜ್ಯದಲ್ಲಿ ಜನರು ಭಯವಿಲ್ಲದೆ ಬದುಕುವುದು ಸರ್ಕಾರದ ಮೊದಲ ಆದ್ಯತೆ ಎಂದು ಸಿಎಂ ತಿಳಿಸಿದ್ದಾರೆ. ಶಾಂತಿ ಮತ್ತು ನೆಮ್ಮದಿಗೆ ಧಕ್ಕೆ ತರುವ ಯಾವುದೇ ವ್ಯಕ್ತಿ ಅಥವಾ ಸಂಘಟನೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಸಾರ್ವಜನಿಕರು ಯಾವುದೇ ರೀತಿಯ ಪ್ರಚೋದನೆಗಳಿಗೆ ಒಳಗಾಗದೇ ಸಂಯಮದಿಂದ ವರ್ತಿಸಬೇಕು ಎಂದು ಮುಖ್ಯಮಂತ್ರಿ ಮನವಿ ಮಾಡಿದ್ದಾರೆ. ಪೊಲೀಸ್ ಇಲಾಖೆ ತನ್ನ ಕರ್ತವ್ಯವನ್ನು ನಿಷ್ಪಕ್ಷಪಾತವಾಗಿ ನಿರ್ವಹಿಸಲಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಇದನ್ನು ನೋಡಿ : ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳು ಪರದಾಟ- ಸೇವೆ ಸಿಗದೇ ಕಂಗಾಲಾದ್ರು




