Bengaluru : ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಪ್ತ ಕಾರ್ಯದರ್ಶಿ ಚಂದ್ರು ಮಗ Suicide.

ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಪರ್ಸನಲ್ ಸೆಕ್ರೆಟರಿ ಚಂದ್ರು ಅವರ ಪುತ್ರ ಹೇಮಂತ್ (20) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಫ್ಯಾನಿಗೆ ನೇಣು ಬಿಗಿದುಕೊಂಡು Suicide
ನಗರದ ಆರ್ಎಂವಿ ಎರಡನೇ ಹಂತದಲ್ಲಿರುವ ನಿವಾಸದಲ್ಲಿ ಹೇಮಂತ್ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಈ ಘಟನೆ ಕಳೆದ ರಾತ್ರಿ ಘಟನೆ ನಡೆದಿದ್ದು, ಕುಟುಂಬಸ್ಥರು ಆಘಾತಗೊಂಡಿದ್ದಾರೆ. ಹೇಮಂತ್ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.
ಇದನ್ನು ಓದಿ : ಸ್ನೇಹಮಯಿ ಕೃಷ್ಣ ಬಂಧನ ದುರಾಡಳಿತಕ್ಕೆ ಸಾಕ್ಷಿ – R Ashok ಕಿಡಿ..!

ಲೊಟ್ಟೆಗೊಲ್ಲಹಳ್ಳಿಯಲ್ಲಿ ಘಟನೆ
ಬೆಂಗಳೂರಿನ ಸಂಜಯನಗರ ಲೊಟ್ಟೆಗೊಲ್ಲಹಳ್ಳಿಯಲ್ಲಿ ಘಟನೆ ನಡೆದಿದೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರಾಮಯ್ಯ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಘಟನಾ ಸ್ಥಳಕ್ಕೆ ಸಂಜಯನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಪೊಲೀಸರು ಕುಟುಂಬಸ್ಥರಿಂದಲೂ ಮಾಹಿತಿ ಕಲೆ ಹಾಕುತ್ತಿದ್ದಾರೆ.

ಇದನ್ನು ನೋಡಿ : ಮುಡಾ ಕೇಸ್ ಸ್ನೇಹಮಯಿ ಕೃಷ್ಣ ಅರೆಸ್ಟ್ -ಲಂಚ ಪಡೆದ ಆರೋಪದ ಮೇಲೆ ವಶಕ್ಕೆ




