Ramanagara ದಲ್ಲಿ ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಕಲ್ಲು ಎತ್ತಿಹಾಕಿ ಹತ್ಯೆ ಮಾಡಿದ ಭೀಕರ ಘಟನೆ ನೆಡೆದಿದೆ..!!

Ramanagara : ಕೌಟುಂಬಿಕ ಕಲಹ ಹಾಗೂ ಅನೈತಿಕ ಸಂಬಂಧದ ಶಂಕೆ ಹಿನ್ನೆಲೆ ಪತ್ನಿಯನ್ನು ಪತಿಯೇ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ಕಗ್ಗಲೀಪುರ ಪೊಲೀಸ್ ಠಾಣಾ ವ್ಯಾಪ್ತಿಯ ಕುಳ್ಳೇಗೌಡನಪಾಳ್ಯದಲ್ಲಿ ನಡೆದಿದೆ. ಈ ಘಟನೆ ಸ್ಥಳೀಯರಲ್ಲಿ ಆತಂಕ ಉಂಟುಮಾಡಿದೆ.
ಮೃತ ಮಹಿಳೆಯನ್ನು ಸಿಂಚನ (21) ಎಂದು ಗುರುತಿಸಲಾಗಿದೆ. ಪತಿ ರೇಣುಕಯ್ಯ ಎಂಬಾತನೇ ಪತ್ನಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಪತ್ನಿಯ ಶೀಲದ ಬಗ್ಗೆ ಅನುಮಾನ ಹೊಂದಿದ್ದ ಆತ ಆಗಾಗ್ಗೆ ಜಗಳ ಮಾಡುತ್ತಿದ್ದ ಎನ್ನಲಾಗಿದೆ.
ಇದನ್ನು ಓದಿ : ಬಸವರಾಜ್ ಬೊಮ್ಮಾಯಿ ಪರ್ಸನಲ್ ಸೆಕ್ರೆಟರಿ ಪುತ್ರ Suicide

ಗಲಾಟೆ ತೀವ್ರಗೊಂಡು ನಡೆದ ಹತ್ಯೆ
ಶುಕ್ರವಾರ (ಫೆಬ್ರವರಿ 20) ದಂಪತಿಗಳ ನಡುವೆ ನಡೆದ ಜಗಳ ತೀವ್ರಗೊಂಡಿದ್ದು, ಮನೆ ಮುಂದೆ ಕೋಪದ ಆವೇಶದಲ್ಲಿ ಕಲ್ಲು ಎತ್ತಿಹಾಕಿ ಪತ್ನಿಯನ್ನು ಹತ್ಯೆ ಮಾಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಘಟನೆ ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ.
ಪೊಲೀಸರ ತನಿಖೆ ಚುರುಕು
ಘಟನೆಯ ಮಾಹಿತಿ ತಿಳಿದ ತಕ್ಷಣ ಬೆಂಗಳೂರು ದಕ್ಷಿಣ ವಿಭಾಗದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದೆ. ಆರೋಪಿ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ವೇಗಗೊಳಿಸಿದ್ದಾರೆ.
ಇದನ್ನು ನೋಡಿ : ಕೆಲಸದ ಮೇಲಿನ ಆಸೆನಾ..? ದುಡ್ಡಿನ ಆಸೆನಾ..? – ವಿಧವೆ ಮಹಿಳೆಯನ್ನು ಕೊಂ* ಡ್ರಾಮಾ




