ಬಾಗಲಕೋಟೆ ಬಳಿಕ ಇದೀಗ ಕಲಬುರಗಿಯಲ್ಲಿ ಛತ್ರಪತಿ Shivaji Jayanti ಆಚರಣೆ ವೇಳೆ ಡಿಜೆ ಸೌಂಡ್ ವಿಚಾರಕ್ಕೆ ಎರಡು ಸಮುದಾಯಗಳ ನಡುವೆ ಗಲಾಟೆ.

ಬಾಗಲಕೋಟೆ ಬಳಿಕ ಇದೀಗ ಕಲಬುರಗಿ ಜಿಲ್ಲೆಯಲ್ಲೂ Shivaji Jayanti ಆಚರಣೆ ವೇಳೆ ಎರಡು ಸಮುದಾಯಗಳ ನಡುವೆ ಘರ್ಷಣೆ ನಡೆದ ಘಟನೆ ಬೆಳಕಿಗೆ ಬಂದಿದೆ. ಈ ಘಟನೆಯಲ್ಲಿ ಮೂವರುರಿಂದ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಗ್ರಾಮದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.
ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ರಾವೂರ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ಗೋಕುಲ ನಗರದಲ್ಲಿರುವ ಗಣೇಶ್ ಕಟ್ಟೆಯ ಮೇಲೆ ಶಿವಾಜಿ ಮಹಾರಾಜರ ಭಾವಚಿತ್ರ ಇಟ್ಟು ಜಯಂತಿ ಆಚರಣೆ ನಡೆಯುತ್ತಿತ್ತು.
ಇದನ್ನು ಓದಿ : ಬಸವರಾಜ್ ಬೊಮ್ಮಾಯಿ ಪರ್ಸನಲ್ ಸೆಕ್ರೆಟರಿ ಪುತ್ರ Suicide

ಡಿಜೆ ಸೌಂಡ್ ವಿಚಾರಕ್ಕೆ ಆರಂಭವಾದ ಗಲಾಟೆ
ಜಯಂತಿ ಅಂಗವಾಗಿ ಡಿಜೆ ಹಾಕಿ ಯುವಕರು ನೃತ್ಯ ಮಾಡುತ್ತಿದ್ದ ವೇಳೆ ಮತ್ತೊಂದು ಸಮುದಾಯದವರು ಸೌಂಡ್ ಕಡಿಮೆ ಮಾಡುವಂತೆ ಹೇಳಿದ್ದು ಗಲಾಟೆಗೆ ಕಾರಣವಾಗಿದೆ. ಆರಂಭದಲ್ಲಿ ಮಾತಿನ ಚಕಮಕಿ ನಡೆದಿದ್ದು, ಬಳಿಕ ಪರಿಸ್ಥಿತಿ ತೀವ್ರಗೊಂಡು ಎರಡು ಸಮುದಾಯಗಳ ನಡುವೆ ಕಟ್ಟಿಗೆ ಮತ್ತು ಕಲ್ಲುಗಳಿಂದ ಹೊಡೆದಾಟ ನಡೆದಿದೆ.

ಘರ್ಷಣೆಯಲ್ಲಿ ಮೂವರುರಿಂದ ನಾಲ್ವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಘಟನೆ ವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ನಿಯಂತ್ರಿಸಿದರು.
ನಂತರ ಹಿರಿಯರು ಮತ್ತು ಪೊಲೀಸರ ಮಧ್ಯಸ್ಥಿಕೆಯಲ್ಲಿ ಎರಡು ಸಮುದಾಯಗಳ ನಡುವೆ ಸಂಧಾನ ನಡೆದಿದೆ. ಪರಿಣಾಮವಾಗಿ ಎರಡೂ ಕಡೆಯವರು ಯಾವುದೇ ಅಧಿಕೃತ ದೂರು ದಾಖಲಿಸಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಇದನ್ನು ನೋಡಿ : ಕೆಲಸದ ಮೇಲಿನ ಆಸೆನಾ..? ದುಡ್ಡಿನ ಆಸೆನಾ..? – ವಿಧವೆ ಮಹಿಳೆಯನ್ನು ಕೊಂ* ಡ್ರಾಮಾ




