Bengaluru : ಚಾಕೊಲೇಟ್ ಆಸೆ ತೋರಿಸಿ ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ 64 ವರ್ಷದ ವೃದ್ಧ ಬಂಧನ…

Bengaluru : ಚಾಕೊಲೇಟ್ ಆಸೆ ತೋರಿಸಿ ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ 64 ವರ್ಷದ ವೃದ್ಧನನ್ನು ಪೊಲೀಸರು ಬಂಧಿಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ಆನೇಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಪೋಷಕರು ಬೆಳಗ್ಗೆ ಸುಮಾರು 8:30ಕ್ಕೆ ಮಕ್ಕಳನ್ನು ಶಾಲೆಗೆ ಬಿಟ್ಟು ಕೂಲಿ ಕೆಲಸಕ್ಕೆ ತೆರಳುತ್ತಿದ್ದರು. ಆದರೆ ಶಾಲೆ 10 ಗಂಟೆಗೆ ಆರಂಭವಾದರೂ ಬಾಲಕಿಯರು ಬೇಗ ಬರುತ್ತಿರುವುದನ್ನು ಗಮನಿಸಿದ ಆರೋಪಿ, ಚಾಕೊಲೇಟ್ ಆಸೆ ತೋರಿಸಿ ಮಕ್ಕಳನ್ನು ತನ್ನ ಬಳಿಗೆ ಕರೆಸಿಕೊಂಡು ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ.
ಇದನ್ನು ಓದಿ : ಬಸವರಾಜ್ ಬೊಮ್ಮಾಯಿ ಪರ್ಸನಲ್ ಸೆಕ್ರೆಟರಿ ಪುತ್ರ Suicide
ಬಾಲಕಿಯ ಹೇಳಿಕೆಯಿಂದ ಬಯಲಾದ ಸತ್ಯ
ಶುಕ್ರವಾರ ಎರಡನೇ ತರಗತಿಯ ವಿದ್ಯಾರ್ಥಿನಿಗೆ ವೃದ್ಧ ಲೈಂಗಿಕ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ. ಮನೆಗೆ ಹೋದ ಬಳಿಕ ಬಾಲಕಿ ಈ ವಿಷಯವನ್ನು ಪೋಷಕರಿಗೆ ತಿಳಿಸಿದ್ದಾಳೆ. ಬಳಿಕ ವಿಚಾರಣೆ ನಡೆಸಿದ ವೇಳೆ ಇನ್ನೂ ಮೂವರು ಮಕ್ಕಳಿಗೂ ಇದೇ ರೀತಿಯ ಕಿರುಕುಳ ನೀಡಿರುವುದು ಬೆಳಕಿಗೆ ಬಂದಿದೆ.

ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲು
ಘಟನೆ ಸಂಬಂಧ ಆನೇಕಲ್ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಯನ್ನು ಬಂಧಿಸಿರುವ ಪೊಲೀಸರು ಮುಂದಿನ ತನಿಖೆಯನ್ನು ಮುಂದುವರಿಸಿದ್ದಾರೆ.
ಇದನ್ನು ನೋಡಿ : ಕೆಲಸದ ಮೇಲಿನ ಆಸೆನಾ..? ದುಡ್ಡಿನ ಆಸೆನಾ..? – ವಿಧವೆ ಮಹಿಳೆಯನ್ನು ಕೊಂ* ಡ್ರಾಮಾ




