Bengaluru ದಲ್ಲಿ ವೈರಲ್ ಆಡಿಯೋ ಪ್ರಕರಣ ಸಂಬಂಧ ಆರ್ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣರನ್ನು ಸೈಬರ್ ಕ್ರೈಂ ಪೊಲೀಸರು 20 ಗಂಟೆಗಳ ಸುದೀರ್ಘ ವಿಚಾರಣೆ ನಡೆಸಿ ಬಿಡುಗಡೆ ಮಾಡಿದ್ದಾರೆ.

Bengaluru : ತೀವ್ರ ಹಾಗೂ ಸುದೀರ್ಘ ವಿಚಾರಣೆ ಬಳಿಕ ಆರ್ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಸೈಬರ್ ಕ್ರೈಂ ಪೊಲೀಸರು ಬಿಡುಗಡೆ ಮಾಡಿದ್ದಾರೆ. ಸುಮಾರು 20 ಗಂಟೆಗಳ ಕಾಲ ನಡೆದ ವಿಚಾರಣೆ ಬಳಿಕ ಅವರನ್ನು ಬಿಟ್ಟು ಕಳುಹಿಸಲಾಗಿದೆ ಎಂದು ತಿಳಿದುಬಂದಿದೆ.
ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಲಂಚ ನೀಡಿ ಮುಡಾ ಮಾಜಿ ಆಯುಕ್ತ ನಟೇಶ್ ಮುಂಬಡ್ತಿ ಪಡೆದಿದ್ದಾರೆ ಎಂಬ ಆರೋಪದ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಆಡಿಯೋವನ್ನು ಸ್ನೇಹಮಯಿ ಕೃಷ್ಣ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು.
ಇದರಿಂದ ತಮ್ಮ ವಿರುದ್ಧ ಅಪಪ್ರಚಾರ ಮಾಡಲಾಗಿದೆ ಎಂದು ಆರೋಪಿಸಿ ನಟೇಶ್ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದರು.
ಇದನ್ನು ಓದಿ : ಏ.1ರಿಂದ ಟೋಲ್ಗಳಲ್ಲಿ ನಗದು ಪಾವತಿ ಇಲ್ಲ?

ಎಫ್ಐಆರ್ ದಾಖಲಿಸಿ ಬಂಧನ ಕ್ರಮ
ದೂರು ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿ, ಆಡಿಯೋ ಸೃಷ್ಟಿ ಮಾಡಿದ ಆರೋಪದಡಿ ಮೈಸೂರು ಮೂಲದ ವಿನೋದ್ ಎಂಬಾತನನ್ನು ಬಂಧಿಸಿದ್ದಾರೆ. ಇದೇ ಪ್ರಕರಣದಲ್ಲಿ ಆರೋಪಿಯಾಗಿರುವ ಸ್ನೇಹಮಯಿ ಕೃಷ್ಣರಿಗೆ ನೋಟಿಸ್ ನೀಡಿ ವಿಚಾರಣೆಗೆ ಕರೆಯಲಾಗಿತ್ತು. ಬಳಿಕ ಅವರನ್ನು ಸೈಬರ್ ಕ್ರೈಂ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದರು.

ಆಡಿಯೋವನ್ನು ಯಾರು ಸೃಷ್ಟಿಸಿದರು? ಮೂಲ ಆಡಿಯೋ ಎಲ್ಲಿಂದ ಸಿಕ್ಕಿತು? ಅದನ್ನು ಯಾರಿಂದ ಪಡೆದಿರಿ? ಎಂಬಂತೆ ಹಲವು ಪ್ರಶ್ನೆಗಳನ್ನು ಕೇಳಿ ಪೊಲೀಸರು ವಿವರವಾದ ಮಾಹಿತಿ ಸಂಗ್ರಹಿಸಿದ್ದಾರೆ. ಪ್ರಕರಣದ ವಿವಿಧ ಆಯಾಮಗಳನ್ನು ಪರಿಶೀಲಿಸುವ ಉದ್ದೇಶದಿಂದ ವಿಚಾರಣೆ ನಡೆಸಲಾಗಿದೆ.
ವಿಚಾರಣೆ ಬಳಿಕ ಬಿಡುಗಡೆ
ಸುಮಾರು 20 ಗಂಟೆಗಳ ವಿಚಾರಣೆ ನಡೆಸಿದ ಬಳಿಕ ಪೊಲೀಸರು ಸ್ನೇಹಮಯಿ ಕೃಷ್ಣರನ್ನು ಬಿಡುಗಡೆ ಮಾಡಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಿದ್ದು, ಆಡಿಯೋ ಮೂಲ ಹಾಗೂ ಸತ್ಯಾಸತ್ಯತೆ ಕುರಿತು ಇನ್ನಷ್ಟು ಪರಿಶೀಲನೆ ನಡೆಯುತ್ತಿದೆ.
ಇದನ್ನು ನೋಡಿ : POLICEಪ್ಪನ ಕಾಟಕ್ಕೆ ವಿಧವೆ ಸೂಸೈ ಅಪ್ಪ ಅಮ್ಮನನ್ನು ಕಳೆದು ಕೊಂಡ ಮಕ್ಕಳು




