11 ಲಕ್ಷ ರೂ ಲಂಚಕ್ಕೆ ಬೇಡಿಕೆ; ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾ ಬಲೆಗೆ ಬಿದ್ದ BJP ಶಾಸಕ.

ಗದಗ ಜಿಲ್ಲೆಯ ಶಿರಹಟ್ಟಿ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ 5 ಲಕ್ಷ ರೂ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಶಿರಹಟ್ಟಿ ಕ್ಷೇತ್ರದ BJP ಶಾಸಕ ಚಂದ್ರು ಲಮಾಣಿ ಲೋಕಾಯುಕ್ತ ಬಲೆಗೆ ಬಿದ್ದಿರುವಂತಹ ಘಟನೆ ನಡೆದಿದೆ.
11 ಲಕ್ಷ ಲಂಚಕ್ಕೆ ಬೇಡಿಕೆ
ಸುಮಾರು 11 ಲಕ್ಷ ರೂ ಲಂಚಕ್ಕೆ ಬೇಡಿಕೆ ಇಡಲಾಗಿದ್ದು, ಮುಂಗಡವಾಗಿ 5 ಲಕ್ಷ ರೂ ಕಮಿಷನ್ ಪಡೆಯುವಾಗ ಶಾಸಕ ಸೇರಿದಂತೆ ಪಿಎಗಳಾದ ಮಂಜುನಾಥ್ ಮತ್ತು ಗುರು ಸಿಕ್ಕಿಬಿದ್ದಿದ್ದು, ಮೂವರನ್ನು ವಶಕ್ಕೆ ಪಡೆದು ಲೋಕಯುಕ್ತ ಪೊಲೀಸರಿಂದ ವಿಚಾರಣೆ ನಡೆಸುತ್ತಿದ್ದಾರೆ.
ಇದನ್ನು ಓದಿ : ಏ.1ರಿಂದ ಟೋಲ್ಗಳಲ್ಲಿ ನಗದು ಪಾವತಿ ಇಲ್ಲ?

ಲೋಕಾ ಬಲೆಗೆ ಬಿದ್ದ ಶಾಸಕ
ಸಣ್ಣ ನೀರಾವರಿ ಇಲಾಖೆಯ ಕ್ಲಾಸ್ 1 ಗುತ್ತಿಗೆದಾರ ವಿಜ ಲಂಚ ನೀಡಲು ಒತ್ತಾಯಿಸಲಾಗಿದೆ. ರಸ್ತೆ ಬದಿ ತಡೆಗೋಡೆ ನಿರ್ಮಾಣದ ಕಾಮಗಾರಿ ವಹಿಸಲು 11 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಡಲಾಗಿದೆ. ಆದರೆ 5 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗ ಶಾಸಕ ಚಂದ್ರು ಮತ್ತು ಇಬ್ಬರು ಪಿಎಗಳುರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.
ಆಸ್ಪತ್ರೆ ಮೇಲೂ ಲೋಕಾ ದಾಳಿ
ಇನ್ನು ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿರುವ ಚಂದ್ರು ಲಮಾಣಿಗೆ ಸೇರಿದ ಬಾಲಾಜಿ ಆಸ್ಪತ್ರೆ ಮೇಲೂ ಲೋಕಾಯುಕ್ತರು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನು ನೋಡಿ : POLICEಪ್ಪನ ಕಾಟಕ್ಕೆ ವಿಧವೆ ಸೂಸೈ ಅಪ್ಪ ಅಮ್ಮನನ್ನು ಕಳೆದು ಕೊಂಡ ಮಕ್ಕಳು




