
YADAGIRI NEWS : ಪತ್ನಿಯ ಶೀಲ ಶಂಕಿಸಿ ಹೆತ್ತ ತಂದೆಯೇ ತನ್ನ ಮೂವರು ಮಕ್ಕಳನ್ನು ಬರ್ಬರವಾಗಿ ಹತ್ಯೆಗೈದ ದುಃಖದ ಯಾದಗಿರಿ ತಾಲ್ಲೂಕಿನ ಹತ್ತಿಕುಣಿ ಗ್ರಾಮದಲ್ಲಿ ನಡೆದಿದೆ.
ಮಕ್ಕಳ ಮೇಲೆ ಕ್ರೌರ್ಯ ಮೆರೆದ ರಾಕ್ಷಸ ತಂದೆ ಶರಣಪ್ಪ. ತಾಯಿ ಬಹಿರ್ದೆಸೆಗೆ ಹೋಗಿದ್ದ ವೇಳೆ ಮಲಗಿದ್ದ ತನ್ನ ಮಗಳ ಸಾನ್ವಿ (5) ಮತ್ತು ಮಗ ಭರತ್ (3) ಅವರನ್ನು ಕೊಡಲಿಯಿಂದ ಕೊಚ್ಚಿ ಹತ್ಯೆ ಮಾಡಿದ್ದಾರೆ. ಮತ್ತೊಬ್ಬ ಮಗ ಗಂಭೀರ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಶರಣಪ್ಪನ ಪತ್ನಿ ಗಂಡನೊಂದಿಗೆ ಹೊಂದಾಣಿಕೆಯಾಗದೇ ಮನೆಯೇ ಬಿಟ್ಟು ತವರು ಮನೆಗೆ ಹೋಗಿದ್ದಳು. ಹದಿನೈದು ದಿನಗಳ ಹಿಂದಷ್ಟೇ ಪತ್ನಿಯನ್ನ ಶರಣಪ್ಪ ಕರೆತಂದಿದ್ದ.
ಇನ್ನು ಘಟನಾ ಸ್ಥಳಕ್ಕೆ ಯಾದಗಿರಿ ಡಿವೈಎಸ್ಪಿ ಸುರೇಶ್ ನಾಯಕ್ ಮತ್ತು ಪಿಎಸ್ಐ ಹಣಮಂತ ಬಂಕಲಗಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಯಾದಗಿರಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.




