ಮಾಜಿ ಶಾಸಕ ಸುರೇಶ್ ಗೌಡ Car Accident – ಮಣಿಪಾಲ್ ಆಸ್ಪತ್ರೆಗೆ ದಾಖಲು.

ನಾಗಮಂಗಲದ ಜೆಡಿಎಸ್ ಮಾಜಿ ಶಾಸಕ ಸುರೇಶ್ ಗೌಡ (Ex-MLA Suresh Gowda) ಪ್ರಯಾಣಿಸುತ್ತಿದ್ದ ಕಾರು ಮಂಡ್ಯದ ಬೊಂತೆಕೊಪ್ಪಲು ಬಳಿ ಪಲ್ಟಿಯಾಗಿ ಅಪಘಾತಕ್ಕೀಡಾಗಿದೆ. ಅಪಘಾತದಲ್ಲಿ ಸುರೇಶ್ ಗೌಡರ ಕೈಗೆ ಹಾಗೂ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ಸಣ್ಣಪುಟ್ಟ ಗಾಯಗಳಿಂದ ಪಾರು
ಇನ್ನು ಈ Car Accident ನಲ್ಲಿ ಮಾಜಿ ಶಾಸಕ ಸುರೇಶ್ ಗೌಡರ ಕೈಗೆ ಪೆಟ್ಟಾಗಿದೆ. ಕಾರು ಚಾಲಕನಿಗೂ ಸಣ್ಣ ಪ್ರಮಾಣದ ಗಾಯಗಳಾಗಿವೆ. ಅಪಘಾತದ ರಭಸಕ್ಕೆ ಕಾರು ಭಾಗಶಃ ಜಖಂಗೊಂಡಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ ಎಂದು ತಿಳಿದು ಬಂದಿದೆ.

ಇದನ್ನು ಓದಿ : ಲಂಚ ಸ್ವೀಕರಿಸುವಾಗ ಲೋಕಾ ಬಲೆಗೆ ಬಿದ್ದ BJP ಶಾಸಕ
ನಿಯಂತ್ರಣ ತಪ್ಪಿ Car Accident
ಸುರೇಶ್ ಗೌಡರು ಕಾರ್ಯಕರ್ತರೊಬ್ಬರ ಮದುವೆ ಸಮಾರಂಭದಲ್ಲಿ ಭಾಗವಹಿಸಲು ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ ಎಂದು ತಿಳಿದು ಬಂದಿದೆ. ಕಾರು ಪಲ್ಟಿಯಾದ ತಕ್ಷಣ ಮಾಜಿ ಶಾಸಕರ ಗನ್ಮ್ಯಾನ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮಣಿಪಾಲ್ ಆಸ್ಪತ್ರೆಗೆ ದಾಖಲು
ಘಟನೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸುರೇಶ್ ಗೌಡರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವೈದ್ಯರು ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿಸಿದ್ದಾರೆ.

ತನಿಖೆ ಪ್ರಾರಂಭ – Car Accident
ಈ ಘಟನೆ ಬಸರಾಳು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಅಪಘಾತಕ್ಕೆ ನಿಖರ ಕಾರಣ ಪತ್ತೆಹಚ್ಚಲು ಸಿಸಿಟಿವಿ ದೃಶ್ಯಗಳು ಹಾಗೂ ಸ್ಥಳೀಯರ ಹೇಳಿಕೆಗಳನ್ನು ಆಧರಿಸಿ ಪರಿಶೀಲನೆ ನಡೆಯುತ್ತಿದೆ. ರಸ್ತೆಯ ಗುಂಡಿ ಅಥವಾ ಅತಿವೇಗದಿಂದ ಸಂಚರಿಸುವಾಗ ನಿಯಂತ್ರಣ ತಪ್ಪಿರುವ ಸಾಧ್ಯತೆ ಕುರಿತು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.
ಇದನ್ನು ನೋಡಿ : ಲೋಕಾ ಬಲೆಗೆ ಬಿದ್ದ ಬಿಜೆಪಿ ಶಾಸಕ ಗ್ರಾಮ ಲೆಕ್ಕಾಧಿಕಾರಿಯೂ ತಗ್ಲಾಕೊಂಡ




