ಜ್ಯೋತಿಷಿ Kamalakar Bhat ನ ಇನ್ನೊಂದು ಕರ್ಮಕಾಂಡ ಬಯಲಾಗಿದೆ.

ಸಿದ್ದಾಪುರ ವಸಂತ್ ನಾಯ್ಕ್ ಕೊಲೆ ಆರೋಪಿ ಕಮಲಾಕರ್ ಭಟ್ನ ಇನ್ನೊಂದು ಕರ್ಮಕಾಂಡ ಬಯಲಾಗಿದೆ. ಪಾಪಿ ಕಮಲಾಕರ್ ಭಟ್ ಮೇಲೆ ಪೋಕ್ಸೊ ಪ್ರಕರಣ ದಾಖಲಾಗಿದೆ.
Kamalakar Bhat ಮತ್ತೊಂದು ಕರ್ಮಕಾಂಡ ಬಯಲು
ಸಿದ್ದಾಪುರದಲ್ಲಿ ನಡೆದ ವಸಂತ್ ನಾಯ್ಕ್ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಜ್ಯೋತಿಷಿ ಕಮಲಾಕರ್ ಭಟ್ ಈಗಾಗಲೇ ಜೈಲಿನಲ್ಲಿದ್ದಾರೆ. ಈ ನಡುವೆ ಅವರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಮತ್ತೊಂದು ಗಂಭೀರ ಪ್ರಕರಣ ದಾಖಲಾಗಿದೆ.

ಇದನ್ನು ಓದಿ : ಮಾಜಿ ಶಾಸಕ Suresh Gowdaರ ಕಾರು ಅಪಘಾತ – ಮದುವೆಗೆ ತೆರಳುತ್ತಿದ್ದಾಗ ಪಲ್ಟಿಯಾದ ಕಾರು
ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ
ಶಿವಮೊಗ್ಗ ಜಿಲ್ಲೆಯ ತುಂಗಾ ನಗರ ವ್ಯಾಪ್ತಿಯ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಕಮಲಾಕರ ಭಟ್ ವಿರುದ್ಧ ದೂರು ದಾಖಲಿಸಲಾಗಿದೆ. ಪ್ರಾಥಮಿಕವಾಗಿ ಪ್ರಕರಣವನ್ನು ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದಾಖಲಿಸಿ, ನಂತರ ತನಿಖೆಗಾಗಿ ತುಂಗಾ ನಗರ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ.
ಪೊಲೀಸರು ಈಗಾಗಲೇ ಬಾಲಕಿಯ ಹೇಳಿಕೆಯನ್ನು ದಾಖಲಿಸಿಕೊಂಡಿದ್ದು, ವೈದ್ಯಕೀಯ ಪರೀಕ್ಷೆಯನ್ನೂ ನಡೆಸಿದ್ದಾರೆ. ಆರೋಪಿಯ ವಿರುದ್ಧ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರದಂತಹ ಗಂಭೀರ ಆರೋಪಗಳು ಕೇಳಿಬಂದಿವೆ. ಪ್ರಕರಣದಡಿ ಕಠಿಣ ಶಿಕ್ಷೆಯ ಸಾಧ್ಯತೆ ಇದೆ.

ತನಿಖೆ ಚುರುಕು
ಪೋಲೀಸರು ಪ್ರಕರಣದ ಕುರಿತು ಹೆಚ್ಚಿನ ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದ್ದಾರೆ. ಈಗಾಗಲೇ ಜೈಲಿನಲ್ಲಿರುವ ಕಮಲಾಕರ ಭಟ್ ಅವರನ್ನು ವಿಚಾರಣೆಗೆ ಹಾಜರುಪಡಿಸಲು ಕ್ರಮ ಕೈಗೊಳ್ಳಲಾಗಿದೆ. ಈ ಹೊಸ ಪ್ರಕರಣದಿಂದ ಅವರಿಗೆ ಮತ್ತಷ್ಟು ಕಾನೂನು ಸವಾಲುಗಳು ಎದುರಾಗುವ ಸಾಧ್ಯತೆ ಇದೆ.
ಇದನ್ನು ನೋಡಿ : POLICE ಕಾಟಕ್ಕೆ ವಿಧವೆ ಸೂಸೈ ಅಪ್ಪ ಅಮ್ಮನನ್ನು ಕಳೆದು ಕೊಂಡ ಮಕ್ಕಳು




