Mangaluru ಉಳ್ಳಾಲದ ಕೊಲ್ಯ ಗ್ರಾಮದಲ್ಲಿ ಲೂಡೋ ಆಟ ಆಡುತ್ತಿದ್ದ ವೇಳೆ ಪ್ಲಾಸ್ಟಿಕ್ ಕಾಯಿನ್ ನುಂಗಿದ ಬಾಲಕಿ ಉಸಿರುಗಟ್ಟಿ ಸಾವನ್ನಪ್ಪಿದ ದುರ್ಘಟನೆ ನಡೆದಿದೆ.

Mangaluru : ಲೂಡೋ ಆಟ ಆಡುತ್ತಿದ್ದ ವೇಳೆ ಪ್ಲಾಸ್ಟಿಕ್ ಕಾಯಿನ್ ನುಂಗಿದ ಪರಿಣಾಮ ಬಾಲಕಿ ಸಾವನ್ನಪ್ಪಿರುವ ದುರ್ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ಮಕ್ಕಳ ಆಟಿಕೆಗಳ ಸುರಕ್ಷತೆ ಬಗ್ಗೆ ಪೋಷಕರಲ್ಲಿ ಆತಂಕ ಮೂಡಿಸಿದೆ.
ನಗರದ ಸಮೀಪದ ಉಳ್ಳಾಲ ತಾಲೂಕಿನ ಕೊಲ್ಯ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ. ಮನೆಯಲ್ಲೇ ಸಹೋದರ-ಸಹೋದರಿಯರ ಜೊತೆ ಆಟ ಆಡುತ್ತಿದ್ದ ವೇಳೆ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.
ಮೃತ ಬಾಲಕಿ ಯಾರು?
ಮೃತ ಬಾಲಕಿಯನ್ನು ತನುಷ್ಕ (8) ಎಂದು ಗುರುತಿಸಲಾಗಿದೆ. ಆಕೆ ಕಾಸರಗೋಡು ಜಿಲ್ಲೆಯ ಮಧೂರು ಮೂಲದ ರಾಜೇಶ್ ಗಟ್ಟಿ ಮತ್ತು ರಾಜೇಶ್ವರಿ ದಂಪತಿಯ ಪುತ್ರಿಯಾಗಿದ್ದಾಳೆ.
ಇದನ್ನು ಓದಿ : ಮಾಜಿ ಶಾಸಕ Suresh Gowdaರ ಕಾರು ಅಪಘಾತ – ಮದುವೆಗೆ ತೆರಳುತ್ತಿದ್ದಾಗ ಪಲ್ಟಿಯಾದ ಕಾರು

ಲೂಡೋ ಕಾಯಿನ್ ನುಂಗಿದ ಪರಿಣಾಮ ಉಸಿರುಗಟ್ಟಿ ಸಾವು
ಮಾಹಿತಿಯ ಪ್ರಕಾರ, ಲೂಡೋ ಆಟದ ವೇಳೆ ಶಂಕು ಆಕಾರದ ಪ್ಲಾಸ್ಟಿಕ್ ಕಾಯಿನ್ ಅನ್ನು ಬಾಲಕಿ ತಪ್ಪಾಗಿ ನುಂಗಿದ್ದಾಳೆ. ತಕ್ಷಣವೇ ಉಸಿರಾಟದ ತೊಂದರೆ ಉಂಟಾಗಿ ಆಕೆ ಗಂಭೀರ ಸ್ಥಿತಿಗೆ ತಲುಪಿದ್ದಾಳೆ. ಕುಟುಂಬದವರು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲು ಪ್ರಯತ್ನಿಸಿದರೂ ಪ್ರಯೋಜನವಾಗಲಿಲ್ಲ.
ಬಾಲಕಿಯನ್ನು ತೊಕ್ಕೊಟ್ಟು ಪ್ರದೇಶದ ಖಾಸಗಿ ಆಸ್ಪತ್ರೆಗೆ ದಾಖಲಿಸಲು ಕರೆದೊಯ್ಯುವಷ್ಟರಲ್ಲಿ ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ ಎಂದು ತಿಳಿದುಬಂದಿದೆ.




