Belagavi ಜಿಲ್ಲೆಯ ಕಿತ್ತೂರು ತಾಲೂಕಿನ ಹಿರೇನಂದಿಹಳ್ಳಿಯಲ್ಲಿ ವ್ಯಕ್ತಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಲಾಗಿದೆ…

Belagavi ಜಿಲ್ಲೆಯ ಕಿತ್ತೂರು ತಾಲೂಕಿನ ಹಿರೇನಂದಿಹಳ್ಳಿ ಗ್ರಾಮದಲ್ಲಿ ವ್ಯಕ್ತಿಯೊಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಈ ಪ್ರಕರಣ ಸ್ಥಳೀಯರಲ್ಲಿ ಆತಂಕ ಮೂಡಿಸಿದ್ದು, ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಆರಂಭಿಸಿದ್ದಾರೆ.
ಮೆಕ್ಕೆಜೋಳ ಗದ್ದೆಯಲ್ಲಿ ಶವ ಪತ್ತೆ
ಹಿರೇನಂದಿಹಳ್ಳಿ ಗ್ರಾಮದ ಸಮೀಪದ ಮೆಕ್ಕೆಜೋಳದ ಗದ್ದೆಯಲ್ಲಿ 50 ವರ್ಷದ ಕಲ್ಮೇಶ್ ಕೋಟಿ ಅವರ ಶವ ಪತ್ತೆಯಾಗಿದೆ. ಪ್ರಕರಣ ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದೆ. ನಾಲ್ಕು ದಿನಗಳ ಹಿಂದೆಯೇ ಕೊಲೆ ನಡೆದಿರಬಹುದೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಮಾಹಿತಿಯ ಪ್ರಕಾರ ದುಷ್ಕರ್ಮಿಗಳು ಕಲ್ಮೇಶ್ ಅವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆಗೈದಿದ್ದು, ಬಳಿಕ ಮರ್ಮಾಂಗ ಕತ್ತರಿಸಿ ವಿಕೃತಿ ಮೆರೆದಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಘಟನೆ ಕ್ರೂರತೆಯ ಮಟ್ಟವನ್ನು ತೋರಿಸುವುದರಿಂದ ಪೊಲೀಸರು ಗಂಭೀರವಾಗಿ ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನು ಓದಿ : ಮಾಜಿ ಶಾಸಕ Suresh Gowdaರ ಕಾರು ಅಪಘಾತ – ಮದುವೆಗೆ ತೆರಳುತ್ತಿದ್ದಾಗ ಪಲ್ಟಿಯಾದ ಕಾರು

ಕಲ್ಮೇಶ್ ತುಮಕೂರಿನಲ್ಲಿ ಹೋಮ್ ಕೇರ್ ಕೆಲಸ ಮಾಡುತ್ತಿದ್ದು, ಸುಮಾರು ಹತ್ತು ದಿನಗಳ ಹಿಂದೆ ಮಾತ್ರ ಗ್ರಾಮಕ್ಕೆ ಬಂದಿದ್ದರು. ಹತ್ತು ವರ್ಷಗಳ ಹಿಂದೆ ಪತ್ನಿ ದೂರವಾಗಿದ್ದ ಕಾರಣ ಅವರು ವೃದ್ಧ ತಾಯಿಯೊಂದಿಗೆ ವಾಸಿಸುತ್ತಿದ್ದರು ಎಂದು ತಿಳಿದುಬಂದಿದೆ.
ಹಣಕಾಸು ವ್ಯವಹಾರ, ಆಸ್ತಿ ವಿವಾದ ಅಥವಾ ಮಹಿಳೆ ಸಂಬಂಧಿತ ವಿಚಾರಗಳಿಂದ ಕೊಲೆ ನಡೆದಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ. ಪ್ರಕರಣದ ಹಿನ್ನೆಲೆ ತಿಳಿಯಲು ಪೊಲೀಸ್ ತಂಡ ಸಾಕ್ಷ್ಯ ಸಂಗ್ರಹಿಸುತ್ತಿದೆ. ಜಿಲ್ಲಾ ಎಸ್ಪಿ ರಾಮರಾಜನ್ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನು ನೋಡಿ : POLICE ಕಾಟಕ್ಕೆ ವಿಧವೆ ಸೂಸೈ ಅಪ್ಪ ಅಮ್ಮನನ್ನು ಕಳೆದು ಕೊಂಡ ಮಕ್ಕಳು




