
BENGALURU : ಆಂಧ್ರ ಪ್ರದೇಶದ ಉಪಮುಖ್ಯಮಂತ್ರಿ ಹಾಗೂ ನಟ ಪವನ್ ಕಲ್ಯಾಣ್ ಅಭಿನಯದ ಬಹು ನಿರೀಕ್ಷಿತ ಚಿತ್ರ ‘OG’ ಇದೀಗ ಬೆಂಗಳೂರು ಸೇರಿದಂತೆ ಹಲವು ನಗರಗಳಲ್ಲಿ ಮಧ್ಯರಾತ್ರಿ ಪ್ರದರ್ಶನ ಕಂಡಿದೆ. ಬೆಂಗಳೂರು ಮಡಿವಾಳದ ಸಂಧ್ಯಾ ಥಿಯೇಟರ್ ಬಳಿ ಪವನ್ ಕಲ್ಯಾಣ್ ಫ್ಯಾನ್ಸ್ ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಹುಚ್ಚಾಟ ಮೆರೆದಿದ್ದಾರೆ.
OG ಸಿನಿಮಾದಲ್ಲಿ ಪವನ್ ಕಲ್ಯಾಣ್ ತಲ್ವರ್ ಹಿಡಿದಿರೋ ದೃಶ್ಯಗಳಿವೆ. ಪವನ್ ಕಲ್ಯಾಣ್ ಫ್ಯಾನ್ಸ್ ಬೆಂಗಳೂ ರು ಮಡಿವಾಳದ ಸಂಧ್ಯಾ ಥಿಯೇಟರ್ ಬಳಿಗೆ ತಲ್ವಾರ್ ಹಿಡಿದು ಬಂದಿದ್ದಾರೆ. ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಹುಚ್ಚಾಟ ಮೆರೆದಿದ್ದಾರೆ. ಈ ತಲ್ವಾರ್ ಡಾನ್ಸ್ ಸ್ಥಳೀಯರಿಂದ ವೈರಲ್ ಆಗಿದೆ.
ಇನ್ನು ಈ ಸಂಬಂಧ ಮಡಿವಾಳ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ತೆರಳಿ ವಿಚಾರಣೆ ನಡೆಸಿದರು. ವಿಚಾರಣೆಯಲ್ಲಿ, ತಲ್ವಾರ್ ಕಟೌಟ್ ಮುಂಭಾಗದಲ್ಲಿ ಫೋಟೋ ತೆಗೆಯಲು 200 ರೂ. ವೆಚ್ಚದಲ್ಲಿ ಪ್ಲಾಸ್ಟಿಕ್ ತಲ್ವಾರ್ ಖರೀದಿಸಿರುವುದು ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ. ಆದರೆ ತಲ್ವಾರ್ ನೋಡಿದ ಇತರೆ ಸಿನಿ ಪ್ರೇಕ್ಷಕರು ಒಂದು ಕ್ಷಣ ಗಾಬರಿ ಆಗಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ಥಳೀಯ ಪೊಲೀಸರು ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ.




