CM ಸಿದ್ದರಾಮಯ್ಯ ಅವರು ಕರ್ನಾಟಕದ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಮೊಬೈಲ್ ನಿಷೇಧದ ಬಗ್ಗೆ ಸುಳಿವು ನೀಡಿದ್ದಾರೆ.

ಶೀಘ್ರದಲ್ಲೇ ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬ್ಯಾನ್ ಆಗುವ ಸಾಧ್ಯತೆ ಇದೆ. ಈ ಬಗ್ಗೆ CM ಸಿದ್ದರಾಮಯ್ಯ ವಿವಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸುಳಿವು ನೀಡಿದ್ದಾರೆ. ಮೊಬೈಲ್ ಬ್ಯಾನ್ ವಿಚಾರವಾಗಿ ಮುಖ್ಯಮಂತ್ರಿಗಳು ವಿಸಿಗಳಿಂದಲೂ ಅಭಿಪ್ರಾಯ ಕೇಳಿದ್ದು, ಪ್ರಸ್ತಾಪಕ್ಕೆ ವಿಶ್ವವಿದ್ಯಾಲಯದ ಕುಲಪತಿಗಳಿಂದಲೂ ಒಪ್ಪಿಗೆ ಸಿಕ್ಕಿದೆ.
ನಿಷೇಧದ ಬಗ್ಗೆ ಚಿಂತನೆ
16 ವರ್ಷಕ್ಕಿಂತ ಕಡಿಮೆ ವಯಸ್ಸಿನ ವಿದ್ಯಾರ್ಥಿಗಳಿಗೆ ಮೊಬೈಲ್ ಬಳಕೆಯನ್ನು ನಿಯಂತ್ರಿಸುವ ಯೋಜನೆ ಇದೆ. ಇದಕ್ಕೆ ಆಸ್ಟ್ರೇಲಿಯಾ ಸೇರಿದಂತೆ ಅನೇಕ ದೇಶಗಳು ಉದಾಹರಣೆ. ವಿದ್ಯಾರ್ಥಿಗಳು ಸೋಷಿಯಲ್ ಮೀಡಿಯಾದಿಂದ ಹಾನಿಯಾಗುತ್ತಿರುವ ಆರೋಪಗಳ ಹಿನ್ನೆಲೆಯಲ್ಲಿ ಈ ನಿಷೇಧದ ಬಗ್ಗೆ ಚಿಂತನೆ ಇದೆ ಎನ್ನಲಾಗುತ್ತಿದೆ.

ಇದನ್ನು ಓದಿ : Belagavi|ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ..!!
ಡ್ರಗ್ಸ್ ಮುಕ್ತ ಕ್ಯಾಂಪಸ್
ಸಿಎಂ ಸಿದ್ದರಾಮಯ್ಯ ವಿಶ್ವವಿದ್ಯಾಲಯಗಳ ಕುಲಪತಿಗಳಿಗೆ ಡ್ರಗ್ಸ್ ಮುಕ್ತ ಕ್ಯಾಂಪಸ್ ಗಾಗಿ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ದೂರವಿರುವಂತೆ ಪರೀಕ್ಷೆ, ಕ್ಯಾಂಪಸ್ ಮುಲ್ಯಮಾಪನ ಮತ್ತು ಜಾಗೃತಿ ಅಭಿಯಾನಗಳನ್ನು ಹೆಚ್ಚಿಸುವ ಸೂಚನೆ ನೀಡಲಾಗಿದೆ.
ಸ್ಟೂಡೆಂಟ್ ಎಲೆಕ್ಷನ್ ಬಗ್ಗೆ ಚಿಂತನೆ
ಕಾಲೇಜುಗಳಲ್ಲಿ ವಿದ್ಯಾರ್ಥಿ ಚುನಾವಣೆ ನಡೆಸುವ ಬಗ್ಗೆ ಸಿಎಂ ಸಿದ್ದರಾಮಯ್ಯ ಸುಳಿವು ನೀಡಿದ್ದಾರೆ. ವಿದ್ಯಾರ್ಥಿ ಚುನಾವಣೆ ಮಾಡುವ ಬಗ್ಗೆ ಚಿಂತನೆ ಮಾಡುತ್ತಿದ್ದೇವೆ. ನಮ್ಮ ಕಾಲದಲ್ಲಿ ಚುನಾವಣೆ ಇತ್ತು, ನಾವು ಅಲ್ಲಿಂದಲೇ ಬಂದಿರುವುದು. ಹೀಗಾಗಿ ಷರತ್ತುಗಳನ್ನು ಹಾಕಿ ಚುನಾವಣೆಗೆ ಅವಕಾಶ ಕೊಡಲು ಚಿಂತನೆ ಇದೆ.
ಚುನಾವಣೆ ಆಗದಿದ್ರೆ ವಿದ್ಯಾರ್ಥಿಗಳು ನಾಯಕರಾಗಿ ಹೇಗೆ ಬೆಳೆಯೋದು? ಭಾರತದಲ್ಲಿ ವಿದ್ಯಾರ್ಥಿ ನಾಯಕರು ಇಲ್ಲವೇ ಇಲ್ಲ ಎಂದ ಸಿಎಂ, ಈ ಬಗ್ಗೆ ಸಲಹೆ ಕೊಡುವಂತೆ ವಿಸಿಗಳಿಗೆ ಸೂಚಿಸಿದ್ದಾರೆ.

ಚುನಾವಣೆ ನಡೆಸಲು ವಿರೋಧ
ಆದರೆ, ಬಹುತೇಕ ವಿಶ್ವವಿದ್ಯಾಲಯಗಳು ಚುನಾವಣೆ ನಡೆಸಲು ವಿರೋಧ ವ್ಯಕ್ತಪಡಿಸುತ್ತಿವೆ. JNU ಸೇರಿ ಹಲವು ಕಾಲೇಜುಗಳಲ್ಲಿ ಗಲಾಟೆ, ಮತ್ತು ಪಕ್ಷಾತೀತವಾಗಿ ಆಯೋಜಿಸುವುದು ಕಷ್ಟವಾಗಿದೆ.
“ಚುನಾವಣೆ ನಡೆಯುತ್ತಿದ್ದರೆ ಕ್ಯಾಂಪೇನ್ಗೆ ಹೆಚ್ಚಿನ ಸಮಯ ಬೇಕಾಗುತ್ತದೆ, ಆದ್ದರಿಂದ ಕಾಲೇಜುಗಳಲ್ಲಿ ಪ್ರಸ್ತುತದಂತೆ ಚುನಾವಣೆಯನ್ನು ಬೇಡ” ಎಂದು ಸಿಎಂಗೆ ಕುಲಪತಿಗಳು ತಿಳಿಸಿದ್ದಾರೆ ಎನ್ನಲಾಗಿದೆ.
ಇದನ್ನು ನೋಡಿ : ತುರುವೇಕೆರೆ ಮೈತ್ರಿಯಲ್ಲಿ ಭಿನ್ನಮತ ಗೊಂದಲದ ಬಗ್ಗೆ ನಿಖಿಲ್ ಏನಂದ್ರು ಗೊತ್ತಾ




