2ನೇ ಮದ್ವೆಯಾದ Shikhar Dhawan ! ಸುದ್ದಿ ಬ್ರೇಕ್ ಮಾಡಿದ ಚಹಾಲ್..!

ಟೀಂ ಇಂಡಿಯಾದ ಮಾಜಿ ಆರಂಭಿಕ ಆಟಗಾರ ಶಿಖರ್ ಧವನ್ ಅವರು ತಮ್ಮ ದೀರ್ಘಕಾಲದ ಗೆಳತಿ ಸೋಫಿ ಶೈನ್ ಅವರೊಂದಿಗೆ ಸಪ್ತಪದಿ ತುಳಿದಿದ್ದಾರೆ. ಶಿಖರ್ ಧವನ್ ಮತ್ತು ಸೋಫಿ ಶೈನ್ ಅವರ ವಿವಾಹ ಸಮಾರಂಭ ದೆಹಲಿಯಲ್ಲಿ ಅತ್ಯಂತ ಸರಳವಾಗಿ ಮತ್ತು ಖಾಸಗಿಯಾಗಿ ನಡೆದಿದೆ. ಕೇವಲ ಆಪ್ತರು ಮತ್ತು ಕುಟುಂಬಸ್ಥರು ಮಾತ್ರ ಈ ಮದುವೆಯಲ್ಲಿ ಭಾಗಿಯಾಗಿದ್ದರು ಎಂದು ತಿಳಿದುಬಂದಿದೆ.
ಸುದ್ದಿ ಬ್ರೇಕ್ ಮಾಡಿದ ಚಹಾಲ್..!
Shikhar Dhawan ಮದುವೆಯ ಗುಟ್ಟನ್ನು ರಟ್ಟು ಮಾಡಿದ್ದು ಟೀಂ ಇಂಡಿಯಾದ ಸ್ಪಿನ್ನರ್ ಯುಜುವೇಂದ್ರ ಚಾಹಲ್. ಮದುವೆಯ ಸುಂದರವಾದ ಫೋಟೋವನ್ನು ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿರುವ ಚಾಹಲ್, ನವಜೋಡಿಗೆ ಶುಭಕೋರುವ ಮೂಲಕ ಈ ಸಿಹಿ ಸುದ್ದಿಯನ್ನು ಜಗತ್ತಿಗೆ ತಿಳಿಸಿದ್ದಾರೆ.
ಇದನ್ನು ಓದಿ : ರುಂಡವಿಲ್ಲದ ಅಪರಿಚಿತ ಮಹಿಳೆಯ ಶವ ಪತ್ತೆ – ಬೆಚ್ಚಿಬಿದ್ದ ಜನ

ಕೆಲವು ವರ್ಷಗಳ ಕಾಲ ಡೇಟಿಂಗ್
ಈ ಜೋಡಿ ಕೆಲವು ವರ್ಷಗಳ ಕಾಲ ಡೇಟಿಂಗ್ ಮಾಡುತ್ತಿದ್ದರು. 2025 ರಲ್ಲಿ ತಮ್ಮ ಸಂಬಂಧವನ್ನು ಬಹಿರಂಗಪಡಿಸಿದ್ದರು. ದುಬೈನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ 2025 ಪಂದ್ಯದ ಸಮಯದಲ್ಲಿ ಧವನ್ ಮತ್ತು ಶೈನ್ ಮೊದಲು ಒಟ್ಟಿಗೆ ಕಾಣಿಸಿಕೊಂಡಿದ್ದರು.
ಶುಭಾಶಯಗಳಮಹಾಪೂರ
ಇದೀಗ ಅವರು ಮತ್ತೆ ಮದುವೆಯಾಗಿ ಹೊಸ ಜೀವನಕ್ಕೆ ಕಾಲಿಟ್ಟಿರುವುದಕ್ಕೆ ಅವರ ಕೋಟ್ಯಂತರ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದು, ಸೋಶಿಯಲ್ ಮೀಡಿಯಾದಲ್ಲಿ ಶುಭಾಶಯಗಳ ಮಹಾಪೂರವನ್ನೇ ಹರಿಸುತ್ತಿದ್ದಾರೆ.

ಇದನ್ನು ನೋಡಿ : ನೀರಾವರಿ ಕಾಮಗಾರಿಗೆ ವೇಗ ನೀಡಿ ಇಲ್ಲವಾದ್ರೆ ಉಗ್ರ ಹೋರಾಟದ ಎಚ್ಚರಿಕೆ |




