Davanagere : ಓವರ್ ಡೋಸ್ ಇಂಜೆಕ್ಷನ್ ಚುಚ್ಚಿಕೊಂಡು ವೈದ್ಯ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರುವುದು ದಾವಣಗೆರೆ ನಗರದ ಖಾಸಗಿ ವೈದ್ಯಕೀಯ ಕಾಲೇಜ್ ಹಾಸ್ಟೆಲ್ನಲ್ಲಿ ನಡೆದಿದೆ.

Davanagere : ವೈದ್ಯ ವಿದ್ಯಾರ್ಥಿಯೋರ್ವ ಓವರ್ ಡೋಸ್ ಇಂಜೆಕ್ಷನ್ ಚುಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಾವಣಗೆರೆ ನಗರದ ಖಾಸಗಿ ವೈದ್ಯಕೀತ ಕಾಲೇಜು ಹಾಸ್ಟೆಲ್ನಲ್ಲಿ ನಡೆದಿದೆ.
ವೈದ್ಯ ವಿದ್ಯಾರ್ಥಿ ಆತ್ಮಹತ್ಯೆ
ಇನ್ನು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿಯನ್ನು ಮಹಾರಾಷ್ಟ್ರ ಸತಾರ್ ಜಿಲ್ಲೆಯ ಕರಾಡ್ ಮೂಲದ 30 ವರ್ಷ ವಯಸ್ಸಿನ ಸಿದ್ದಾರ್ಥ ತ್ರಯಂಬಕೆ ಎಂದು ಗುರುತಿಸಲಾಗಿದೆ.
ಮೃತ ವಿದ್ಯಾರ್ಥಿಯು ದಾವಣಗೆರೆಯ ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ಡರ್ಮಾಟಾಲಜಿ (ಚರ್ಮರೋಗ) ವಿಭಾಗದಲ್ಲಿ ಸ್ನಾತಕ್ಕೋತ್ತರ ಪದವಿ ಅಧ್ಯಯನ ಮಾಡುತ್ತಿದ್ದ ಎನ್ನಲಾಗಿದ್ದು, ಮೃತ ವಿದ್ಯಾರ್ಥಿಯಿದ್ದ ರೂಮ್ ಲಾಕ್ ಅದ ಹಿನ್ನಲೆ ಸಂಶಯಗೊಂಡ ವಿದ್ಯಾರ್ಥಿಗಳು ಕೊಠಡಿ ಬಾಗಿಲು ಮುರಿದು ನೋಡಿದಾಗ ಆತ್ಮಹತ್ಯೆ ವಿಚಾರ ಬೆಳಕಿಗೆ ಬಂದಿದೆ.
ಇದನ್ನೂ ಓದಿ : ರುಂಡವಿಲ್ಲದ ಅಪರಿಚಿತ ಮಹಿಳೆಯ ಶವ ಪತ್ತೆ – ಬೆಚ್ಚಿಬಿದ್ದ ಜನ

ಇನ್ನು ಮೃತ ವಿದ್ಯಾರ್ಥಿಯು ಹಾನಿಕಾರಕ ಇಂಜೆಕ್ಷನ್ ಚುಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಆದರೆ, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೃತ ವಿದ್ಯಾರ್ಥಿಯ ಪಾಲಕರಿಗೆ ಪೊಲೀಸರು ಮಾಹಿತಿ ನೀಡಿದ್ದಾರೆ.
ದಾವಣಗೆರೆ ನಗರದ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
MUST WATCH : ಅರಣ್ಯ ಪ್ರದೇಶದಲ್ಲಿ ಮಹಿಳೆ ಶ* – ಮೃತ ದೇಹ ಕಂಡು ಬೆಚ್ಚಿಬಿದ್ದ ಜನರು




