Sira : ಸಮಾವೇಶಗಳಿಗೆ KSRTC ಘಟಕದಿಂದ ಹಲವಾರು ಬಸ್ಗಳನ್ನ ಪಡೆದಿರುವ ಹಿನ್ನೆಲೆಯಲ್ಲಿ, ವಿಶೇಷವಾಗಿ ಶಿರಾ ಭಾಗದಲ್ಲಿ ಸಾಮಾನ್ಯ ಸಾರ್ವಜನಿಕ ಸಾರಿಗೆಯಲ್ಲಿ ಭಾರಿ ವ್ಯತ್ಯಯ ಉಂಟಾಗುತ್ತಿದೆ.

Sira : ಕೇಂದ್ರ ಸರ್ಕಾರ ಜಾರಿಗೊಳಿಸುತ್ತಿರುವ ಮತದಾರರ ಪಟ್ಟಿಯ ಪರಿಷ್ಕರಣೆ ಹಾಗೂ ಉದ್ಯೋಗ ಖಾತ್ರಿ ಯೋಜನೆಗೆ ಸಂಬಂಧಿಸಿದ ವಿಷಯಗಳಲ್ಲಿ ಸ್ಪಷ್ಟತೆ ಇಲ್ಲದ ಕಾಯ್ದೆಗಳನ್ನು ಜಾರಿಗೆ ತರುವ ಪ್ರಯತ್ನವನ್ನು ಖಂಡಿಸಿ, ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಫೆಬ್ರವರಿ 23ರಂದು ಚಿಕ್ಕಬಳ್ಳಾಪುರದ ಬೈಪಾಸ್ ರಸ್ತೆಯ ಅಗಲಗುರ್ಕಿ ಬಳಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಬೃಹತ್ ಸಾರ್ವಜನಿಕ ಸಭೆ ಆಯೋಜಿಸಲಾಗಿದೆ.
ಇನ್ನು ಈ ಸಭೆಯ ಹಿನ್ನೆಲೆ ಶಿರಾ ಕೆಎಸ್ಆರ್ಟಿಸಿ ಪ್ರಾದೇಶಿಕ ಘಟಕದಿಂದ ಹೆಚ್ಚಿನ ಸಂಖ್ಯೆಯಲ್ಲಿ ಸರ್ಕಾರಿ ಬಸ್ಗಳನ್ನು ಪಡೆಯಲಾಗಿದೆ ಎಂದು ತಿಳಿದುಬಂದಿದೆ. ವಿಶೇಷವಾಗಿ Karnataka State Road Transport Corporation (KSRTC) ಹಾಗೂ Bangalore Metropolitan Transport Corporation (BMTC) ಬಸ್ಗಳನ್ನು ಸಮಾವೇಶಕ್ಕಾಗಿ ಒಪ್ಪಂದದ ಆಧಾರದ ಮೇಲೆ ಬುಕ್ ಮಾಡಲಾಗಿದೆ.
ಇದನ್ನೂ ಓದಿ : ಏ.1ರಿಂದ ಟೋಲ್ಗಳಲ್ಲಿ ನಗದು ಪಾವತಿ ಇಲ್ಲ?

ಕಾರ್ಯಕ್ರಮಕ್ಕಾಗಿ ಶಿರಾ ಭಾಗದಿಂದ 100ಕ್ಕೂ ಹೆಚ್ಚು ಬಸ್ಗಳನ್ನು ನಿಯೋಜಿಸಲಾಗಿದೆ ಎನ್ನಲಾಗಿದ್ದು, ಇದರಿಂದ ಸಾಮಾನ್ಯ ಸಾರ್ವಜನಿಕ ಸಾರಿಗೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ.
ನೂರಾರು ಬಸ್ಗಳನ್ನು ಸಮಾವೇಶಗಳಿಗೆ ಒದಗಿಸುವುದರಿಂದ ಪ್ರಯಾಣಿಕರಿಗೆ ಬಸ್ ಕೊರತೆ ಎದುರಾಗುತ್ತಿದೆ ಎಂದು ಸಾರಿಗೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಒಪ್ಪಂದದ ಮೇರೆಗೆ ಬಸ್ಗಳನ್ನು ತೆಗೆದುಕೊಳ್ಳುವುದರಿಂದ ನಿಯಮಿತ ಸಂಚಾರ ವ್ಯವಸ್ಥೆಯ ಮೇಲೆ ಪರಿಣಾಮ ಬೀರುತ್ತದೆ.
ಇದರ ಪರಿಣಾಮವಾಗಿ ಗ್ರಾಮೀಣ ಹಾಗೂ ನಗರ ಭಾಗಗಳ ದೈನಂದಿನ ಪ್ರಯಾಣಿಕರು ಸಂಕಷ್ಟ ಅನುಭವಿಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಇಲಾಖೆ ಸ್ಪಷ್ಟಪಡಿಸಿದೆ. ಸಾರಿಗೆ ಇಲಾಖೆ ಈ ಸಂಬಂಧ ಅಗತ್ಯ ಕ್ರಮಗಳನ್ನು ಕೈಗೊಳ್ಳುವುದಾಗಿ ತಿಳಿಸಿದೆ.
MUST WATCH : ರಾಜ್ಯದ ಜನರಿಗೆ ಕರೆಂಟ್ ಶಾಕ್ ದುಬಾರಿ ದುನಿಯಾದಲ್ಲಿ ಲೈಫ್ ಕಾಸ್ಟ್ಲಿ




