ದೈವ ನಿಂದನೆ ಆರೋಪಕ್ಕೆ ಸಂಬಂಧಿಸಿ ನಟ Ranveer Singh ಗೆ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸರು ಎರಡು ಬಾರಿ ನೋಟಿಸ್ ನೀಡಿದ್ದಾರೆ.

ದೈವನಿಂದನೆ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಾಲಿವುಡ್ ನಟ Ranveer Singh ಅವರಿಗೆ ಪೊಲೀಸರು ನೋಟಿಸ್ ನೀಡಿದ್ದರೂ ಯಾವುದೇ ಪ್ರತಿಕ್ರಿಯೆ ಸಿಕ್ಕಿಲ್ಲ. ಇದರಿಂದ ಇದೀಗ ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಳ್ಳಲು ಸಿದ್ಧತೆ ನಡೆಸಿದ್ದಾರೆ.
ಪ್ರಕರಣ ಸಂಬಂಧ ಈಗಾಗಲೇ ಪೊಲೀಸರು ನಟರಿಗೆ ಎರಡು ಬಾರಿ ನೋಟಿಸ್ ಜಾರಿಗೊಳಿಸಿದ್ದಾರೆ. ಆದರೆ ಇದುವರೆಗೆ ಯಾವುದೇ ಉತ್ತರ ದೊರಕಿಲ್ಲ ಎಂದು ತಿಳಿದುಬಂದಿದೆ. ಪರಿಣಾಮವಾಗಿ ಹೈಗ್ರೌಂಡ್ಸ್ ಪೊಲೀಸ್ ಠಾಣೆ ಪೊಲೀಸರು ಕಾನೂನು ಮೊರೆ ಹೋಗುವ ಬಗ್ಗೆ ಚಿಂತನೆ ನಡೆಸುತ್ತಿದ್ದಾರೆ.

ಕಾಂತಾರ 2 ಕುರಿತು ಹೇಳಿಕೆ ವಿವಾದಕ್ಕೆ ಕಾರಣ
ಗೋವಾದಲ್ಲಿ ನಡೆದ ಫಿಲ್ಮ್ಫೇರ್ ಕಾರ್ಯಕ್ರಮದಲ್ಲಿ ನಟ ರಣವೀರ್ ಸಿಂಗ್ ಮಾತನಾಡುವ ವೇಳೆ, ಕಾಂತಾರ 2 ಸಿನಿಮಾದ ಕುರಿತು ಹೇಳಿಕೆ ನೀಡಿದ್ದರು ಎನ್ನಲಾಗಿದೆ. ದೈವ ಸಂಪ್ರದಾಯಕ್ಕೆ ಸಂಬಂಧಿಸಿದ ವಿಷಯದಲ್ಲಿ ಅವಹೇಳನಕಾರಿ ಪದ ಬಳಕೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಈ ಹಿನ್ನೆಲೆ ದೈವ ನಿಂದನೆ ಆರೋಪದಡಿ ಎಫ್ಐಆರ್ ದಾಖಲಿಸಲಾಗಿತ್ತು.
ಇದನ್ನು ಓದಿ : ಮಾಜಿ ಶಾಸಕ Suresh Gowdaರ ಕಾರು ಅಪಘಾತ – ಮದುವೆಗೆ ತೆರಳುತ್ತಿದ್ದಾಗ ಪಲ್ಟಿಯಾದ ಕಾರು

ವಕೀಲ ಪ್ರಶಾಂತ್ ನೀಡಿದ ದೂರಿನ ಆಧಾರದ ಮೇಲೆ ಹೈಗ್ರೌಂಡ್ಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೇಸ್ ದಾಖಲಾಗಿ ಈಗಾಗಲೇ 20ಕ್ಕೂ ಹೆಚ್ಚು ದಿನಗಳು ಕಳೆದಿದ್ದರೂ ತನಿಖೆಗೆ ಅಗತ್ಯ ಪ್ರತಿಕ್ರಿಯೆ ನಟನಿಂದ ಲಭ್ಯವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರು ನಟನ ಮುಂಬೈ ನಿವಾಸಕ್ಕೆ ನೋಟಿಸ್ ಕಳುಹಿಸಿದ್ದು ಮಾತ್ರವಲ್ಲದೆ, ವಾಟ್ಸಪ್ ಮೂಲಕವೂ ಮಾಹಿತಿ ರವಾನಿಸಿದ್ದಾರೆ. ಆದರೂ ಯಾವುದೇ ಸ್ಪಷ್ಟ ಪ್ರತಿಕ್ರಿಯೆ ದೊರಕದ ಹಿನ್ನೆಲೆಯಲ್ಲಿ ಮತ್ತೊಮ್ಮೆ ನೋಟಿಸ್ ನೀಡಲು ಪೊಲೀಸರು ಮುಂದಾಗಿದ್ದಾರೆ.
ನೋಟಿಸ್ಗೆ ಸ್ಪಂದನೆ ಸಿಗದಿದ್ದರೆ ಕಾನೂನು ಕ್ರಮಗಳನ್ನು ಕೈಗೊಳ್ಳುವ ಸಾಧ್ಯತೆ ಇದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಪ್ರಕರಣದ ಮುಂದಿನ ಬೆಳವಣಿಗೆಗಳತ್ತ ಸಿನಿ ಹಾಗೂ ಅಭಿಮಾನಿ ವಲಯದ ಗಮನ ನೆಟ್ಟಿದೆ.
ಇದನ್ನು ನೋಡಿ : POLICE ಕಾಟಕ್ಕೆ ವಿಧವೆ ಸೂಸೈ ಅಪ್ಪ ಅಮ್ಮನನ್ನು ಕಳೆದು ಕೊಂಡ ಮಕ್ಕಳು




