Hassan : ಹಂಪ್ಸ್ ಕಾಣದೇ ಇಬ್ಬರು ಯುವತಿಯರು ರಸ್ತೆಗೆ ಬಿದ್ದ ದುರಂತದಲ್ಲಿ ಓರ್ವಳು ಸಾವನ್ನಪ್ಪಿದ್ದು, ಮತ್ತೊಬ್ಬಳು ಗಂಭೀರ ಗಾಯಗೊಂಡಿದ್ದಾರೆ. ಘಟನೆ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

Hassan : ಜಾಲಿ ರೈಡ್ ವೇಳೆ ನಡೆದ ಭೀಕರ ಅಪಘಾತದಲ್ಲಿ ಯುವತಿ ಸಾವನ್ನಪ್ಪಿರುವ ಘಟನೆ ನಗರದ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಹಂಪ್ಸ್ ಕಾಣದೇ ಬುಲೆಟ್ ಬೈಕ್ ನಿಯಂತ್ರಣ ತಪ್ಪಿ ಇಬ್ಬರು ಯುವತಿಯರು ರಸ್ತೆಗೆ ಬಿದ್ದು ಈ ದುರಂತ ಸಂಭವಿಸಿದೆ.
ಮೃತರು ಮತ್ತು ಗಾಯಾಳುವಿನ ವಿವರ
ಸತ್ಯಮಂಗಲ ಬಡಾವಣೆಯ ಪ್ರಿಯಾ (23) ಮೃತ ಯುವತಿಯಾಗಿದ್ದು, ಸ್ವಾತಿ (24) ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳು ಸ್ವಾತಿಯನ್ನು ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರು ನಗರದ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಪ್ರಿಯಾ ಖಾಸಗಿ ಕಾಲೇಜಿನಲ್ಲಿ ಎಂಸಿಎ ಫೈನಲ್ ಇಯರ್ ಓದುತ್ತಿದ್ದಳು ಎಂದು ತಿಳಿದುಬಂದಿದೆ. ಸ್ವಾತಿಗೆ ಕಳೆದ ನವೆಂಬರ್ನಲ್ಲಿ ಮದುವೆಯಾಗಿತ್ತು ಎನ್ನಲಾಗಿದೆ.
ಇದನ್ನೂ ಓದಿ : ಏ.1ರಿಂದ ಟೋಲ್ಗಳಲ್ಲಿ ನಗದು ಪಾವತಿ ಇಲ್ಲ?

ಹೆಲ್ಮೆಟ್ ಧರಿಸದೇ ಜಾಲಿ ರೈಡ್
ಇಬ್ಬರೂ ಯುವತಿಯರು ಹೆಲ್ಮೆಟ್ ಧರಿಸದೇ ಬುಲೆಟ್ ಬೈಕ್ನಲ್ಲಿ ಜಾಲಿ ರೈಡ್ಗೆ ಹೊರಟಿದ್ದರು. ಪ್ರಿಯಾ ಬೈಕ್ ಚಲಾಯಿಸುತ್ತಿದ್ದು, ಸ್ವಾತಿ ಹಿಂಬದಿ ಸೀಟ್ನಲ್ಲಿ ಕುಳಿತಿದ್ದಳು. ಇದೇ ವೇಳೆ ರಸ್ತೆಯಲ್ಲಿದ್ದ ಹಂಪ್ಸ್ ಕಾಣದೇ ಬೈಕ್ ನಿಯಂತ್ರಣ ತಪ್ಪಿ ಇಬ್ಬರೂ ರಸ್ತೆಗೆ ಹಾರಿ ಬಿದ್ದಿದ್ದಾರೆ.

ಪೊಲೀಸರ ಪರಿಶೀಲನೆ
ಅಪಘಾತದ ಮಾಹಿತಿ ತಿಳಿದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣವು ಹಾಸನ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.
MUST WATCH : ರಾಜ್ಯದ ಜನರಿಗೆ ಕರೆಂಟ್ ಶಾಕ್ ದುಬಾರಿ ದುನಿಯಾದಲ್ಲಿ ಲೈಫ್ ಕಾಸ್ಟ್ಲಿ




