Karnataka Heatwave Alert : ಕರ್ನಾಟಕದಲ್ಲಿ ಈ ಬಾರಿ ವಾಡಿಕೆಗಿಂತ ಹೆಚ್ಚು ತಾಪಮಾನ ದಾಖಲಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ…

Karnataka Heatwave Alert : ಚಳಿಗಾಲ ಮುಗಿಯುತ್ತಿದ್ದಂತೆ ರಾಜ್ಯದಲ್ಲಿ ಬಿಸಿಲಿನ ತಾಪಮಾನ ವೇಗವಾಗಿ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಮಹತ್ವದ ಎಚ್ಚರಿಕೆ ನೀಡಿದ್ದು, ಈ ಬಾರಿ ಬೇಸಿಗೆಯಲ್ಲಿ ವಾಡಿಕೆಗಿಂತ ಹೆಚ್ಚು ತಾಪಮಾನ ದಾಖಲಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.
ಹಲವು ಜಿಲ್ಲೆಗಳಲ್ಲಿ ಈಗಾಗಲೇ ತಾಪಮಾನ ಏರಿಕೆ
ರಾಜ್ಯದ ಹಲವಾರು ಭಾಗಗಳಲ್ಲಿ ಈಗಾಗಲೇ 2 ರಿಂದ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಳ ದಾಖಲಾಗಿದೆ. ವಿಶೇಷವಾಗಿ ಕಲಬುರಗಿ, ಹಾವೇರಿ, ಬಾಗಲಕೋಟೆ, ಶಿವಮೊಗ್ಗ ಹಾಗೂ ಉತ್ತರ ಕನ್ನಡ ಪ್ರದೇಶಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಬಿಸಿಲು ಕಾಣಿಸಿಕೊಂಡಿದೆ.
ಇದನ್ನು ಓದಿ : ಓವರ್ಡೋಸ್ ಇಂಜೆಕ್ಷನ್ ಚುಚ್ಚಿಕೊಂಡು ವಿದ್ಯಾರ್ಥಿ Suicide.!

ಏಪ್ರಿಲ್–ಮೇನಲ್ಲಿ ತಾಪಮಾನ ಮತ್ತಷ್ಟು ಏರಿಕೆ ಸಾಧ್ಯ
ಹವಾಮಾನ ಇಲಾಖೆ ಮಾಹಿತಿ ಪ್ರಕಾರ ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ಬಿಸಿಲಿನ ತೀವ್ರತೆ ಇನ್ನಷ್ಟು ಹೆಚ್ಚಾಗಲಿದೆ. ಉತ್ತರ ಒಳನಾಡಿನ ಯಾದಗಿರಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ತಾಪಮಾನ 42 ರಿಂದ 45 ಡಿಗ್ರಿ ಸೆಲ್ಸಿಯಸ್ವರೆಗೆ ಏರಬಹುದು ಎಂದು ಅಂದಾಜಿಸಲಾಗಿದೆ. ಬೆಂಗಳೂರಿನಲ್ಲಿಯೂ ಗರಿಷ್ಠ ತಾಪಮಾನ 39 ಡಿಗ್ರಿ ಸೆಲ್ಸಿಯಸ್ ತಲುಪುವ ಸಾಧ್ಯತೆ ಇದೆ.

ಬಿಸಿಲು ಹೆಚ್ಚಲು ಕಾರಣವೇನು?
ಭಾರತೀಯ ಹವಾಮಾನ ಇಲಾಖೆ ಅಧಿಕಾರಿಗಳ ಪ್ರಕಾರ ಮಾರ್ಚ್ 1ರಿಂದ ಅಧಿಕೃತವಾಗಿ ಬೇಸಿಗೆ ಆರಂಭವಾಗಲಿದೆ. ಆದರೆ ಜಾಗತಿಕ ತಾಪಮಾನ ಏರಿಕೆ ಹಾಗೂ ತೇವಾಂಶದ ಕೊರತೆಯಿಂದ ಫೆಬ್ರವರಿಯಲ್ಲೇ ಬಿಸಿಲಿನ ತೀವ್ರತೆ ಹೆಚ್ಚಾಗಿದೆ. ಮುಂದಿನ ದಿನಗಳಲ್ಲಿ ಜನರು ಆರೋಗ್ಯದ ಬಗ್ಗೆ ವಿಶೇಷ ಜಾಗರೂಕತೆ ವಹಿಸುವಂತೆ ಸೂಚಿಸಲಾಗಿದೆ.
ಇದನ್ನು ನೋಡಿ : GUBBI | CANCER ಪೀಡಿತ ಕರುಳ ಹಿಂಡುವ ಪುಟ್ಟ ಕಂದಮ್ಮನ ಕಣ್ಣೀರಿನ ಕಥೆ.!




