
India Test Squad : ವೆಸ್ಟ್ ಇಂಡೀಸ್ ವಿರುದ್ಧದ ಮುಂಬರುವ ಟೆಸ್ಟ್ ಸರಣಿಗಾಗಿ ಬಿಸಿಸಿಐ ಭಾರತ ತಂಡ ವನ್ನು ಅಧಿಕೃತವಾಗಿ ಪ್ರಕಟಿಸಿದೆ. 15 ಸದಸ್ಯರ ಈ ಬಳಗವನ್ನು ಯುವ ಬ್ಯಾಟ್ಸ್ಮನ್ ಶುಭ್ಮನ್ ಗಿಲ್ ಮುನ್ನಡೆಸಲಿದ್ದಾರೆ. ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಗಿಲ್ಗೆ ಇದು ನಾಯಕತ್ವದ ಮೊದಲ ಅವಕಾಶವಾಗಲಿದೆ. ಇನ್ನು ರವೀಂದ್ರ ಜಡೇಜಾ ಉಪನಾಯಕನಾಗಿ ನೇಮಕ ವಾಗಿದ್ದಾರೆ.
ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಉಪನಾಯಕನಾಗಿದ್ದ ರಿಷಭ್ ಪಂತ್ ಗಾಯದ ಕಾರಣ ಈ ಸರಣಿ ಯಿಂದ ಹೊರಗುಳಿದಿದ್ದಾರೆ. ಅವರ ಅಲಭ್ಯತೆಯಿಂದಾಗಿ ಯುವ ವಿಕೆಟ್ ಕೀಪರ್ ಧ್ರುವ್ ಜುರೆಲ್ ಅವರಿಗೆ ಮೊದಲ ಆಯ್ಕೆಯಾಗಿದ್ದು, ತಮಿಳುನಾಡಿನ ಎನ್. ಜಗದೀಶನ್ ಬ್ಯಾಕಪ್ ಕೀಪರ್ ಆಗಿ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಬ್ಯಾಟಿಂಗ್ ಕ್ರಮ ಮತ್ತು ಪ್ರಮುಖ ಆಟಗಾರರು
- ಆರಂಭಿಕರಾಗಿ ಯಶಸ್ವಿ ಜೈಸ್ವಾಲ್ ಮತ್ತು ಕೆಎಲ್ ರಾಹುಲ್ ಇನಿಂಗ್ಸ್ ಆರಂಭಿಸಲಿದ್ದಾರೆ.
- ಸಾಯಿ ಸುದರ್ಶನ್ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಲಿದ್ದಾರೆ.
- ನಾಯಕ ಶುಭ್ಮನ್ ಗಿಲ್ ನಾಲ್ಕನೇ ಕ್ರಮಾಂಕದಲ್ಲಿ ಆಡಲಿದ್ದಾರೆ.
- ಐದನೇ ಕ್ರಮಾಂಕದಲ್ಲಿ ಧ್ರುವ್ ಜುರೆಲ್ ಕೀಪರ್-ಬ್ಯಾಟ್ಸ್ಮನ್ ರೂಪದಲ್ಲಿ ಬರಲಿದ್ದಾರೆ.
ಇನ್ನು ಆಲ್ರೌಂಡರ್ಗಳಾಗಿ ರವೀಂದ್ರ ಜಡೇಜಾ ಹಾಗೂ ವಾಷಿಂಗ್ಟನ್ ಸುಂದರ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ವೇಗಿಗಳಾಗಿ ಜಸ್ಪ್ರೀತ್ ಬುಮ್ರಾ. ಮೊಹಮ್ಮದ್ ಸಿರಾಜ್ ಹಾಗೂ ಆಕಾಶ್ ದೀಪ್ ತಂಡ ದಲ್ಲಿದ್ದಾರೆ. ಅದರಂತೆ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗೆ ಭಾರತ ತಂಡ ಈ ಕೆಳಗಿನಂತಿದೆ.
ಭಾರತ ಟೆಸ್ಟ್ ತಂಡ: ಶುಭ್ಮನ್ ಗಿಲ್ (ನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದ ರ್ಶನ್, ದೇವದತ್ ಪಡಿಕ್ಕಲ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ನಿತೀಶ್ ಕುಮಾರ್ ರೆಡ್ಡಿ, ಎನ್ ಜಗದೀಸನ್ (ವಿಕೆಟ್ ಕೀಪರ್).




