Ramanagar ದಲ್ಲಿ ಸಾಫ್ಟ್ವೇರ್ ಉದ್ಯೋಗಿಯ ಮನೆ ಬೀಗ ಮುರಿದು ಅರ್ಧ ಕೆಜಿ ಚಿನ್ನ ದರೋಡೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ…

Ramanagar ಜಿಲ್ಲೆಯಲ್ಲಿ ಮನೆ ಬೀಗ ಮುರಿದು ಅರ್ಧ ಕೆ.ಜಿ ಚಿನ್ನ ದರೋಡೆ ಮಾಡಿರುವ ಘಟನೆ ಭಾರೀ ಆತಂಕ ಸೃಷ್ಟಿಸಿದೆ. ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ದ್ಯಾವರಸೇಗೌಡನದೊಡ್ಡಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ.
ಸಾಫ್ಟ್ವೇರ್ ಉದ್ಯೋಗಿ ಲಿಖಿತ್ ಅವರ ಮನೆಯಲ್ಲಿ ಕಳ್ಳತನ ನಡೆದಿದ್ದು, ಮನೆಯಲ್ಲಿಯಾರೂ ಇಲ್ಲದ ಸಮಯವನ್ನು ಖದೀಮರು ಸದುಪಯೋಗಪಡಿಸಿಕೊಂಡಿದ್ದಾರೆ. ಮನೆ ಬೀಗ ಮುರಿದು ಒಳನುಗ್ಗಿದ ಆರೋಪಿಗಳು ನೇರವಾಗಿ ಬೆಡ್ ರೂಂನಲ್ಲಿದ್ದ ಕಬೋರ್ಡ್ ತೆರೆಯಿಸಿ ಚಿನ್ನಾಭರಣಗಳನ್ನು ದೋಚಿದ್ದಾರೆ.
ಇದನ್ನು ಓದಿ : Hassan|ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವು ಆರೋಪ

ಮನೆಗೆ ಬಂದ ಮಾಲೀಕನಿಗೆ ಶಾಕ್
ಸಂಜೆ ಮನೆಗೆ ಹಿಂದಿರುಗಿದ ಲಿಖಿತ್ ಅವರು ಬೀಗ ಮುರಿದಿರುವುದನ್ನು ಗಮನಿಸಿ ಬೆಚ್ಚಿಬಿದ್ದರು. ನಂತರ ಒಳಗೆ ಪರಿಶೀಲನೆ ನಡೆಸಿದಾಗ ಕಬೋರ್ಡ್ನಲ್ಲಿದ್ದ ಅರ್ಧ ಕೆಜಿ ಚಿನ್ನಾಭರಣ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ.
ಇನ್ನು ಕಳ್ಳರು ತಮ್ಮ ಗುರುತು ಪತ್ತೆಯಾಗದಂತೆ ಮನೆಯಲ್ಲಿದ್ದ ಸಿಸಿಟಿವಿ ಡಿವಿಆರ್ ಅನ್ನು ಸಹ ಹೊತ್ತುಕೊಂಡು ಹೋಗಿದ್ದಾರೆ. ಇದರಿಂದ ಪ್ರಕರಣ ಮತ್ತಷ್ಟು ಗಂಭೀರವಾಗಿದ್ದು, ಪೊಲೀಸರಿಗೆ ತನಿಖೆ ಸವಾಲಾಗಿದೆ..

ಘಟನೆ ತಿಳಿಯುತ್ತಿದ್ದಂತೆ ರಾಮನಗರ ಟೌನ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಡಿವೈಎಸ್ಪಿ ಶ್ರೀನಿವಾಸ್ ನೇತೃತ್ವದಲ್ಲಿ ಆರೋಪಿಗಳ ಬಂಧನಕ್ಕಾಗಿ ವಿಶೇಷ ತಂಡ ರಚಿಸಲಾಗಿದ್ದು, ಅಕ್ಕಪಕ್ಕದ ಮನೆಗಳ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ.
ಈ ಘಟನೆ ಬಳಿಕ ಪ್ರದೇಶದ ನಿವಾಸಿಗಳಲ್ಲಿ ಆತಂಕ ಹೆಚ್ಚಾಗಿದೆ. ಮನೆಗಳಲ್ಲಿ ಭದ್ರತಾ ಕ್ರಮಗಳನ್ನು ಹೆಚ್ಚಿಸಿಕೊಳ್ಳುವಂತೆ ಪೊಲೀಸರು ಸಾರ್ವಜನಿಕರಿಗೆ ಸಲಹೆ ನೀಡಿದ್ದಾರೆ.
ಇದನ್ನು ನೋಡಿ : ROKING STAR YASH | ರಾಕಿಂಗ್ ಸ್ಟಾರ್ ನ ಹೊಸ ಗೆಟಪ್ಮೇಕಿಂಗ್ ವಿಡಿಯೋಗೆ ಫ್ಯಾನ್ಸ್ ಫಿದಾ




