ಬೆಂಗಳೂರು Chickpet ಮೆಟ್ರೋ ನಿಲ್ದಾಣದ ಬಳಿ ಶಾರ್ಟ್ ಸರ್ಕ್ಯೂಟ್ನಿಂದ ಫ್ಯಾನ್ಸಿ ಸ್ಟೋರ್ನಲ್ಲಿ ಬೆಂಕಿ ಕಾಣಿಸಿಕೊಂಡು ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾದವು.

ಬೆಂಗಳೂರು ನಗರದ ವ್ಯಾಪಾರಿಕ ಪ್ರದೇಶದಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. Chickpet ಮೆಟ್ರೋ ನಿಲ್ದಾಣ ಸಮೀಪದ ಫ್ಯಾನ್ಸಿ ಸ್ಟೋರ್ನಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡಿದ್ದು, ಸುತ್ತಮುತ್ತ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಇಂದು ಬೆಳಿಗ್ಗೆ ಸುಮಾರು 7 ಗಂಟೆ ಸುಮಾರಿಗೆ ಅಂಗಡಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ ಪರಿಣಾಮ ಬೆಂಕಿ ಕಾಣಿಸಿಕೊಂಡಿದೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ. ಬೆಂಕಿ ವೇಗವಾಗಿ ವ್ಯಾಪಿಸಿ ಸುಮಾರು 20 ಅಂಗಡಿಗಳಿದ್ದ ಕಟ್ಟಡಕ್ಕೆ ಹಾನಿ ಉಂಟುಮಾಡಿದೆ.
ಇದನ್ನು ಓದಿ : Hassan|ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವು ಆರೋಪ
ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ
ಫ್ಯಾನ್ಸಿ ಸ್ಟೋರ್ನಲ್ಲಿ ಸಂಗ್ರಹಿಸಲಾಗಿದ್ದ ವಸ್ತುಗಳು ಬೆಂಕಿಗಾಹುತಿಯಾಗಿದ್ದು ಲಕ್ಷಾಂತರ ರೂಪಾಯಿ ಮೌಲ್ಯದ ನಷ್ಟ ಉಂಟಾಗಿದೆ. ವ್ಯಾಪಾರಿಗಳಿಗೆ ಭಾರಿ ಆರ್ಥಿಕ ಹೊಡೆತ ಬಿದ್ದಿದೆ.
ಅಗ್ನಿಶಾಮಕ ದಳದ ತೀವ್ರ ಕಾರ್ಯಾಚರಣೆ
ಘಟನೆ ತಿಳಿಯುತ್ತಿದ್ದಂತೆ ಆರು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡಾಯಿಸಿವೆ. ದಟ್ಟ ಹೊಗೆ ಆವರಿಸಿದ್ದರಿಂದ ಅಗ್ನಿಶಾಮಕ ಸಿಬ್ಬಂದಿ ಆಕ್ಸಿಜನ್ ಸಿಲಿಂಡರ್ ಮತ್ತು ಮಾಸ್ಕ್ ಧರಿಸಿ ಅಂಗಡಿ ಒಳಗೆ ಪ್ರವೇಶಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಕಳೆದ ಒಂದು ಗಂಟೆಯಿಂದ ನಿರಂತರ ಕಾರ್ಯಾಚರಣೆ ನಡೆಯುತ್ತಿದೆ.
ಘಟನೆಯ ಬಳಿಕ ಪ್ರದೇಶದಲ್ಲಿ ಜನರು ಸೇರಿಕೊಂಡಿದ್ದು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಆದರೆ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಣಕ್ಕೆ ತರಲು ಶ್ರಮಿಸುತ್ತಿದ್ದು, ಹೆಚ್ಚಿನ ಹಾನಿ ತಪ್ಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ.
ಇದನ್ನು ನೋಡಿ : ROKING STAR YASH | ರಾಕಿಂಗ್ ಸ್ಟಾರ್ ನ ಹೊಸ ಗೆಟಪ್ಮೇಕಿಂಗ್ ವಿಡಿಯೋಗೆ ಫ್ಯಾನ್ಸ್ ಫಿದಾ




