Yadgir : ಪ್ರಚೋದನಕಾರಿ ಭಾಷಣ; ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪ್ರಕರಣ ದಾಖಲು.

Yadgir : ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪ್ರಚೋದನಕಾರಿ ಹಾಗೂ ವಿವಾದಾತ್ಮಕ ಭಾಷಣ ಮಾಡಿದ ಆರೋಪದಡಿಪ್ರಕರಣ ದಾಖಲಾಗಿದೆ.
ಪ್ರಚೋದನಕಾರಿ ಭಾಷಣ
ಜಿಲ್ಲೆಯ ಗುರುಮಠಕಲ್ ಪಟ್ಟಣದಲ್ಲಿ ಫೆಬ್ರವರಿ 21ರಂದು ನಡೆದ ಶಿವಾಜಿ ಜಯಂತಿ ಅಂಗವಾಗಿ ಆಯೋಜಿಸಿದ್ದ ಬಹಿರಂಗ ಸಭೆಯಲ್ಲಿ ಮಾತನಾಡಿದ ವೇಳೆ ಅವರು ಒಂದು ಸಮುದಾಯದ ವಿರುದ್ಧ ಆಕ್ಷೇಪಾರ್ಹ ಟೀಕೆಗಳನ್ನು ಮಾಡಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. ದೇಶದ ಕುರಿತು ಕೂಡ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಇದನ್ನು ಓದಿ : ಪಿಂಕ್ ಸಿಟಿಯಾದ ನಮ್ಮ ಬೆಂಗಳೂರು!

“ಗಾಂಧೀಜಿ ಪಾಕಿಸ್ತಾನದ ಪಿತಾಮಹ”
ಸಭೆಯಲ್ಲಿ “ಈ ದೇಶದಲ್ಲಿ ಇರಬೇಕಾದರೆ ಒಂದೇ ಮಾತರಂ ಹೇಳಬೇಕು” ಎಂದು ಹೇಳಿದ ಅವರು, ಮಹಾತ್ಮ ಗಾಂಧಿ ಕುರಿತು “ಗಾಂಧೀಜಿ ಪಾಕಿಸ್ತಾನದ ಪಿತಾಮಹ” ಎಂದು ಹೇಳಿಕೆ ನೀಡಿರುವುದಾಗಿ ದೂರಿನಲ್ಲಿ ಆರೋಪಿಸಲಾಗಿದೆ.
ಸ್ವಯಂಪ್ರೇರಿತ ದೂರು ದಾಖಲು – Yadgir
ಶಾಸಕರ ಹೇಳಿಕೆಗಳು ಸಮಾಜದ ಶಾಂತಿ ಮತ್ತು ಸೌಹಾರ್ದತೆಗೆ ಧಕ್ಕೆ ತರುವಂತಿವೆ ಎಂದು ಪರಿಗಣಿಸಿ ಗುರುಮಠಕಲ್ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ದೂರು ದಾಖಲಿಸಲಾಗಿದೆ. ಅವರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 196, 299, 302, 352 ಮತ್ತು 353 ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನು ನೋಡಿ : DHARWAD|ಉದ್ಯೋಗಾಕಾಂಕ್ಷಿಗಳ ಬೃಹತ್ ಪ್ರತಿಭಟನೆ ಹೇಗಿತ್ತು ಗೊತ್ತಾ ಪ್ರತಿಭಟನಾ ಜ್ವಾಲೆ




