Sira : ಕೆಟ್ಟು ನಿಂತಿದ್ದ ಬಸ್ಗೆ ಬೈಕ್ ಡಿಕ್ಕಿ – ಬೈಕ್ ಸವಾರ ಸ್ಥಳದಲ್ಲೇ ಸಾವು,ಓರ್ವ ಗಂಭೀರ.

ಕೆಟ್ಟು ನಿಂತಿದ್ದ ಬಸ್ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ Sira ತಾಲೂಕಿನ ಕಳ್ಳಂಬೆಳ್ಳ ಪೊಲೀಸ್ ಠಾಣಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಸ್ಥಳದಲ್ಲೇ ಸವಾರ ದಾರುಣ ಸಾವು
ಚೇಳೂರು ಸಮೀಪದ ದೊಡ್ಡ ವೀರನಹಳ್ಳಿ ಗ್ರಾಮದ ನಿವಾಸಿ ಭರತ್ ಮೃತ ದುರ್ದೈವಿ. ಕಳೆದ ರಾತ್ರಿ 9ಗಂಟೆ ಸುಮಾರಿಗೆ ಶಿರಾ ಕಡೆಯಿಂದ ಇಬ್ಬರು ಯುವಕರು ಬೈಕ್ನಲ್ಲಿ ತೆರಳುತ್ತಿದ್ದಾಗ, ಹೆದ್ದಾರಿಯಲ್ಲಿ ಕೆಟ್ಟು ನಿಂತಿದ್ದ ಬಸ್ಗೆ ಬೈಕ್ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ರೆ. ಹಿಂಬದಿಯಲ್ಲಿ ಕುಳಿತಿದ್ದ ಮತ್ತೋರ್ವನಿಗೆ ಗಂಭೀರ ಗಾಯಗಳಾಗಿದ್ದು, ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ರವಾನಿಸಿದ್ದಾರೆ.
ಇದನ್ನು ಓದಿ : ಭದ್ರಾ ಮೇಲ್ದಂಡೆ ಯೋಜನೆ ಪ್ರಗತಿ ಪರಿಶೀಲನಾ ಸಭೆ.!

ಪ್ರಕರಣ ದಾಖಲು
ಇನ್ನು ಘಟನೆ ಸಂಬಂಧ ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಇದನ್ನು ನೋಡಿ : ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವು? – ಹಿಮ್ಸ್ ಆಸ್ಪತ್ರೆ ಬಳಿ ಗಂಡನ ಗೋಳಾಟ




