Bengaluru : ಭದ್ರಾ ಮೇಲ್ದಂಡೆ ಯೋಜನೆಯ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯನ್ನು ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ
ಟಿ.ಬಿ. ಜಯಚಂದ್ರ ಅವರ ನೇತೃತ್ವದಲ್ಲಿ ವಿಧಾನಸೌಧದಲ್ಲಿ ನಡೆಸಲಾಯ್ತು.

Bengaluru : ಭದ್ರಾ ಮೇಲ್ದಂಡೆ ಯೋಜನೆಯ ಮೊದಲ ಹಂತದ ಕಾಮಗಾರಿ ಪೂರ್ಣಗೊಂಡಿದ್ದು, ಮುಂದಿನ ತಿಂಗಳು ಪ್ರಾಯೋಗಿಕವಾಗಿ ತುಂಗಭದ್ರಾ ನದಿಯಿಂದ ಭದ್ರಾ ಜಲಾಶಯಕ್ಕೆ ನೀರು ಹರಿಸಲಾಗುವುದು ಎಂದು ಶಾಸಕ ಟಿ.ಬಿ. ಜಯಚಂದ್ರ ತಿಳಿಸಿದ್ದಾರೆ.
ಬೆಂಗಳೂರಿನ ವಿಧಾನಸೌಧದಲ್ಲಿ ಟಿ.ಬಿ. ಜಯಚಂದ್ರ ಅವರ ನೇತೃತ್ವದಲ್ಲಿ ಭದ್ರಾ ಮೇಲ್ದಂಡೆ ಯೋಜನೆಯ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಇನ್ನು ಸಭೆಯಲ್ಲಿ ಚಿಕ್ಕನಾಯಕನಹಳ್ಳಿ ಕ್ಷೇತ್ರದ ಶಾಸಕರಾದ ಸಿ.ಬಿ. ಸುರೇಶ್ ಬಾಬು, ಕಡೂರು ಕ್ಷೇತ್ರದ ಶಾಸಕ ಕೆ.ಎಸ್. ಆನಂದ್ ಸೇರಿದಂತೆ ವಿವಿಧ ಅಧಿಕಾರಿಗಳು ಭಾಗವಹಿಸಿದರು.
ಮೊದಲ ಹಂತದಲ್ಲಿ ತುಂಗಾ ನದಿಯಿಂದ ಭದ್ರಾ ಜಲಾಶಯಕ್ಕೆ 17.40 ಟಿಎಂಸಿ ನೀರನ್ನು ಹರಿಸಲಾಗುತ್ತದೆ. ಚಿತ್ರದುರ್ಗ ಶಾಖಾ ಕಾಲುವೆಯ 134 ಕಿಲೋಮೀಟರ್ ಕಾಮಗಾರಿ ಪೂರ್ಣಗೊಂಡಿದ್ದು, ಮಾರ್ಚ್ ಅಂತ್ಯದೊಳಗೆ ಪ್ರಾಯೋಗಿಕವಾಗಿ ನೀರು ಹರಿಸಲು ನಿರ್ಧಾರ ಕೈಗೊಳ್ಳಲಾಯಿತು.
ಇದನ್ನೂ ಓದಿ : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪ್ರಕರಣ ದಾಖಲು

ಭದ್ರಾ ಮೇಲ್ದಂಡೆ ಯೋಜನೆ 5300 ಕೋಟಿ ರೂ. ವೆಚ್ಚದಲ್ಲಿ ರೂಪಿಸಲಾಗಿದ್ದು, ಮಧ್ಯ ಕರ್ನಾಟಕದ ಬರಪೀಡಿತ ಚಿಕ್ಕಮಂಗಳೂರು, ಚಿತ್ರದುರ್ಗ, ತುಮಕೂರು ಹಾಗೂ ದಾವಣಗೆರೆ ಜಿಲ್ಲೆಗಳ 5,57,022 ಎಕರೆ ಪ್ರದೇಶಕ್ಕೆ ಸೂಕ್ಷ್ಮ ನೀರಾವರಿ ಸೌಲಭ್ಯ ಒದಗಿಸುವುದರ ಜೊತೆಗೆ 367 ಕೆರೆಗಳನ್ನು ತುಂಬಿಸುವ ಗುರಿಯನ್ನು ಹೊಂದಿದೆ. ಈ ಯೋಜನೆಯಲ್ಲಿ ಒಟ್ಟು 30 ಟಿಎಂಸಿ ನೀರು ಲಭ್ಯವಿದೆ ಎಂದು ಟಿ.ಬಿ. ಜಯಚಂದ್ರ ತಿಳಿಸಿದರು.
ಶಾಸಕರ ನಿಯೋಗ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಾಯೋಗಿಕ ಚಾಲನೆ ನೀಡಲಿದ್ದು, ತುಮಕೂರು ಶಾಖಾ ಕಾಲುವೆ ಕಾಮಗಾರಿಯನ್ನು ಮಾರ್ಚ್ 2028ರೊಳಗೆ ಪೂರ್ಣಗೊಳಿಸಲು ಗುರಿ ನಿಗದಿಪಡಿಸಲಾಗಿದೆ.
ಇನ್ನು ಅಗತ್ಯ ಅನುದಾನವನ್ನು ಒದಗಿಸುವಂತೆ ಮುಖ್ಯಮಂತ್ರಿಗಳನ್ನು ಶಾಸಕರ ನಿಯೋಗ ಭೇಟಿ ಮಾಡಿ, ಮುಂದಿನ ತಿಂಗಳು ಮಂಡಿಸಲಿರುವ ರಾಜ್ಯ ಬಜೆಟ್ನಲ್ಲಿ ಹಣ ಮೀಸಲಿಡುವಂತೆ ಮನವಿ ಮಾಡುವುದಾಗಿ ಸಭೆಯಲ್ಲಿ ತೀರ್ಮಾನಿಸಲಾಯಿತು.
MUST WATCH : ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವು? – ಹಿಮ್ಸ್ ಆಸ್ಪತ್ರೆ ಬಳಿ ಗಂಡನ ಗೋಳಾಟ




