ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಗದ್ದೆಗೆ ಉರುಳಿ ಬಿದ್ದ ಘಟನೆ Madikeri ಯಲ್ಲಿ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಗದ್ದೆಗೆ ಉರುಳಿ ಬಿದ್ದ ಘಟನೆ ಕೊಡಗು ಜಿಲ್ಲೆಯ Madikeri ತಾಲೂಕಿನ ಬೆಟ್ಟಗೇರಿ ಗ್ರಾಮದಲ್ಲಿ ನಡೆದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ತಾಯಿ-ಮಗ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕಾರು ಸಂಪೂರ್ಣ ಜಖಂ
ಅಪ್ಪಗಂಳ ನಿವಾಸಿಸಾಗರ್ ಎಂಬುವವರು ಮಡಿಕೇರಿ ಮಾರ್ಗ ದಿಂದ ಬರುತ್ತಿದ್ದ ವೇಳೆ ಕಾರು ನಿಯಂತ್ರಣ ತಪ್ಪಿದೆ. ಬೆಟ್ಟಗೇರಿ-ಮಡಿಕೇರಿ ಮಖ್ಯ ರಸ್ತೆಯ ಹಂಪ್ಸ್ ಬಳಿಯ ರಸ್ತೆ ತಿರುವಿನಲ್ಲಿ ನಿಯಂತ್ರಣ ಕಳೆದುಕೊಂಡಿದೆ, ಇದರ ಪರಿಣಾಮ ರಸ್ತೆ ಬದಿಯ 20 ಅಡಿ ಆಳದ ಗದ್ದೆಗೆ ಕಾರು ಉರಳಿಬಿದ್ದು ಸಂಪೂರ್ಣ ಜಖಂಗೊಂಡಿದೆ.
ಇದನ್ನು ನೋಡಿ : TUMAKURU|ನಾಗರಹಾವು ಕಚ್ಚಿ ಬಾಲಕ ಸಾವು ಕುಟುಂಬಸ್ಥರಿಂದ ವೈದ್ಯರ ನಿರ್ಲಕ್ಷ್ಯ ಆರೋಪ

ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು
ಅದೃಷ್ಟವಶಾತ್ ಕಾರಿನಲ್ಲಿದ್ದ ತಾಯಿ-ಮಗ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರಿನೊಳಗೆ ಸಿಲುಕ್ಕಿದ್ದ ತಾಯಿ ಹಾಗೂ ಮಗನನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಇನ್ನು ಘಟನೆ ಸಂಬಂಧ ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನು ಓದಿ : Sira|ಬಸ್ಗೆ ಬೈಕ್ ಡಿಕ್ಕಿ – ಸ್ಥಳದಲ್ಲೇ ಸವಾರ ದಾರುಣ ಸಾವು





