ರಾಜಸ್ಥಾನದ ಉದಯಪುರದಲ್ಲಿ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಮದುವೆ ಬಳಿಕ Karnataka ದಲ್ಲೂ ಆರತಕ್ಷತೆ ನಡೆಯಲಿದೆ ಎನ್ನುವ ಸುದ್ದಿ ಹರಿದಾಡುತ್ತಿದೆ…

Karnataka : ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಅವರ ವಿವಾಹ ಫೆಬ್ರವರಿ 26ರಂದು ಉದಯಪುರದಲ್ಲಿ ನಡೆಯಲಿದೆ ಎನ್ನುವ ಸುದ್ದಿ ಸಿನಿರಂಗದಲ್ಲಿ ಚರ್ಚೆಯಾಗುತ್ತಿದೆ.
ಮದುವೆ ಕಾರ್ಯಕ್ರಮಗಳು ಈಗಾಗಲೇ ಆರಂಭವಾಗಿದ್ದು, ಕುಟುಂಬ ಸದಸ್ಯರು ಮತ್ತು ಆಪ್ತ ಸ್ನೇಹಿತರು ಅರಮನೆಯಂತಿರುವ ರೆಸಾರ್ಟ್ನಲ್ಲಿ ಭಾಗಿಯಾಗಿದ್ದಾರೆ.
ಮದುವೆಗೆ ಅತಿ ಆಪ್ತರನ್ನು ಮಾತ್ರ ಆಹ್ವಾನಿಸಲಾಗಿದ್ದು, ಅಭಿಮಾನಿಗಳಿಗೆ ಭಾಗವಹಿಸುವ ಅವಕಾಶ ಇಲ್ಲ ಎನ್ನಲಾಗಿದೆ..
ಇದನ್ನು ಓದಿ : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪ್ರಕರಣ ದಾಖಲು

ಮಾರ್ಚ್ 4ರಂದು ಹೈದರಾಬಾದ್ನಲ್ಲಿ ಗ್ರ್ಯಾಂಡ್ ರಿಸೆಪ್ಷನ್
ಮದುವೆಯ ಬಳಿಕ ಮಾರ್ಚ್ 4ರಂದು ಭವ್ಯ ಆರತಕ್ಷತೆ ಕಾರ್ಯಕ್ರಮವನ್ನು ಹೈದರಾಬಾದ್ನಲ್ಲಿ ಆಯೋಜಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಸಿನಿಮಾ ಮತ್ತು ರಾಜಕೀಯ ಗಣ್ಯರನ್ನು ಆಹ್ವಾನಿಸಲಾಗಿದ್ದು, ಅದ್ಧೂರಿ ಸಮಾರಂಭ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
ಕೊಡಗಿನ ಹುಡುಗಿ ರಶ್ಮಿಕಾ ಮಂದಣ್ಣ ಅವರಿಗೆ ಕರ್ನಾಟಕದಲ್ಲಿ ಅಪಾರ ಅಭಿಮಾನಿ ಬಳಗವಿದೆ.
ವಿಶೇಷವಾಗಿ ಕೊಡಗು ಜಿಲ್ಲೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅವರ ಕುಟುಂಬದ ಸಂಬಂಧಿಗಳು ಮತ್ತು ಸ್ನೇಹಿತರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ.

ಈ ಹಿನ್ನೆಲೆ ಕರ್ನಾಟಕದ ಅಭಿಮಾನಿಗಳು ಹಾಗೂ ಬಂಧುಗಳಿಗೆ ಪ್ರತ್ಯೇಕವಾಗಿ ಆರತಕ್ಷತೆ ಅಥವಾ ಔತಣಕೂಟ ಆಯೋಜಿಸಲು ಕುಟುಂಬ ನಿರ್ಧರಿಸಿದೆ ಎನ್ನಲಾಗಿದೆ.
ವಿರಾಜಪೇಟೆಯಲ್ಲಿ ವಿಶೇಷ ಔತಣಕೂಟ ಸಾಧ್ಯತೆ
ಮೂಲಗಳ ಪ್ರಕಾರ, ವಿರಾಜಪೇಟೆಯಲ್ಲಿ ರಶ್ಮಿಕಾ ಅವರ ತಂದೆ ಮದನ್ ಮಂದಣ್ಣ ಅವರ ಐಷಾರಾಮಿ ಕಲ್ಯಾಣ ಮಂಟಪದಲ್ಲೇ ಕಾರ್ಯಕ್ರಮ ಆಯೋಜಿಸಲು ಯೋಜನೆ ರೂಪಿಸಲಾಗಿದೆ.
ಸಂಬಂಧಿಗಳು ಮತ್ತು ಕುಟುಂಬ ಸ್ನೇಹಿತರಿಗಾಗಿ ವಿಶೇಷವಾಗಿ ಈ ಸಮಾರಂಭ ನಡೆಯಲಿದೆ.
ಹೈದರಾಬಾದ್ ಆರತಕ್ಷತೆ ಬಳಿಕ ನವ ದಂಪತಿ ಹನಿಮೂನ್ಗಾಗಿ ವಿದೇಶಕ್ಕೆ ತೆರಳಲಿದ್ದಾರೆ.
ಬಳಿಕ ಅವರು ವಾಪಸ್ ಬಂದ ನಂತರ ಏಪ್ರಿಲ್ ತಿಂಗಳಲ್ಲಿ ವಿರಾಜಪೇಟೆಯಲ್ಲಿ ಆರತಕ್ಷತೆ ನಡೆಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಹೀಗಾಗಿ ಕರ್ನಾಟಕದ ಅಭಿಮಾನಿಗಳಿಗೆ ಸಹ ವಿಜಯ್–ರಶ್ಮಿಕಾ ಮದುವೆ ಸಂಭ್ರಮವನ್ನು ಹತ್ತಿರದಿಂದ ನೋಡುವ ಅವಕಾಶ ಸಿಗಲಿದೆ ಎಂಬ ನಿರೀಕ್ಷೆ ಹೆಚ್ಚಾಗಿದೆ…
ಇದನ್ನು ನೋಡಿ : GUBBI|ಕ್ಯಾನ್ಸರ್ ಪೀಡಿತ ಬಾಲಕಿಯ ನೆರವಿಗೆ ನಿಂತ ಪ್ರಜಾಶಕ್ತಿ ಟಿವಿ- ಅಧಿಕಾರಿಗಳನ್ನೇ ತಿರುಗಿನೋಡುವಂತೆ ಮಾಡಿತು




