Tumakuru ಜಿಲ್ಲೆಯ ಕುಣಿಗಲ್ ತಾಲೂಕಿನ ನಾಗೇಗೌಡನಪಾಳ್ಯದಲ್ಲಿ ತಾಜ್ ದರ್ಬಾರ್ ಹೋಟೆಲ್ನಲ್ಲಿ ಭೀಕರ ಅಗ್ನಿ ಅವಘಡ.

Tumakuru ಜಿಲ್ಲೆಯ ಕುಣಿಗಲ್ ತಾಲೂಕಿನ ನಾಗೇಗೌಡನಪಾಳ್ಯದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ತಾಜ್ ದರ್ಬಾರ್ ಹೋಟೆಲ್ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ. ಘಟನೆಯು ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದ್ದು, ಕ್ಷಣಾರ್ಧದಲ್ಲೇ ಹೋಟೆಲ್ ಧಗಧಗನೆ ಹೊತ್ತಿ ಉರಿದ ದೃಶ್ಯಗಳು ಜನರಲ್ಲಿ ಭೀತಿಯನ್ನುಂಟು ಮಾಡಿವೆ.
ಮಾಹಿತಿಯ ಪ್ರಕಾರ, ನಿನ್ನೆ ಸಂಜೆ ಸುಮಾರು 5.30ರ ವೇಳೆಗೆ ಹೋಟೆಲ್ ಒಳಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಆರಂಭದಲ್ಲಿ ಸಣ್ಣ ಪ್ರಮಾಣದಲ್ಲಿದ್ದ ಬೆಂಕಿ ಕೆಲವೇ ನಿಮಿಷಗಳಲ್ಲಿ ವ್ಯಾಪಕವಾಗಿ ಹರಡಿ ಇಡೀ ಕಟ್ಟಡವನ್ನು ಆವರಿಸಿತು.
ಪ್ರಾಥಮಿಕ ಮಾಹಿತಿ ಪ್ರಕಾರ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದಲೇ ಅಗ್ನಿ ಅವಘಡ ಸಂಭವಿಸಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ.
ಇದನ್ನು ಓದಿ : ಸತಿಪತಿಯಾದ ವಿಜಯ್ ದೇವರಕೊಂಡ, ರಶ್ಮಿಕಾ ಮಂದಣ್ಣ!

ಸಿಬ್ಬಂದಿ ಮತ್ತು ಗ್ರಾಹಕರ ರಕ್ಷಣೆ
ಬೆಂಕಿ ಕಾಣಿಸಿಕೊಂಡ ತಕ್ಷಣ ಸಾರ್ವಜನಿಕರು ಹಾಗೂ ಸ್ಥಳೀಯರು ತಕ್ಷಣ ಸ್ಪಂದಿಸಿದರು. ಹೋಟೆಲ್ನಲ್ಲಿದ್ದ ಸಿಬ್ಬಂದಿ ಮತ್ತು ಊಟಕ್ಕೆ ಬಂದಿದ್ದ ಗ್ರಾಹಕರನ್ನು ಸುರಕ್ಷಿತವಾಗಿ ಹೊರಗೆ ಕರೆತರಲು ಹರಸಾಹಸಪಟ್ಟರು.
ಅದೃಷ್ಟವಶಾತ್ ಈ ಭೀಕರ ಘಟನೆದಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಗ್ನಿ ಅವಘಡದಲ್ಲಿ ಹೋಟೆಲ್ನ ಪೀಠೋಪಕರಣಗಳು, ಎಲೆಕ್ಟ್ರಾನಿಕ್ ಉಪಕರಣಗಳು ಹಾಗೂ ಆಹಾರ ಸಾಮಗ್ರಿಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ. ಇದರಿಂದ ಲಕ್ಷಾಂತರ ರೂಪಾಯಿ ಆಸ್ತಿ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.

ಅಗ್ನಿಶಾಮಕ ದಳದಿಂದ ಬೆಂಕಿ ನಿಯಂತ್ರಣ
ವಿಷಯ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು. ಹಲವು ಗಂಟೆಗಳ ಪ್ರಯತ್ನದ ಬಳಿಕ ಬೆಂಕಿಯನ್ನು ಸಂಪೂರ್ಣವಾಗಿ ನಿಯಂತ್ರಣಕ್ಕೆ ತರಲು ಯಶಸ್ವಿಯಾದರು.
ಘಟನೆ ಬಗ್ಗೆ ಮಾಹಿತಿ ತಿಳಿದು ಅಮೃತೂರು ಪೊಲೀಸ್ ಠಾಣೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಅಗ್ನಿ ಅವಘಡದ ನಿಖರ ಕಾರಣ ಪತ್ತೆ ಮಾಡಲು ತನಿಖೆ ಮುಂದುವರಿಸಿದ್ದಾರೆ.
ಇದನ್ನು ನೋಡಿ : GUBBI|ದೇಶದಲ್ಲೇ ರೈಲ್ವೇ ಮೆಗಾ ಕೋಚಿಂಗ್ ಬಗ್ಗೆ ಸೋಮಣ್ಣ ಮಾಹಿತಿ | V SOMANNA




