Haveri : ಕಮಿಷನ್ ರೂಪದಲ್ಲಿ ಹಣ ಪಡೆಯುತ್ತಿದ್ದಾಗ ಬಿಜೆಪಿ ಶಾಸಕ ಡಾ.ಚಂದ್ರು ಲಮಾಣಿ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದರು. ಇದರ ಬೆನ್ನಲ್ಲೇ ಇದೀಗ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

Haveri : ರಾಜ್ಯದಲ್ಲಿ ಭ್ರಷ್ಟಾಚಾರ ವಿರುದ್ಧ ಲೋಕಾಯುಕ್ತ ದಾಳಿಗಳು ಮುಂದುವರಿದಿದೆ. ಗುತ್ತಿಗೆದಾರನಿಂದ ಕಮಿಷನ್ ರೂಪದಲ್ಲಿ ಹಣ ಸ್ವೀಕರಿಸುತ್ತಿದ್ದಾಗ ಶಿರಹಟ್ಟಿ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಲೋಕಾ ಬಲೆಗೆ ಸಿಕ್ಕಿಬಿದ್ದಿದ್ರು.
ಗದಗದಲ್ಲಿ ಎಎಸ್ಐ ಬಂಧನ
ಇದೀಗ ಶಾಸಕರ ಬಂಧನದ ಬೆನ್ನಲ್ಲೇ ಗದಗ ಶಹರ ಪೊಲೀಸ್ ಠಾಣೆಯ ASI ಹಾಗೂ ಖಾತೆ ಬದಲಾವಣೆಗಾಗಿ ರೈತನಿಂದ ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಲೆಕ್ಕಾಧಿಕಾರಿಯೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಗದಗ ಶಹರ ಪೊಲೀಸ್ ಠಾಣೆಯ ASI ಸಿ.ವಿ. ಇಂಗಳಳ್ಳಿ ಪಿಟಿಷನ್ ಅರ್ಜಿ ವಿಚಾರಣೆಗೆ 10,000 ರೂ. ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಲಾಕ್ ಮಾಡಿದ್ದಾರೆ.
ಶಹರ ಠಾಣೆಗೆ ಅನಾಮಧೇಯ ವ್ಯಕ್ತಿಗಳು ಸಲ್ಲಿಸಿದ್ದ ಅರ್ಜಿ ವಜಾಗೊಳಿಸಲು ಇಂಗಳಳ್ಳಿ 13 ಸಾವಿರ ಹಣ ಬೇಡಿಕೆ ಇಟ್ಟಿದ್ದಾರೆ ಎಂದು ವಿರೇಶ ಪೂಜಾರ್ ಎಂಬುವರು ಲೋಕಾಯುಕ್ತರಿಗೆ ದೂರು ನೀಡಿದ್ದರು.
ದೂರಿನ ಮೇರೆಗೆ ಲೋಕಾಯುಕ್ತ ಡಿವೈಎಸ್ಪಿ ವಿಜಯ ಬಿರಾದಾರ ನೇತೃತ್ವದ ತಂಡ ದಾಳಿ ಮಾಡಿದ್ದು, ಪ್ರಕರಣಕ್ಕೆ ಸಂಬಂಧಿಸಿಂತೆ ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.
ಇದನ್ನೂ ಓದಿ : ಗಂಡ ಸತ್ತ 16 ದಿನಕ್ಕೆ ಹೆಂಡ್ತಿ ಮದುವೆ – 23 ದಿನಗಳ ಬಳಿಕ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ!

ಹಾವೇರಿಯಲ್ಲಿ ಗ್ರಾಮ ಲೆಕ್ಕಾಧಿಕಾರಿ ಬಲೆಗೆ
ಇನ್ನು ಮತ್ತೊಂದು ಪ್ರಕರಣದಲ್ಲಿ ಹಾವೇರಿ ತಾಲೂಕಿನ ನೆಗಳೂರು ಗ್ರಾಮದಲ್ಲಿ ಖಾತೆ ಬದಲಾವಣೆಗಾಗಿ ರೈತನಿಂದ ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಲೆಕ್ಕಾಧಿಕಾರಿ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ.
ಗ್ರಾಮ ಲೆಕ್ಕಾಧಿಕಾರಿ ಫಕ್ಕಿರೇಶ್ ಬಾರ್ಕಿ, 8,500 ರೂಪಾಯಿ ಲಂಚ ಪಡೆಯುವಾಗ ತಗ್ಲಾಕೊಂಡಿದ್ದಾರೆ. ಬಸಾಪುರ ಗ್ರಾಮದ ರೈತ ಕರಿಯಲ್ಲಪ್ಪ ಕೆಸರಳ್ಳಿ ಅವರ ಖಾತೆ ಬದಲಾವಣೆ ಮಾಡಲು ಫಕ್ಕಿರೇಶ್ ಒಟ್ಟು 63,000 ರೂಪಾಯಿ ಲಂಚದ ಬೇಡಿಕೆ ಇಟ್ಟಿದ್ದರು.
ಈ ಹಿಂದೆ 30,000 ರೂಪಾಯಿ ಪಡೆದಿದ್ದರೂ ಕೆಲಸ ಪೂರ್ಣಗೊಳಿಸಿರಲಿಲ್ಲ ಎನ್ನಲಾಗಿದೆ. ಇಂದು ಮತ್ತೊಮ್ಮೆ 8,500 ರೂಪಾಯಿ ಪಡೆಯಲು ಮುಂದಾಗಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಬಂಧಿಸಿದ್ದಾರೆ.
ಹಾವೇರಿ ಲೋಕಾಯುಕ್ತ ಸಿಪಿಐ ಶ್ರೀದೇವಿ ಅವರ ನೇತೃತ್ವದಲ್ಲಿ ಈ ಕಾರ್ಯಾಚರಣೆ ಯಶಸ್ವಿಯಾಗಿ ನಡೆದಿದೆ. ರಾಜ್ಯದಲ್ಲಿ ಭ್ರಷ್ಟಾಚಾರ ಪ್ರಕರಣಗಳ ವಿರುದ್ಧ ಲೋಕಾಯುಕ್ತದ ಕಟ್ಟುನಿಟ್ಟಿನ ಕ್ರಮಗಳು ಮುಂದುವರಿದಿದೆ.
MUST WATCH : ಸ್ಮಶಾನ ಜಾಗ ಒತ್ತುವರಿ ಆರೋಪ ಶವವಿಟ್ಟು ಪ್ರತಿಭಟಿಸಿ ಗ್ರಾಮಸ್ಥರ ಆಕ್ರೋಶ




