Hardik Pandya ಜಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ ಅರ್ಧಶತಕ ಬಾರಿಸುವ ಮೂಲಕ ಪಾಕಿಸ್ತಾನದ ಶೋಯೆಬ್ ಮಲಿಕ್ ಅವರ ದಾಖಲೆ ಮುರಿದಿದ್ದಾರೆ.

ಟೀಮ್ ಇಂಡಿಯಾದ ಸ್ಟಾರ್ ಆಲ್ರೌಂಡರ್ Hardik Pandya ಜಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ ಅರ್ಧಶತಕ ಬಾರಿಸುವ ಮೂಲಕ ಪಾಕಿಸ್ತಾನದ ಶೋಯೆಬ್ ಮಲಿಕ್ ಮತ್ತು ದಕ್ಷಿಣ ಆಫ್ರಿಕಾದ ಡೇವಿಡ್ ಮಿಲ್ಲರ್ ಅವರ ಟಿ20 ವಿಶ್ವಕಪ್ ದಾಖಲೆಯನ್ನು ಮುರಿದಿದ್ದಾರೆ.
ಐದನೇ ಕ್ರಮಾಂಕ ಅಥವಾ ಅದಕ್ಕಿಂತ ಕಡಿಮೆ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವ ಮೂಲಕ ಟಿ20 ವಿಶ್ವಕಪ್ನಲ್ಲಿ ನಾಲ್ಕು ಅರ್ಧಶತಕಗಳನ್ನು ಗಳಿಸಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಹಾರ್ದಿಕ್ ಪಾತ್ರರಾದರು.
ಶೋಯೆಬ್ ಮಲಿಕ್ ದಾಖಲೆ ಉಡೀಸ್ – Hardik Pandya
ನಮೀಬಿಯಾ ವಿರುದ್ಧದ ಪಂದ್ಯದಲ್ಲಿ ಈ ಮೈಲಿಗಲ್ಲು ತಲುಪಿದ ನಂತರ ಈ ಸ್ಟಾರ್ ಆಲ್ರೌಂಡರ್ ಈ ಆವೃತ್ತಿಯಲ್ಲಿ ಎರಡು ಬಾರಿ ಅರ್ಧಶತಕ ಬಾರಿಸಿದ್ದಾರೆ. 2024 ಮತ್ತು 2022 ರ ಆವೃತ್ತಿಗಳಲ್ಲಿ ತಲಾ ಒಂದು ಅರ್ಧಶತಕ ಗಳಿಸಿದ್ದರು. ಶೋಯೆಬ್ ಮಲಿಕ್ ಮತ್ತು ಡೇವಿಡ್ ಮಿಲ್ಲರ್ ತಲಾ 3 ಅರ್ಧಶತಕ ಬಾರಿಸಿದ್ದಾರೆ.
ಇದನ್ನು ಓದಿ : ಮದುವೆ ಬಳಿಕ ಪ್ರಧಾನಿ ಮೋದಿಯನ್ನು ಭೇಟಿಯಾದ ರಶ್ಮಿಕಾ – ವಿಜಯ್

ಟಿ20 ವಿಶ್ವಕಪ್ನಲ್ಲಿ ಅತ್ಯಧಿಕ ಅರ್ಧಶತಕ ಬಾರಿಸಿದವರು:
- ಹಾರ್ದಿಕ್ ಪಾಂಡ್ಯ – 4
- ಡೇವಿಡ್ ಮಿಲ್ಲರ್ – 3
- ಶೋಯೆಬ್ ಮಲಿಕ್ – 3
- ಮಾರ್ಕಸ್ ಸ್ಟೊಯಿನಿಸ್ – 3
- ಹ್ಯಾರಿ ಬ್ರೂಕ್ (ಇಂಗ್ಲೆಂಡ್) – 2
- ಜೆಪಿ ಡುಮಿನಿ – 2
ಹಾರ್ದಿಕ್ ಪಾಂಡ್ಯ ಅವರ ಈ ಸಾಧನೆ ಟೀಮ್ ಇಂಡಿಯಾದ ಆಲ್ರೌಂಡಿಂಗ್ ಶಕ್ತಿ ಮತ್ತು ಟಿ20 ಪಂದ್ಯಗಳಲ್ಲಿ ಅವರ ಪ್ರಮುಖ ಪಾತ್ರವನ್ನು ಮತ್ತೊಂದು ಬಾರಿ ದೃಢಪಡಿಸಿದೆ.
ಇದನ್ನು ನೋಡಿ : ತುಮಕೂರಿನಲ್ಲಿ ನೀರಿಗಾಗಿ ಹಾಹಾಕಾರ – ಬಿಂದಿಗೆ ಹಿಡಿದು ಪಾಲಿಕೆ ವಿರುದ್ಧ ಆಕ್ರೋಶ




