ಜ್ಯೋತಿಷಿ ಮಾತಿಗೆ ಹೆದರಿ ಮಹಿಳೆಯೋರ್ವಳು Suicide ಮಾಡಿಕೊಂಡಳಾ ಎಂಬ ಅನುಮಾನ ಮೂಡಿಸಿದೆ.

Bengaluru : ಅಲ್ಪಾಯುಷಿ ಎಂದು ಭವಿಷ್ಯ ನುಡಿದಿದ್ದ ಜ್ಯೋತಿಷಿ ಮಾತಿಗೆ ಹೆದರಿ Suicide ಮಾಡಿಕೊಂಡಳಾ ಎಂಬ ಅನುಮಾನ ಮೂಡಿಸಿದೆ. ಈ ಘಟನೆ ಬೆಂಗಳೂರು ನಗರದ ಬಾಗಲಗುಂಟೆಯ ಎಂಇಐ ಲೇಔಟ್ನಲ್ಲಿ ನಡೆದಿದೆ.
ನೇಣಿಗೆ ಕೊರಳೊಡ್ಡಿದ್ರಾ ಟೆಕ್ಕಿ?
ವಿದ್ಯಾಜ್ಯೋತಿ (29) ಆತ್ಮಹತ್ಯೆ ಮಾಡಿಕೊಂಡ ಮಹಿಳೆಯಾಗಿದ್ದಾರೆ. ಖಾಸಗಿ ಕಂಪನಿಯಲ್ಲಿ ಉದ್ಯೋಗದಲ್ಲಿದ್ದ ಅವರು ಸದ್ಯ ವರ್ಕ್ ಫ್ರಂ ಹೋಮ್ ಮೂಲಕ ಕೆಲಸ ನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ.
ಇದನ್ನು ಓದಿ : ಏಪ್ರಿಲ್ 1ರಿಂದ ಬೆಂಗಳೂರು ಐತಿಹಾಸಿಕ ಕರಗ ಮಹೋತ್ಸವ

ಆಗಿದ್ದೇನು..?
ಕುಟುಂಬದ ಮಾಹಿತಿಯಂತೆ, ಜ್ಯೋತಿಷಿಯೊಬ್ಬರು ವಿದ್ಯಾಜ್ಯೋತಿಗೆ “ನೀನು ಅಲ್ಪಾಯುಷಿ” ಎಂದು ಭವಿಷ್ಯ ನುಡಿದಿದ್ದರು ಎನ್ನಲಾಗಿದೆ. ಇದರಿಂದಾಗಿ ಆತಂಕಗೊಂಡ ಕುಟುಂಬದವರು ಮಗಳ ಆಸೆಯಂತೆ ಎಲ್ಲವನ್ನೂ ನೆರವೇರಿಸಲು ಮುಂದಾಗಿದ್ದರು. ಕೊಡಗು ಮೂಲದ ಯುವಕನನ್ನು ಪ್ರೀತಿಸುತ್ತಿದ್ದ ವಿದ್ಯಾಜ್ಯೋತಿಗೆ, ಎರಡೂ ಮನೆಗಳ ಒಪ್ಪಿಗೆಯೊಂದಿಗೆ ಮದುವೆ ನಿಶ್ಚಯವಾಗಿತ್ತು.
ಇದಲ್ಲದೆ, ಜ್ಯೋತಿಷಿಯ ಸಲಹೆಯಂತೆ 9 ದಿನಗಳ ಪೂಜೆ ನಡೆಸಲಾಗುತ್ತಿತ್ತು. ಕೊನೆಯ ದಿನವಾದ ಒಂಬತ್ತನೇ ದಿನ ಮಾರಮ್ಮ ದೇವರಿಗೆ ತಾಳಿ ಅರ್ಪಿಸುವಂತೆ ಸೂಚನೆ ನೀಡಲಾಗಿತ್ತು. ಅದರಂತೆ ಮನೆಯಲ್ಲಿ ಪೂಜಾ ಕಾರ್ಯಕ್ರಮದ ಸಿದ್ಧತೆಗಳು ನಡೆದಿದ್ದವು.
ಊಟದ ನಂತರ ವಿದ್ಯಾ ರೂಂಗೆ ಹೋಗಿದ್ದಳು. ಸಂಜೆ ತಾಯಿ ಕೂಗಿದ್ದರೂ ಕೂಡ ವಿದ್ಯಾ ಹೊರಬಂದಿರಲಿಲ್ಲ. ಕೆಲಸ ಮಾಡುತ್ತಿರಬೇಕೆಂದು ಎಲ್ಲರೂ ಸುಮ್ಮನಾಗಿದ್ದರು. ರಾತ್ರಿ 8 ಗಂಟೆ ಸುಮಾರಿಗೆ ತಾಯಿ ದೇವಸ್ಥಾನಕ್ಕೆ ತೆರಳಲು ವಿದ್ಯಾಳನ್ನು ಕರೆದಿದ್ದರು. ಬಾಗಿಲನ್ನು ತೆಗೆಯದೇ ಇದ್ದಾಗ ಅನುಮಾನಗೊಂಡು ಕಿಟಕಿಯಲ್ಲಿ ನೋಡಿದಾಗ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಪ್ರಕರಣ ದಾಖಲು – Suicide
ಇನ್ನು ಘಟನೆ ಸಂಬಂಧ ಬಾಗಲಗುಂಟೆ ಪೊಲೀಸ್ ಠಾಣೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆ ಶವಾಗಾರಕ್ಕೆ ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದೆ. ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಇದನ್ನು ನೋಡಿ : SECOND PUC EXAM ಆರಂಭ – ತುಮಕೂರಲ್ಲಿ ವಿದ್ಯಾರ್ಥಿಗಳ ಜೋಶ್ ಹೇಗಿದೆ ಗೊತ್ತಾ




