Raichur ನ ಬಸವೇಶ್ವರ ವೃತ್ತದಲ್ಲಿ ಟ್ರಕ್ ಬೈಕ್ಗೆ ಡಿಕ್ಕಿ ಹೊಡೆದು ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ….

Raichur ನಗರದಲ್ಲಿ ಇಂದು ಮುಂಜಾನೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನಗರದ ಬಸವೇಶ್ವರ ವೃತ್ತದಲ್ಲಿ ಈ ದುರ್ಘಟನೆ ಸಂಭವಿಸಿದೆ.
ಪೊಲೀಸರ ಮಾಹಿತಿಯ ಪ್ರಕಾರ, ಇಂದು ಬೆಳಗಿನ ಜಾವ ಸುಮಾರು 3 ಗಂಟೆ ಸುಮಾರಿಗೆ ಅಪಘಾತ ನಡೆದಿದೆ. ಗಂಜ್ ವೃತ್ತದ ದಿಕ್ಕಿನಿಂದ ಬರುತ್ತಿದ್ದ ಟ್ರಕ್, ಲಿಂಗಸುಗೂರು ರಸ್ತೆಯಿಂದ ಬರುತ್ತಿದ್ದ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ.
ಇದನ್ನು ಓದಿ : ಪಾಕಿಸ್ತಾನದ ಶೋಯೆಬ್ ಮಲಿಕ್ ದಾಖಲೆ ಮುರಿದ Pandya

ಮೃತಪಟ್ಟವರು ಯಾರು?
ಅಪಘಾತದಲ್ಲಿ ಮೃತಪಟ್ಟವರನ್ನು ಮೊಹಮದ್ ಅಲಿ ಪಾಶಾ (24), ನೂರ ಮೊಹಮದ್ (19) ಹಾಗೂ ಫಯಾಜ್ (26) ಎಂದು ಗುರುತಿಸಲಾಗಿದೆ. ಮೃತರು ನಗರದ ಸುಖಾಣಿ ಕಾಲೋನಿ ನಿವಾಸಿಗಳಾಗಿದ್ದು, ಅವರ ಸಾವಿನಿಂದ ಕುಟುಂಬಗಳಲ್ಲಿ ಶೋಕ ವಾತಾವರಣ ನಿರ್ಮಾಣವಾಗಿದೆ.
ಅಪಘಾತದ ಬಳಿಕದ ಕ್ರಮಗಳು
ಅಪಘಾತದ ನಂತರ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದರು. ಪ್ರಕರಣ ಸಂಬಂಧ ರಾಯಚೂರು ನಗರ ಸಂಚಾರ ಪೊಲೀಸ್ ಠಾಣೆದಲ್ಲಿ ಎಫ್ಐಆರ್ ದಾಖಲಾಗಿದೆ.

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ರಾಯಚೂರು ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (RIMS) ಆಸ್ಪತ್ರೆ ಶವಾಗಾರಕ್ಕೆ ರವಾನಿಸಲಾಗಿದೆ. ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಇತ್ತೀಚಿನ ದಿನಗಳಲ್ಲಿ ವೇಗದ ಚಾಲನೆ ಹಾಗೂ ನಿರ್ಲಕ್ಷ್ಯದಿಂದ ರಸ್ತೆ ಅಪಘಾತಗಳು ಹೆಚ್ಚುತ್ತಿರುವ ಹಿನ್ನೆಲೆ ವಾಹನ ಸವಾರರು ಜಾಗರೂಕರಾಗಿ ಸಂಚರಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.
ಇದನ್ನು ನೋಡಿ : DKS | ಶಾಸಕರ ಡಿನ್ನರ್ ಮೀಟಿಂಗ್ ಬಗ್ಗೆ ಡಿ.ಕೆ ಶಿವಕುಮಾರ್ ಏನಂದ್ರು ಗೊತ್ತಾ?




