
MADIKERE ACCIDENT : ಮೈಸೂರಿನಿಂದ ಮಂಗಳೂರಿನ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ವೊಂದು ಬ್ರೇಕ್ಫೇಲ್ ಆಗಿ ನಿಯಂತ್ರಣ ತಪ್ಪಿ, ಎದುರು ಬರುತ್ತಿದ್ದ ಓಮ್ನಿ ವಾಹನಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಘಟನೆ ನೆನ್ನೆ ರಾತ್ರಿ ಮಡಿಕೇರಿ ಸಮೀಪದ ತಾಳತ್ಮನೆ ತಿರುವಿನಲ್ಲಿ ಸಂಭವಿಸಿದೆ.
ಇನ್ನು ಈ ಅಪಘಾತದಲ್ಲಿ ಓಮ್ನಿ ವಾಹನದಲ್ಲಿದ್ದ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ. ಗಾಯಾಳುಗಳು ಮಂಗಳೂರು ಮೂಲದವರಾಗಿದ್ದು, ದಸರಾ ಹಬ್ಬದ ವ್ಯಾಪಾರ ನಿಮಿತ್ತ ಮಡಿಕೇರಿಗೆ ಆಗಮಿಸಿದ್ದತು.
ಅದೃಷ್ಟವಶಾತ್, ಬಸ್ನಲ್ಲಿದ್ದ 17ಕ್ಕೂ ಹೆಚ್ಚು ಪ್ರಯಾಣಿಕರು ಹಾಗೂ ಚಾಲಕ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಅಪಘಾತದ ತೀವ್ರತೆಗೆ ಓಮ್ನಿ ಸಂಪೂರ್ಣವಾಗಿ ಜಖಂಗೊಂಡಿದ್ದು, ಪಲ್ಟಿಯಾದ ಬಸ್ನ್ನು ಕ್ರೇನ್ ಮೂಲಕ ಮೇಲಕ್ಕೆ ಎತ್ತಲಾಗಿದೆ.
ಇನ್ನು ಘಟನೆಯ ಮಾಹಿತಿ ತಿಳಿದ ಮಡಿಕೇರಿ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ, ಪ್ರಕರಣ ದಾಖಲಿಸಿ ಕೊಂಡು ಮುಂದಿನ ತನಿಖೆ ಮುಂದುವರಿಸಿದ್ದಾರೆ.




