Haveri ಜಿಲ್ಲೆಯ ಶಿಗ್ಗಾಂವಿ ಸಮೀಪ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದು ನವದಂಪತಿ ಸ್ಥಳದಲ್ಲೇ ಸಾವನ್ನಪ್ಪಿದರೆ..

Haveri ಜಿಲ್ಲೆಯ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿ ನವದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ನಡೆದಿದೆ. ದೇವರ ದರ್ಶನ ಮುಗಿಸಿಕೊಂಡು ಮನೆಗೆ ವಾಪಸ್ ಬರುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿರುವುದು ಕುಟುಂಬಸ್ಥರು ಹಾಗೂ ಸ್ಥಳೀಯರಲ್ಲಿ ಆಘಾತ ಮೂಡಿಸಿದೆ.
ಅಪಘಾತವು ಶಿಗ್ಗಾಂವಿ ತಾಲೂಕಿನ ಕಡಹಳ್ಳಿ ಗ್ರಾಮದ ಬಳಿ ಇರುವ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ನಿಂತಿದ್ದ ಲಾರಿಗೆ ಕಾರು ವೇಗವಾಗಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನವದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯ ತೀವ್ರತೆ ಎಷ್ಟಿತ್ತು ಎಂದರೆ ಕಾರು ಸಂಪೂರ್ಣವಾಗಿ ಜಖಂಗೊಂಡಿತ್ತು.
ಇದನ್ನು ಓದಿ : ಪಾಕಿಸ್ತಾನದ ಶೋಯೆಬ್ ಮಲಿಕ್ ದಾಖಲೆ ಮುರಿದ Pandya
ಇಬ್ಬರಿಗೆ ಗಂಭೀರ ಗಾಯ – ಕಿಮ್ಸ್ ಆಸ್ಪತ್ರೆಗೆ ದಾಖಲು
ಅಪಘಾತದಲ್ಲಿ ಇನ್ನಿಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ತಕ್ಷಣವೇ ರಕ್ಷಣೆ ಕಾರ್ಯಾಚರಣೆ ನಡೆಸಿ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ಗಾಯಾಳುಗಳಿಗೆ ತುರ್ತು ಚಿಕಿತ್ಸೆ ನೀಡುತ್ತಿದ್ದಾರೆ ಎಂದು ತಿಳಿದುಬಂದಿದೆ.

ಮದುವೆಯಾಗಿ ಕೇವಲ 15 ದಿನಗಳು – ಸಂತಸದ ಬದುಕಿಗೆ ದುರ್ಘಟನೆ ಅಂತ್ಯ
ಮೃತ ದಂಪತಿ ಹಾವೇರಿ ನಗರದ ನಿವಾಸಿಗಳಾಗಿದ್ದು, ಮದುವೆಯಾಗಿ ಕೇವಲ 15 ದಿನಗಳಷ್ಟೇ ಆಗಿತ್ತು. ದೇವರ ದರ್ಶನಕ್ಕಾಗಿ ತೆರಳಿ ವಾಪಸ್ ಬರುತ್ತಿದ್ದ ವೇಳೆ ಸಂಭವಿಸಿದ ಈ ದುರ್ಘಟನೆ ಕುಟುಂಬಸ್ಥರನ್ನು ದುಃಖ ಸಾಗರದಲ್ಲಿ ಮುಳುಗಿಸಿದೆ.
ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯರು ಸ್ಥಳಕ್ಕೆ ಧಾವಿಸಿ ಕಾರಿನೊಳಗಿದ್ದ ಮೃತದೇಹಗಳನ್ನು ಹೊರತೆಗೆದರು. ನಂತರ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪೊಲೀಸರು ಅಪಘಾತಕ್ಕೆ ನಿಖರ ಕಾರಣ ಏನು ಎಂಬುದನ್ನು ಪತ್ತೆಹಚ್ಚಲು ತನಿಖೆ ಆರಂಭಿಸಿದ್ದಾರೆ. ಈ ನಡುವೆ ಇಬ್ಬರು ಯುವ ಜೀವಗಳು ಒಂದೇ ಕ್ಷಣದಲ್ಲಿ ಕಳೆದುಹೋದ ಕಾರಣ ಎರಡೂ ಕುಟುಂಬಗಳಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.
ಇದನ್ನು ನೋಡಿ : DKS | ಶಾಸಕರ ಡಿನ್ನರ್ ಮೀಟಿಂಗ್ ಬಗ್ಗೆ ಡಿ.ಕೆ ಶಿವಕುಮಾರ್ ಏನಂದ್ರು ಗೊತ್ತಾ?




