Raichur ಸ್ಟೇಷನ್ ರಸ್ತೆಯಲ್ಲಿ ಆಟೋದಿಂದ ಬಿದ್ದ ಬಿಎಸ್ಸಿ ವಿದ್ಯಾರ್ಥಿ ಮೇಲೆ ಬಸ್ ಹರಿದು ಸ್ಥಳದಲ್ಲೇ ಸಾವನ್ನಪ್ಪಿದರೆ..

Raichur ನಗರದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬಿಎಸ್ಸಿ ಅಂತಿಮ ವರ್ಷದ ವಿದ್ಯಾರ್ಥಿ ಬಸವರಾಜ್ (21) ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ದುಃಖ ಮೂಡಿಸಿದೆ. ಆಟೋದಿಂದ ಕೆಳಗೆ ಬಿದ್ದ ತಕ್ಷಣ ಹಿಂಬದಿಯಿಂದ ಬಂದ ಬಸ್ ಹರಿದ ಪರಿಣಾಮ ಯುವಕ ಪ್ರಾಣ ಕಳೆದುಕೊಂಡಿದ್ದಾನೆ.
ಮಾಹಿತಿ ಪ್ರಕಾರ, ಬಸವರಾಜ್ ಆಶಾಪುರ ರಸ್ತೆಯಿಂದ ಬಸವೇಶ್ವರ ವೃತ್ತದ ಮಾರ್ಗವಾಗಿ ಸ್ನೇಹಿತರೊಂದಿಗೆ ಆಟೋದಲ್ಲಿ ಪ್ರಯಾಣಿಸುತ್ತಿದ್ದರು. ಮುಖ್ಯರಸ್ತೆಯಲ್ಲಿ ನಿಂತಿದ್ದ ಮತ್ತೊಂದು ಆಟೋವನ್ನು ತಪ್ಪಿಸಲು ಚಾಲಕ ಏಕಾಏಕಿ ಕಟ್ ಹೊಡೆದಿದ್ದಾನೆ. ಇದರಿಂದ ನಿಯಂತ್ರಣ ಕಳೆದುಕೊಂಡ ಬಸವರಾಜ್ ಆಟೋದಿಂದ ಕೆಳಗೆ ಬಿದ್ದಿದ್ದಾರೆ.
ಆದರೆ ಇದೇ ಸಮಯದಲ್ಲಿ ಹಿಂಬದಿಯಿಂದ ಬರುತ್ತಿದ್ದ ಸಾರಿಗೆ ಬಸ್ ಅವರ ಮೇಲೆ ಹರಿದಿದ್ದು, ಗಂಭೀರ ಗಾಯಗೊಂಡ ಅವರು ಕ್ಷಣಾರ್ಧದಲ್ಲೇ ಮೃತಪಟ್ಟಿದ್ದಾರೆ.
ಇದನ್ನು ಓದಿ : PUC ಪರೀಕ್ಷೆಗೆ ಹೋಗುವ ಸಂದರ್ಭದಲ್ಲೇ ವಿದ್ಯಾರ್ಥಿನಿಗೆ ಹೃದಯಾಘಾತ!

ಸಿಸಿಟಿವಿಯಲ್ಲಿ ಸೆರೆಯಾದ ಭಯಾನಕ ದೃಶ್ಯ
ಅಪಘಾತದ ಸಂಪೂರ್ಣ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಘಟನೆಯ ನಂತರ ಪೊಲೀಸರು ತನಿಖೆ ಆರಂಭಿಸಿದ್ದು, ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಮೃತ ಬಸವರಾಜ್ ಎಸ್ಟಿ ಹಾಸ್ಟೆಲ್ನಲ್ಲಿ ವಾಸವಿದ್ದು, ಕುಟುಂಬದ ಆರ್ಥಿಕ ಸಂಕಷ್ಟದ ನಡುವೆಯೂ ವಿದ್ಯಾಭ್ಯಾಸ ಮುಂದುವರಿಸುತ್ತಿದ್ದರು. ಖಾಲಿ ಸಮಯದಲ್ಲಿ ಕೇಟರಿಂಗ್ ಕೆಲಸ ಮಾಡಿ ದಿನಗೂಲಿ ಸಂಪಾದಿಸುತ್ತಿದ್ದರು ಎಂದು ತಿಳಿದುಬಂದಿದೆ.
ಕೆಲಸಕ್ಕೆ ತೆರಳುವಾಗ ಸಂಭವಿಸಿದ ದುರಂತ
ಕೇಟರಿಂಗ್ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿರುವುದು ಕುಟುಂಬಸ್ಥರನ್ನು ದುಃಖ ಸಾಗರದಲ್ಲಿ ಮುಳುಗಿಸಿದೆ. ಯುವಕನ ಸಾವಿಗೆ ಪರಿಹಾರ ನೀಡುವಂತೆ ಕುಟುಂಬಸ್ಥರು ಸರ್ಕಾರವನ್ನು ಆಗ್ರಹಿಸಿದ್ದಾರೆ.
ಇದನ್ನು ನೋಡಿ : ತುಮಕೂರಿನಲ್ಲಿ ಗ್ಯಾರಂಟಿ ಯೋಜನೆ ಕಾರ್ಯಾಗಾರ ಯಾರ್ ಯಾರ್ ಬಂದಿದ್ರು..?




