ಉಡುಪಿಯಲ್ಲಿ ಡ್ರಗ್ಸ್ ಮುಕ್ತ ಕರ್ನಾಟಕ ಮ್ಯಾರಥನ್ ವೇಳೆ ಕುಂದಾಪುರ ಗ್ರಾಮಾಂತರ ಠಾಣೆಯ SI ನಾಸಿರ್ ಹುಸೇನ್ ಕುಸಿದು ಬಿದ್ದು ಸಾವನ್ನಪ್ಪಿದರೆ.

ಉಡುಪಿ ಜಿಲ್ಲೆಯಲ್ಲಿ ಪೊಲೀಸ್ ಇಲಾಖೆಯ ಮ್ಯಾರಥನ್ ವೇಳೆ SI ಕುಸಿದು ಬಿದ್ದು ಸಾವನ್ನಪ್ಪಿದ ದುರ್ಘಟನೆ ನಡೆದಿದೆ. ಡ್ರಗ್ಸ್ ಮುಕ್ತ ಕರ್ನಾಟಕ ಎಂಬ ಜಾಗೃತಿ ದ್ಯೇಯದೊಂದಿಗೆ ಆಯೋಜಿಸಿದ್ದ ಓಟದ ವೇಳೆ ಈ ಘಟನೆ ಸಂಭವಿಸಿದ್ದು, ಪೊಲೀಸ್ ವಲಯದಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ.

ಹೃದಯಾಘಾತ ಶಂಕೆ – ಓಟದ ಮಧ್ಯೆ ಕುಸಿದು ಬಿದ್ದರು
ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ ನಾಸಿರ್ ಹುಸೇನ್ ಅವರು ಮ್ಯಾರಥನ್ನಲ್ಲಿ ಭಾಗವಹಿಸಿದ್ದ ವೇಳೆ ನಗರ ತಾಲೂಕು ಪಂಚಾಯತ್ ಕಚೇರಿ ಮುಂಭಾಗದ ರಸ್ತೆಯಲ್ಲಿ ಏಕಾಏಕಿ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಸಹೋದ್ಯೋಗಿಗಳು ಅವರನ್ನು ಆಸ್ಪತ್ರೆಗೆ ದಾಖಲಿಸಿದರು. ಆದರೆ ವೈದ್ಯರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ. ಪ್ರಾಥಮಿಕ ಮಾಹಿತಿ ಪ್ರಕಾರ ಹೃದಯಾಘಾತವೇ ಸಾವಿಗೆ ಕಾರಣವಾಗಿರುವ ಶಂಕೆ ವ್ಯಕ್ತವಾಗಿದೆ.
ಇದನ್ನು ಓದಿ : PUC ಪರೀಕ್ಷೆಗೆ ಹೋಗುವ ಸಂದರ್ಭದಲ್ಲೇ ವಿದ್ಯಾರ್ಥಿನಿಗೆ ಹೃದಯಾಘಾತ!

ಜಿಲ್ಲಾ ಪೊಲೀಸ್ ಇಲಾಖೆಯಿಂದ ಮ್ಯಾರಥನ್ ಆಯೋಜನೆ
ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಸಾರ್ವಜನಿಕರಲ್ಲಿ ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುವ ಉದ್ದೇಶದಿಂದ ಮ್ಯಾರಥನ್ ಆಯೋಜಿಸಲಾಗಿತ್ತು. ಕಾರ್ಯಕ್ರಮ ಆರಂಭವಾದ ಕೆಲವೇ ಹೊತ್ತಿನಲ್ಲಿ ಈ ದುರ್ಘಟನೆ ಸಂಭವಿಸಿದೆ.
ನಾಸಿರ್ ಹುಸೇನ್ ಅವರು ಮೂಲತಃ ಚಿಕ್ಕಮಗಳೂರು ಜಿಲ್ಲೆಯವರಾಗಿದ್ದು, 2010 ಬ್ಯಾಚ್ನ ಪೊಲೀಸ್ ಅಧಿಕಾರಿಯಾಗಿದ್ದರು. ಸುಮಾರು 58 ವರ್ಷದ ಅವರು ಪತ್ನಿ ಹಾಗೂ ಮಕ್ಕಳನ್ನು ಅಗಲಿದ್ದಾರೆ.
ಇತ್ತೀಚೆಗೆ ಕುಂದಾಪುರ ಠಾಣೆಗೆ ವರ್ಗಾವಣೆ
ಇತ್ತೀಚೆಗೆ ನಡೆದ ಶೆಟ್ಟಿಕೆರೆ ಅಪಘಾತ ಪ್ರಕರಣದ ನಂತರ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಬಳಿಕ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಅವರ ಅಕಾಲಿಕ ನಿಧನ ಪೊಲೀಸ್ ಇಲಾಖೆಗೆ ದೊಡ್ಡ ನಷ್ಟವಾಗಿದೆ.
ಇದನ್ನು ನೋಡಿ : ತುಮಕೂರಿನಲ್ಲಿ ಗ್ಯಾರಂಟಿ ಯೋಜನೆ ಕಾರ್ಯಾಗಾರ ಯಾರ್ ಯಾರ್ ಬಂದಿದ್ರು..?




