ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ಮನನೊಂದು ಪ್ರಿಯಕರ ವಿಡಿಯೋ ಮಾಡಿ ಡೆತ್ನೋಟ್ ಬರೆದಿಟ್ಟು Suicide ಮಾಡಿಕೊಂಡ ಘಟನೆ ನೆಡೆದಿದೆ…

ಬೆಂಗಳೂರು ನಗರದ ಹೊರವಲಯದಲ್ಲಿ ಮನಕಲುಕುವ ಘಟನೆ ಬೆಳಕಿಗೆ ಬಂದಿದೆ. ಪ್ರಿಯತಮೆ Suicide ಮಾಡಿಕೊಂಡಿದ್ದಕ್ಕೆ ಮನನೊಂದು ಪ್ರಿಯಕರ ವಿಡಿಯೋ ಮಾಡಿ, ಡೆತ್ನೋಟ್ ಬರೆದಿಟ್ಟು ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಈ ಘಟನೆ ಆನೇಕಲ್ ತಾಲೂಕಿನ ಸೂರ್ಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ಹೀಲಲಿಗೆ ಗ್ರಾಮದ ಲವಕುಶ ಲೇಔಟ್ನಲ್ಲಿ ನಡೆದಿದೆ.
ಮೃತರನ್ನು ಒಡಿಶಾ ಮೂಲದ ಮಂಜುಳಾ ಹಾಗೂ ದೀಪಾಂಕ್ ಎಂದು ಗುರುತಿಸಲಾಗಿದೆ. ದೀಪಾಂಕ್ಗೆ ಈಗಾಗಲೇ ಮದುವೆಯಾಗಿದ್ದು ಇಬ್ಬರು ಮಕ್ಕಳಿದ್ದರು ಎನ್ನಲಾಗಿದೆ.
ಬಳಿಕ ಮತ್ತೊಂದು ಮದುವೆಯಾಗಿ ಬೆಂಗಳೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.
ಇಬ್ಬರೂ ಸುಮಾರು 15 ದಿನಗಳ ಹಿಂದೆ ಒಡಿಶಾದಿಂದ ಬಂದು ಇಲ್ಲಿ ನೆಲೆಸಿದ್ದರು. ಜೀವನೋಪಾಯಕ್ಕಾಗಿ ದೀಪಾಂಕ್ ಬೊಮ್ಮಸಂದ್ರದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಮಂಜುಳಾ ಗಾರ್ಮೆಂಟ್ಸ್ನಲ್ಲಿ ಉದ್ಯೋಗ ಮಾಡುತ್ತಿದ್ದರು.
ಇದನ್ನು ಓದಿ : PUC ಪರೀಕ್ಷೆಗೆ ಹೋಗುವ ಸಂದರ್ಭದಲ್ಲೇ ವಿದ್ಯಾರ್ಥಿನಿಗೆ ಹೃದಯಾಘಾತ!

ದಂಪತಿ ನಡುವೆ ಜಗಳ – ಆತ್ಮಹತ್ಯೆಗೆ ಕಾರಣ?
ಮಂಗಳವಾರ ರಾತ್ರಿ ದೀಪಾಂಕ್ ಹಾಗೂ ಮಂಜುಳಾ ನಡುವೆ ಜಗಳ ನಡೆದಿತ್ತು ಎಂದು ತಿಳಿದುಬಂದಿದೆ. ಜಗಳದಿಂದ ಮನನೊಂದ ಮಂಜುಳಾ,
ಪತಿ ಹೊರಗೆ ಹೋಗಿದ್ದ ಸಮಯದಲ್ಲಿ ಮಧ್ಯರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕೆಲಸ ಮುಗಿಸಿ ಮನೆಗೆ ಬಂದ ದೀಪಾಂಕ್ ಪತ್ನಿಯ ಶವವನ್ನು ನೋಡಿ ಆಘಾತಕ್ಕೊಳಗಾಗಿದ್ದಾನೆ.
ವಿಡಿಯೋ ಮಾಡಿ ಡೆತ್ನೋಟ್ ಬರೆದಿಟ್ಟು ಪ್ರಾಣತ್ಯಾಗ
ಪತ್ನಿಯ ಮೃತದೇಹದ ಮುಂದೆ ಅಳುತ್ತಲೇ ವಿಡಿಯೋ ದಾಖಲಿಸಿದ ದೀಪಾಂಕ್, ಬಳಿಕ ಡೆತ್ನೋಟ್ ಬರೆದಿಟ್ಟು ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರ ಪ್ರಾಥಮಿಕ ಶಂಕೆ ಪ್ರಕಾರ, ಈ ಘಟನೆ ಎರಡು ದಿನಗಳ ಹಿಂದೆಯೇ ನಡೆದಿರಬಹುದು ಎಂದು ಹೇಳಲಾಗಿದೆ.
ಸ್ಥಳಕ್ಕೆ ಡಿವೈಎಸ್ಪಿ ಮಲ್ಲೇಶ್ಗೌಡ ಹಾಗೂ ಸೂರ್ಯನಗರ ಪೊಲೀಸ್ ಇನ್ಸ್ಪೆಕ್ಟರ್ ಸಂಜೀವ್ ಮಹಾಜನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಅತ್ತಿಬೆಲೆ ಆಸ್ಪತ್ರೆಗೆ ರವಾನಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಇದನ್ನು ನೋಡಿ : ತುಮಕೂರಿನಲ್ಲಿ ಗ್ಯಾರಂಟಿ ಯೋಜನೆ ಕಾರ್ಯಾಗಾರ ಯಾರ್ ಯಾರ್ ಬಂದಿದ್ರು..?




