ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ದ್ವಿತೀಯ PUC ವಿದ್ಯಾರ್ಥಿನಿ ಮೇಲೆ ಸೋದರ ಮಾವನಿಂದ ಹಲ್ಲೆ ನಡೆದಿದೆ.

ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಪಾಳ್ಯಾ ಗ್ರಾಮದಲ್ಲಿ ದ್ವಿತೀಯ PUC ವಿದ್ಯಾರ್ಥಿನಿ ಮೇಲೆ ನಡೆದ ಹಲ್ಲೆ ಪ್ರಕರಣ ಸ್ಥಳೀಯರಲ್ಲಿ ಆತಂಕ ಉಂಟುಮಾಡಿದೆ. ಹಳೆಯ ದ್ವೇಷದ ಹಿನ್ನೆಲೆ ವಿದ್ಯಾರ್ಥಿನಿಯ ಮೇಲೆ ಕುಟುಂಬ ಸದಸ್ಯನೇ ಹಲ್ಲೆ ನಡೆಸಿರುವುದು ಮತ್ತಷ್ಟು ಚರ್ಚೆಗೆ ಕಾರಣವಾಗಿದೆ.
ಹಲ್ಲೆಗೆ ಒಳಗಾದ ವಿದ್ಯಾರ್ಥಿನಿಯನ್ನು ಪೂರ್ಣಿಮಾ ಎಂದು ಗುರುತಿಸಲಾಗಿದೆ. ದ್ವಿತೀಯ ಪಿಯುಸಿ ಪರೀಕ್ಷೆ ಮುಗಿಸಿ ಮನೆಗೆ ಬಂದಿದ್ದ ವೇಳೆ ಆಕೆಯ ಸೋದರ ಮಾವ ಸೋಮಣ್ಣ ಮನೆಗೆ ನುಗ್ಗಿ ದೊಣ್ಣೆಯಿಂದ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. “ನೀನು ಓದಬಾರದು, ಉತ್ತಮ ಭವಿಷ್ಯ ಕಟ್ಟಿಕೊಳ್ಳಬಾರದು” ಎಂದು ಹೇಳುತ್ತಾ ದಾಳಿ ನಡೆಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ.
ಇದನ್ನು ಓದಿ : ಏಪ್ರಿಲ್ 1ರಿಂದ ಬೆಂಗಳೂರು ಐತಿಹಾಸಿಕ ಕರಗ ಮಹೋತ್ಸವ
ನೆರವಿಗೆ ಬಂದ ಕುಟುಂಬಸ್ಥರ ಮೇಲೂ ಹಲ್ಲೆ
ಘಟನೆಯ ವೇಳೆ ವಿದ್ಯಾರ್ಥಿನಿಗೆ ಸಹಾಯ ಮಾಡಲು ಬಂದ ಮನೆಯವರ ಮೇಲೂ ಆರೋಪಿ ಹಲ್ಲೆ ನಡೆಸಿದ್ದಾನೆ ಎಂದು ತಿಳಿದುಬಂದಿದೆ. ಸೋದರ ಮಾವನ ಆಶ್ರಯದಲ್ಲೇ ಬೆಳೆದಿದ್ದ ವಿದ್ಯಾರ್ಥಿನಿಯ ಮೇಲೆ ಇಂತಹ ದಾಳಿ ನಡೆದಿರುವುದು ಕುಟುಂಬವನ್ನು ಬೆಚ್ಚಿಬೀಳಿಸಿದೆ.
ಆಸ್ಪತ್ರೆಗೆ ದಾಖಲಾದ ವಿದ್ಯಾರ್ಥಿನಿ
ಗಂಭೀರವಾಗಿ ಗಾಯಗೊಂಡಿರುವ ಪೂರ್ಣಿಮಾಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವೈದ್ಯರ ನಿಗಾದಲ್ಲಿ ಚಿಕಿತ್ಸೆ ಮುಂದುವರಿದಿದ್ದು, ವಿದ್ಯಾರ್ಥಿನಿಯ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.
ಈ ಪ್ರಕರಣ ಸಂಬಂಧ ಆರೋಪಿ ಸೋಮಣ್ಣ ಸೇರಿ ಒಟ್ಟು ಏಳು ಜನರ ವಿರುದ್ಧ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆ ನಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದು, ಹಲ್ಲೆಯ ನಿಖರ ಕಾರಣಗಳ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ.
ಇದನ್ನು ನೋಡಿ : SECOND PUC EXAM ಆರಂಭ – ತುಮಕೂರಲ್ಲಿ ವಿದ್ಯಾರ್ಥಿಗಳ ಜೋಶ್ ಹೇಗಿದೆ ಗೊತ್ತಾ




