
SHANVI SRIVATSAVA : ಬಿಗ್ ಬಾಸ್ ಕನ್ನಡ ಸೀಸನ್ 12 ಶೀಘ್ರದಲ್ಲೇ ಆರಂಭಗೊಳ್ಳಲಿದೆ. ಈ ಬಾರಿ ಮನೆಯೊಳಗೆ ಯಾರೆಲ್ಲ ಸ್ಪರ್ಧಿಗಳಾಗಿ ಪ್ರವೇಶಿಸುವರು ಎಂಬ ಕುತೂಹಲ ಅಭಿಮಾನಿಗಳಲ್ಲಿ ಹೆಚ್ಚಾಗಿದೆ.
ಈ ಮಧ್ಯೆ, ಸಾಮಾಜಿಕ ಜಾಲತಾಣಗಳಲ್ಲಿ ಇದೀಗ ಒಂದು ಹೆಸರು ಭಾರೀ ಚರ್ಚೆಗೆ ಗ್ರಾಸವಾಗಿದೆ. ಆ ಹೆಸರು ನಟಿ ಶಾನ್ವಿ ಶ್ರೀವಾತ್ಸವ್ ಅವರದ್ದು. ಹಲವಾರು ಮೂಲಗಳಿಂದ ಲಭ್ಯವಾದ ಮಾಹಿತಿಯ ಪ್ರಕಾರ, ಶಾನ್ವಿ ಈ ಬಾರಿ ಬಿಗ್ ಬಾಸ್ ಮನೆಯೊಳಗೆ ಕಾಲಿಡುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
ಮಾಸ್ಟರ್ಪೀಸ್, ತಾರಕ್, ಹಾಗೂ ಹಲವು ತೆಲುಗು ಚಿತ್ರಗಳಲ್ಲಿ ಅಭಿನಯಿಸಿ ಖ್ಯಾತಿ ಗಳಿಸಿದ ಶಾನ್ವಿ, ಕನ್ನಡ ಮತ್ತು ದಕ್ಷಿಣ ಭಾರತದ ಚಿತ್ರರಂಗದಲ್ಲಿ ವಿಶಿಷ್ಟ ಸ್ಥಾನ ಪಡೆದಿದ್ದಾರೆ. ಸೈಮಾ ಕ್ರಿಟಿಕ್ಸ್ ಬೆಸ್ಟ್ ಆಕ್ಟ್ರೆಸ್ ಪ್ರಶಸ್ತಿ ಪಡೆದಿರುವ ಈ ನಟಿ, ಕಳೆದ ಕೆಲ ವರ್ಷಗಳಿಂದ ತೆರೆಗೆ ದೂರ ವಾಗಿದ್ದರು. ಇದೀಗ ಬಿಗ್ ಬಾಸ್ ಹಂತವಾಗಿ ಮತ್ತೆ ಚಿತ್ರರಂಗದಲ್ಲಿ ಎಂಟ್ರಿ ಕೊಡಲು ರೆಡಿಯಾಗಿದ್ದಾರೆ.
ಶಾನ್ವಿ ಶ್ರೀವಾತ್ಸವ್ ಅವರು 1993ರ ಡಿಸೆಂಬರ್ 8ರಂದು ಉತ್ತರ ಪ್ರದೇಶದ ವಾರಾಣಸಿಯಲ್ಲಿ ಜನಿಸಿದರು. ಮುಂಬೈನ ಠಾಕೂರ್ ಕಾಲೇಜ್ ಆಫ್ ಸೈನ್ಸ್ ಅಂಡ್ ಕಾಮರ್ಸ್ನಲ್ಲಿ ಬಿಕಾಂ ಪದವಿ ಪಡೆದಿದ್ದಾರೆ. ಅವರ ತಂಗಿ ವಿಧಿಶಾ ಶ್ರೀವಾತ್ಸವ್ ಕೂಡ ನಟಿಯಾಗಿದ್ದಾರೆ.
ಈವರೆಗೆ ಬಿಗ್ ಬಾಸ್ ಕಾರ್ಯಕ್ರಮದ ಆಯೋಜಕರು ಅಥವಾ ಶಾನ್ವಿ ಅವರಿಂದ ಯಾವುದೇ ಅಧಿಕೃತ ದೃಢೀಕರಣ ಬಾರದೆ ಇದ್ದರೂ, ಸಾಮಾಜಿಕ ಮಾಧ್ಯಮಗಳಲ್ಲಿ ಈ ಕುರಿತು ಚರ್ಚೆ ಜೋರಾಗಿದೆ.




