ಇರಾನ್–ಇಸ್ರೇಲ್ ಯುದ್ಧದ ನಡುವೆಯೂ ವಿದೇಶಗಳಲ್ಲಿ ಸಿಲುಕಿರುವ ಕನ್ನಡಿಗರು ಹಾಗೂ ಭಾರತೀಯರನ್ನು ಸುರಕ್ಷಿತವಾಗಿ ಕರೆತರಲು ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಸಚಿವ Pralhad Joshi ತಿಳಿಸಿದ್ದಾರೆ.

ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ತೀವ್ರ ಪರಿಸ್ಥಿತಿಯಲ್ಲಿ ಸಿಲುಕಿರುವ ಕನ್ನಡಿಗರು ಸೇರಿದಂತೆ ಎಲ್ಲಾ ಭಾರತೀಯರನ್ನು ಸುರಕ್ಷಿತವಾಗಿ ಸ್ವದೇಶಕ್ಕೆ ಕರೆತರಲು ಕೇಂದ್ರ ಸರ್ಕಾರ ಸಿದ್ಧವಾಗಿದೆ ಎಂದು ಕೇಂದ್ರ ಸಚಿವ Pralhad Joshi ತಿಳಿಸಿದ್ದಾರೆ.
ಯುದ್ಧದ ಕಾರಣದಿಂದ ವಿದೇಶಗಳಲ್ಲಿ ನೆಲೆಸಿರುವ ಭಾರತೀಯರು ಸಂಕಷ್ಟಕ್ಕೆ ಸಿಲುಕಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ತಕ್ಷಣವೇ ರಾಯಭಾರಿ ಕಚೇರಿಗಳ ಉನ್ನತ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲಾಗಿದೆ ಎಂದು ಅವರು ಹೇಳಿದರು.

ಯಾರೂ ಆತಂಕ ಪಡಬೇಕಿಲ್ಲ: ಸಚಿವರ ಅಭಯ
ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಭಾರತೀಯರ ಸುರಕ್ಷತೆಯನ್ನು ಪ್ರಥಮ ಆದ್ಯತೆಯಾಗಿ ಪರಿಗಣಿಸುತ್ತಿದೆ. ಕನ್ನಡಿಗರು ಮಾತ್ರವಲ್ಲ,
ವಿದೇಶಗಳಲ್ಲಿ ಇರುವ ಪ್ರತಿಯೊಬ್ಬ ಭಾರತೀಯನನ್ನೂ ಸುರಕ್ಷಿತವಾಗಿ ಕರೆತರಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಜೋಶಿ ತಿಳಿಸಿದ್ದಾರೆ.
ಹಿಂದೆ ಯುದ್ಧ ಪರಿಸ್ಥಿತಿಯಲ್ಲಿ ಉಕ್ರೇನ್ ನಲ್ಲಿ ಸಿಲುಕಿದ್ದ ಭಾರತೀಯರನ್ನು ಯಶಸ್ವಿಯಾಗಿ ಕರೆತಂದ ಅನುಭವ ಸರ್ಕಾರಕ್ಕಿದೆ ಎಂದು ಅವರು ನೆನಪಿಸಿದರು.
ಯುದ್ಧದ ಭೀಕರತೆಯಿಂದಾಗಿ ಸಂಕಷ್ಟದಲ್ಲಿರುವ ಕನ್ನಡಿಗರ ಕುರಿತು ಹಿರಿಯ ಸಚಿವರು ಮತ್ತು ರಾಯಭಾರಿ ಅಧಿಕಾರಿಗಳೊಂದಿಗೆ ತುರ್ತು ಚರ್ಚೆ ನಡೆಸಲಾಗಿದೆ. ಸಂಕಷ್ಟದಲ್ಲಿರುವ ಪ್ರತಿಯೊಬ್ಬರನ್ನೂ ಸುರಕ್ಷಿತವಾಗಿ ಕರೆತರಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.
ಇದನ್ನು ಓದಿ : ಏಪ್ರಿಲ್ 1ರಿಂದ ಬೆಂಗಳೂರು ಐತಿಹಾಸಿಕ ಕರಗ ಮಹೋತ್ಸವ

ವಿಮಾನ ಸಂಚಾರಕ್ಕೆ ಅಪಾಯ; ತಜ್ಞರ ಸಲಹೆ
ಯುದ್ಧಪೀಡಿತ ಪ್ರದೇಶಗಳಲ್ಲಿ ವಿಮಾನ ಸಂಚಾರ ಅಪಾಯಕಾರಿಯಾಗಿರುವುದರಿಂದ ತಜ್ಞರ ಸಲಹೆ ಪಡೆಯಲಾಗುತ್ತಿದೆ. ಸುರಕ್ಷಿತ ಮಾರ್ಗಗಳನ್ನು ಗುರುತಿಸಿ ಹಂತ ಹಂತವಾಗಿ ಭಾರತೀಯರನ್ನು ಸ್ಥಳಾಂತರಿಸುವ ಯೋಜನೆ ರೂಪಿಸಲಾಗುತ್ತಿದೆ.
ವಿಧಾನಪರಿಷತ್ ಸದಸ್ಯ ಭೋಜೇಗೌಡ ಸೇರಿದಂತೆ ಸಂಕಷ್ಟದಲ್ಲಿರುವ ಎಲ್ಲ ಕನ್ನಡಿಗರ ರಕ್ಷಣೆಗೆ ಸರ್ಕಾರ ಶ್ರಮಿಸುತ್ತಿದೆ ಎಂದು ಜೋಶಿ ತಿಳಿಸಿದ್ದಾರೆ.
ದುಬೈನಲ್ಲಿ ಸಿಲುಕಿದ ಕನ್ನಡಿಗರಿಗೂ ಸಹಾಯ
ದುಬೈ ನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಯೂ ಸರ್ಕಾರದ ಆದ್ಯತೆಯಾಗಿದೆ. ಯುದ್ಧ ಪರಿಸ್ಥಿತಿಯಿಂದಾಗಿ ಸದ್ಯ ವಿಮಾನ ಸಂಚಾರ ಸ್ಥಗಿತಗೊಂಡಿರುವುದರಿಂದ ವಾಪಸ್ ಕರೆತರುವ ಕಾರ್ಯ ಸ್ವಲ್ಪ ಸವಾಲಿನದ್ದಾಗಿದೆ. ಆದರೂ ಗಂಭೀರ ಪ್ರಯತ್ನಗಳು ನಡೆಯುತ್ತಿವೆ ಎಂದು ಸಚಿವರು ಹೇಳಿದ್ದಾರೆ.
ಇದನ್ನು ನೋಡಿ : SECOND PUC EXAM ಆರಂಭ – ತುಮಕೂರಲ್ಲಿ ವಿದ್ಯಾರ್ಥಿಗಳ ಜೋಶ್ ಹೇಗಿದೆ ಗೊತ್ತಾ




