Ballari ಜಿಲ್ಲೆಯ ಸಂಡೂರ ತಾಲೂಕಿನ ತಾಳೂರು ಗ್ರಾಮದಲ್ಲಿ ಹೊಸ ಅಡುಗೆ ಸಿಲಿಂಡರ್ ಜೋಡಣೆ ವೇಳೆ ಗ್ಯಾಸ್ ಲೀಕ್ ಆಗಿ ಭೀಕರ ಸ್ಫೋಟ ಸಂಭವಿಸಿದೆ…

Ballari ಜಿಲ್ಲೆಯ ಗ್ರಾಮಾಂತರ ಪ್ರದೇಶದಲ್ಲಿ ಭೀಕರ ಗ್ಯಾಸ್ ಸಿಲಿಂಡರ್ ಸ್ಫೋಟ ಸಂಭವಿಸಿ ಮನೆ ಸಂಪೂರ್ಣ ನಾಶವಾದ ಘಟನೆ ಆತಂಕ ಸೃಷ್ಟಿಸಿದೆ. ಹೊಸ ಅಡುಗೆ ಸಿಲಿಂಡರ್ ಜೋಡಣೆ ಮಾಡುವ ವೇಳೆ ಗ್ಯಾಸ್ ಸೋರಿಕೆಯಿಂದ ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ.
ಈ ಘಟನೆ ಸಂಡೂರ ತಾಲೂಕು ವ್ಯಾಪ್ತಿಯ ತಾಳೂರು ಗ್ರಾಮದಲ್ಲಿ ನಡೆದಿದೆ. ಸುಬಾನಿ ಸಾಬ್ ಅವರ ಮನೆಯಲ್ಲಿ ಹೊಸ ಸಿಲಿಂಡರ್ ಅಳವಡಿಸುವ ವೇಳೆ ಗ್ಯಾಸ್ ಲೀಕ್ ಆಗಿದ್ದು, ಕೆಲವೇ ಕ್ಷಣಗಳಲ್ಲಿ ಭೀಕರ ಸ್ಫೋಟ ಸಂಭವಿಸಿದೆ.
ಆದರೆ, ಗ್ಯಾಸ್ ಸೋರಿಕೆ ಗಮನಿಸಿದ ಮನೆಯವರು ತಕ್ಷಣ ಹೊರಗೆ ಬಂದ ಕಾರಣ ದೊಡ್ಡ ಅನಾಹುತ ತಪ್ಪಿದೆ…
ಇದನ್ನು ಓದಿ : ಪಾಕಿಸ್ತಾನದ ಶೋಯೆಬ್ ಮಲಿಕ್ ದಾಖಲೆ ಮುರಿದ Pandya

ಸ್ಫೋಟದ ತೀವ್ರತೆಗೆ ಮನೆ ಛಿದ್ರ ಛಿದ್ರ
ಸ್ಫೋಟದ ತೀವ್ರತೆ ಎಷ್ಟಿತ್ತು ಎಂದರೆ ಮನೆ ಸಂಪೂರ್ಣವಾಗಿ ಹಾನಿಗೊಳಗೊಂಡಿದ್ದು, ಗೋಡೆಗಳು ಕುಸಿದು ಬಿದ್ದಿವೆ. ಅಲ್ಲದೆ ಪಕ್ಕದ ಮನೆಯ ಗೋಡೆಯೂ ಭಾಗಶಃ ಕುಸಿದಿದೆ. ಗ್ರಾಮಸ್ಥರಲ್ಲಿ ಭಾರೀ ಆತಂಕ ಉಂಟಾಗಿದೆ.

ಮನೆ ಮಾಲೀಕ ಸುಬಾನಿ ಸಾಬ್ ಸೇರಿದಂತೆ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಗೊಂಡವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಾಣಾಪಾಯ ಸಂಭವಿಸದಿರುವುದು ಸ್ಥಳೀಯರಿಗೆ ಸಮಾಧಾನ ತಂದಿದೆ.
ಪೊಲೀಸರ ಪರಿಶೀಲನೆ – ತನಿಖೆ ಆರಂಭ
ಘಟನೆಯ ಮಾಹಿತಿ ತಿಳಿದ ತಕ್ಷಣ ತೋರಣಗಲ್ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ಯಾಸ್ ಸೋರಿಕೆಯ ನಿಖರ ಕಾರಣ ಹಾಗೂ ಸುರಕ್ಷತಾ ನಿಯಮ ಉಲ್ಲಂಘನೆ ನಡೆದಿದೆಯೇ ಎಂಬುದರ ಬಗ್ಗೆ ತನಿಖೆ ಮುಂದುವರೆದಿದೆ.
ಇದನ್ನು ನೋಡಿ : DKS | ಶಾಸಕರ ಡಿನ್ನರ್ ಮೀಟಿಂಗ್ ಬಗ್ಗೆ ಡಿ.ಕೆ ಶಿವಕುಮಾರ್ ಏನಂದ್ರು ಗೊತ್ತಾ?




