ಅಪಘಾತದಲ್ಲಿ ಗಾಯಗೊಂಡ ಯುವಕನನ್ನು BJP ಯುವ ಮುಖಂಡ ನಿಶಾಂತ್ ತಮ್ಮ ವಾಹನದಲ್ಲೇ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ…

ಚಾಮರಾಜನಗರ ಜಿಲ್ಲೆಯಲ್ಲಿ ನಡೆದ ರಸ್ತೆ ಅಪಘಾತದ ಬಳಿಕ ಗಾಯಗೊಂಡಿದ್ದ ಯುವಕನಿಗೆ ತಕ್ಷಣ ನೆರವಾಗಿ BJP ಯುವ ಮುಖಂಡ ಮಾನವೀಯತೆ ಮೆರೆದ ಘಟನೆ ಗಮನಸೆಳೆಯುತ್ತಿದೆ. ಗಾಯಾಳುವನ್ನು ತಮ್ಮದೇ ವಾಹನದಲ್ಲಿ ಆಸ್ಪತ್ರೆಗೆ ಸಾಗಿಸಿ ಪ್ರಥಮ ಚಿಕಿತ್ಸೆ ಕೊಡಿಸುವ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾರೆ.
ಚಾಮರಾಜನಗರ ಮೂಲದ ಸುಮನ್ ಎಂಬ ಯುವಕ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾನೆ. ಸ್ನೇಹಿತರೊಂದಿಗೆ ಶಿವನಸಮುದ್ರ ಮಾರಮ್ಮ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ.
ಕೊಳ್ಳೆಗಾಲ ತಾಲೂಕು ವ್ಯಾಪ್ತಿಯಲ್ಲಿ ಕಾರು ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಕಾರಿನಲ್ಲಿದ್ದ ಸುಮನ್ ತೀವ್ರವಾಗಿ ಗಾಯಗೊಂಡಿದ್ದಾರೆ.
ಇದನ್ನು ಓದಿ : ಪಾಕಿಸ್ತಾನದ ಶೋಯೆಬ್ ಮಲಿಕ್ ದಾಖಲೆ ಮುರಿದ Pandya

ಸ್ಥಳದಲ್ಲೇ ನೆರವಿಗೆ ಧಾವಿಸಿದ ನಿಶಾಂತ್
ಈ ವೇಳೆ ಹನೂರು ಕ್ಷೇತ್ರದ ಬಿಜೆಪಿ ಯುವ ಮುಖಂಡ ನಿಶಾಂತ್ ಖಾಸಗಿ ಕಾರ್ಯಕ್ರಮ ಮುಗಿಸಿ ಹಿಂದಿರುಗುತ್ತಿದ್ದಾಗ ಅಪಘಾತವನ್ನು ಗಮನಿಸಿದ್ದಾರೆ. ರಸ್ತೆಯಲ್ಲಿ ಗಾಯಗೊಂಡಿದ್ದ ಸುಮನ್ ಸ್ಥಿತಿ ಕಂಡ ಅವರು ಯಾವುದೇ ವಿಳಂಬ ಮಾಡದೆ ತಕ್ಷಣ ನೆರವಿಗೆ ಮುಂದಾದರು.
ಗಾಯಾಳುವನ್ನು ತಮ್ಮದೇ ವಾಹನದಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ದಾಖಲಿಸಿ ಚಿಕಿತ್ಸೆ ದೊರಕುವಂತೆ ನೋಡಿಕೊಂಡಿದ್ದಾರೆ. ಸಮಯಕ್ಕೆ ಸರಿಯಾಗಿ ಚಿಕಿತ್ಸೆ ದೊರೆತ ಕಾರಣ ಯುವಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದುಬಂದಿದೆ.
ನಿಶಾಂತ್ ಅವರ ಈ ಮಾನವೀಯ ಕಾರ್ಯ ಸ್ಥಳೀಯರಿಂದ ಪ್ರಶಂಸೆಗೆ ಪಾತ್ರವಾಗಿದೆ.
ಇದನ್ನು ನೋಡಿ : DKS | ಶಾಸಕರ ಡಿನ್ನರ್ ಮೀಟಿಂಗ್ ಬಗ್ಗೆ ಡಿ.ಕೆ ಶಿವಕುಮಾರ್ ಏನಂದ್ರು ಗೊತ್ತಾ?




