ಗ್ಯಾರಂಟಿ ಯೋಜನೆ ಲಾಭವನ್ನು ಶ್ರೀಮಂತರು ಪಡೆಯಬಾರದು ಎಂದು ಸಚಿವ MB Patil ಅಭಿಪ್ರಾಯಪಟ್ಟಿದ್ದಾರೆ…

ಬೆಂಗಳೂರುದಲ್ಲಿ ಗ್ಯಾರಂಟಿ ಯೋಜನೆಗಳ ಕುರಿತು ರಾಜಕೀಯ ಚರ್ಚೆಗಳು ನಡೆಯುತ್ತಿರುವ ನಡುವೆಯೇ, ರಾಜ್ಯ ಸಚಿವ MB Patil ಮಹತ್ವದ ಹೇಳಿಕೆ ನೀಡಿದ್ದಾರೆ. ಗ್ಯಾರಂಟಿ ಯೋಜನೆಗಳಿಂದ ಸರ್ಕಾರದ ಮೇಲೆ ಆರ್ಥಿಕ ಹೊರೆ ಹೆಚ್ಚುತ್ತಿದೆ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿ ಅವರು ಸ್ಪಷ್ಟನೆ ನೀಡಿದ್ದಾರೆ.
ಆಲಮಟ್ಟಿಯಲ್ಲಿ ಮಾತನಾಡಿದ ಅವರು, ಆರ್ಥಿಕವಾಗಿ ಸದೃಢವಾಗಿರುವವರು ಗ್ಯಾರಂಟಿ ಯೋಜನೆಗಳ ಲಾಭ ಪಡೆಯಬಾರದು ಎಂದು ಅಭಿಪ್ರಾಯಪಟ್ಟರು.
ಶ್ರೀಮಂತರು ಯೋಜನೆಯ ಪ್ರಯೋಜನ ಪಡೆಯುವುದು ತಪ್ಪು ಎಂಬ ಡಿ.ಕೆ. ಸುರೇಶ್ ಅವರ ಹೇಳಿಕೆಯನ್ನು ಸಮರ್ಥಿಸಿದ ಪಾಟೀಲ್, ಸ್ವಯಂ ಪ್ರೇರಿತರಾಗಿ ಯೋಜನೆಯಿಂದ ಹಿಂದೆ ಸರಿಯುವುದು ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುತ್ತದೆ ಎಂದು ಹೇಳಿದರು.
ಇದನ್ನು ಓದಿ : ಪಾಕಿಸ್ತಾನದ ಶೋಯೆಬ್ ಮಲಿಕ್ ದಾಖಲೆ ಮುರಿದ Pandya

ಡಿಕೆ ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯೆ
ಈ ಕುರಿತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಗ್ಯಾರಂಟಿ ಯೋಜನೆಗಳು ಅಭಿವೃದ್ಧಿಯ ಭಾಗವೇ ಹೊರತು ರಾಜ್ಯದ ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಿಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಗೃಹಲಕ್ಷ್ಮಿ ಮತ್ತು ಶಕ್ತಿ ಯೋಜನೆಗಳಂತಹ ಸಾಮಾಜಿಕ ಭದ್ರತಾ ಯೋಜನೆಗಳು ಜನರ ಬದುಕಿಗೆ ನೆರವಾಗುತ್ತಿವೆ ಎಂದು ಅವರು ತಿಳಿಸಿದರು. ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕಾರ್ಯಗಳು ಕುಂಟಿತವಾಗುವುದಿಲ್ಲ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯದ ಮುಖ್ಯಮಂತ್ರಿಗಳು ಹಣಕಾಸು ನಿರ್ವಹಣೆಯಲ್ಲಿ ಪರಿಣಿತರಾಗಿದ್ದು, ಹಲವು ಬಾರಿ ಬಜೆಟ್ ಮಂಡಿಸಿರುವ ಅನುಭವ ಹೊಂದಿದ್ದಾರೆ. ಆದ್ದರಿಂದ ಆರ್ಥಿಕ ಸಮತೋಲನವನ್ನು ಸಮರ್ಥವಾಗಿ ನಿರ್ವಹಿಸಲಿದ್ದಾರೆ ಎಂದು ಹೇಳಿದರು.
ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾದ ಹೇಳಿಕೆ
ಸಚಿವ ಎಂ.ಬಿ. ಪಾಟೀಲ್ ಅವರ ಈ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ಗ್ಯಾರಂಟಿ ಯೋಜನೆಗಳ ಮುಂದಿನ ದಿಕ್ಕು ಹೇಗಿರಲಿದೆ ಎಂಬುದರ ಬಗ್ಗೆ ಕುತೂಹಲ ಮೂಡಿಸಿದೆ.
ಇದನ್ನು ನೋಡಿ : DKS | ಶಾಸಕರ ಡಿನ್ನರ್ ಮೀಟಿಂಗ್ ಬಗ್ಗೆ ಡಿ.ಕೆ ಶಿವಕುಮಾರ್ ಏನಂದ್ರು ಗೊತ್ತಾ?




